Connect with us


      
ಆರೋಗ್ಯ

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 33 ಸಾವಿರ ದಾಟಿದ ಕೊರೊನಾ … ಓಮಿಕ್ರಾನ್‌ ಬಾಧಿತರ ಸಂಖ್ಯೆ 1700

UNI Kannada

Published

on

ನವದೆಹಲಿ, ಜ 3(ಯುಎನ್‌ ಐ) -ದೇಶಾದ್ಯಂತ ಮತ್ತೆ ಕೊರೊನಾ ಸಾಂಕ್ರಾಮಿಕ ಪ್ರಕರಣಗಳ ಸಂಖ್ಯೆಯಲ್ಲಿ ಭಾರಿ ಏರಿಕೆ ಕಂಡು ಬರುತ್ತಿದೆ. ಕಳೆದ 24 ಗಂಟೆಯಲ್ಲಿ 33,750 ಹೊಸ ಕೋವಿಡ್​​ ಪ್ರಕರಣಗಳು ಪತ್ತೆಯಾಗಿದ್ದು, 123 ಮಂದಿ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ದೇಶದಲ್ಲಿ ಸದ್ಯಕ್ಕೆ ಒಟ್ಟು 1,45,582 ಸಕ್ರಿಯ ಪ್ರಕರಣಗಳಿವೆ. ಕಳೆದ 24 ಗಂಟೆಗಳಲ್ಲಿ 10,846 ಮಂದಿ ಸೋಂಕಿತರು ಚೇತರಿಸಿಕೊಂಡಿದ್ದು, ದೇಶದಲ್ಲಿ ಈವರೆಗೆ ಒಟ್ಟು 3,42,95,407 ಸೋಂಕಿತರು ಗುಣಮುಖರಾಗಿದ್ದಾರೆ.

ಕಳೆದೊಂದು ದಿನದಲ್ಲಿ 123 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಇದರಿಂದಾಗಿ ದೇಶದಲ್ಲಿ ಒಟ್ಟು ಮೃತಪಟ್ಟವರ ಸಂಖ್ಯೆ 4,81,893ಕ್ಕೆ ತಲುಪಿದೆ. ಕಳೆದ ಒಂದೂವರೆ ತಿಂಗಳಿನಿಂದ ಹೊಸ ಕೊರೊನಾ ಸೋಂಕಿತ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿದ್ದವು. ಇದೀಗ ಮತ್ತೆ ಏರತೊಡಗಿದೆ.

ನಿನ್ನೆ ದೆಹಲಿಯಲ್ಲಿ 3,194 , ಮಹಾರಾಷ್ಟ್ರದಲ್ಲಿ 11,877 , ಕರ್ನಾಟಕದಲ್ಲಿ 1,187 ಹೊಸ ಸೋಂಕಿತ ಪ್ರಕರಣಗಳು ದೃಢಪಟ್ಟಿವೆ. ಆದರೆ ಶೇ.28ರಷ್ಟು ಕೋವಿಡ್​ ಕೇಸ್​ಗಳು ಮಹಾರಾಷ್ಟ್ರದಲ್ಲಿ ಏರಿಕೆ ಕಂಡಿದ್ದು, ಆತಂಕಕ್ಕೆ ಎಡೆ ಮಾಡಿಕೊಟ್ಟಿದೆ. ಈ ನಡುವೆ ಮಹಾರಾಷ್ಟ್ರದಲ್ಲಿ ಅತೀವೇಗದಿಂದ ಒಮಿಕ್ರಾನ್​ ಅಬ್ಬರಿಸುತ್ತಿದೆ. ಶುರುಮಾಡಿಕೊಂಡಿದೆ.

ದೇಶದಲ್ಲಿ ಒಮಿಕ್ರಾನ್ ಸಂಖ್ಯೆ 1,700 ಇದೆ. ಈ ಪೈಕಿ 639 ಚೇತರಿಸಿಕೊಂಡು ಬಿಡುಗಡೆಗೊಂಡಿದ್ದಾರೆ. 510 ಒಮಿಕ್ರಾನ್ ಪ್ರಕರಣಗಳೊಂದಿಗೆ ಮಹಾರಾಷ್ಟ್ರ ಅಗ್ರಸ್ಥಾನದಲ್ಲಿದೆ, 351 ಪ್ರಕರಣಗಳೊಂದಿಗೆ ದೆಹಲಿ ನಂತರದ ಸ್ಥಾನದಲ್ಲಿದೆ. ಇದುವರೆಗೆ ಕರ್ನಾಟಕದಲ್ಲಿ 76 ಒಮಿಕ್ರಾನ್​ ಪ್ರಕರಣಗಳು ಪತ್ತೆಯಾಗಿವೆ.

Share