Published
6 months agoon
By
UNI Kannadaನವದೆಹಲಿ, ಜ 2(ಯುಎನ್ ಐ) ದೇಶದಲ್ಲಿ ಮತ್ತೆ ಕೋವಿಡ್ ಸೋಂಕು ಪ್ರಕರಣಗಳಲ್ಲಿ ಹೆಚ್ಚಳ ಕಂಡುಬಂದಿದೆ. ಕಳೆದ 24 ಗಂಟೆಗಳಲ್ಲಿ 27,553 ಹೊಸದಾಗಿ ಪ್ರಕರಣಗಳು ಪತ್ತೆಯಾಗಿವೆ. 284 ಮಂದಿ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.
ಪ್ರಸ್ತುತ ದೇಶದಲ್ಲಿ ಒಟ್ಟು 1,22,801 ಸಕ್ರಿಯ ಪ್ರಕರಣಗಳಿದ್ದು, ನಿನ್ನೆ 9,249 ಮಂದಿ ಚೇತರಿಸಿಕೊಂಡಿದ್ದು, ಈವರೆಗೆ ದೇಶದಲ್ಲಿ 3,42,84,561 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಚೇತರಿಕೆ ದರ ಶೇ. 98.27 ರಷ್ಟಿದೆ.
ಕಳೆದೊಂದು ದಿನದಲ್ಲಿ 284 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದರಿಂದ ಒಟ್ಟು ಸಾವನ್ನಪ್ಪಿದವರ ಸಂಖ್ಯೆ 4,81,770ಕ್ಕೆ ತಲುಪಿದೆ. ಕಳೆದ ಒಂದೂವರೆ ತಿಂಗಳಿನಿಂದ ಹೊಸ ಕೊರೊನಾ ವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿತ್ತು. ಇದೀಗ ಮತ್ತೆ ಏರತೊಡಗಿದೆ. ನಿನ್ನೆ ದೆಹಲಿಯಲ್ಲಿ – 2,716 ಹಾಗೂ ಮಹಾರಾಷ್ಟ್ರ -9,170, ಕೇರಳ- 2,435, ತಮಿಳುನಾಡು- 1,489, ಪಶ್ಚಿಮ ಬಂಗಾಳ- 4,512 ಹೊಸದಾಗಿ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.
ಡಿಸೆಂಬರ್ 2 ರಂದು ಕರ್ನಾಟಕದಲ್ಲಿ ಮೊದಲ ಒಮಿಕ್ರಾನ್ ಪ್ರಕರಣ ಪತ್ತೆಯಾಗಿತ್ತು. ಭಾರತದಲ್ಲಿ ಸದ್ಯಕ್ಕೆ ಒಟ್ಟು 1,525 ಒಮಿಕ್ರಾನ್ ಪ್ರಕರಣಗಳು ವರದಿಯಾಗಿದ್ದು, ಈ ಪೈಕಿ 560 ಮಂದಿ ಸೋಂಕಿತರು ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.