Published
6 months agoon
By
UNI Kannadaಬೆಂಗಳೂರು, ಜ ೪(ಯುಎನ್ ಐ) ದೇಶದಲ್ಲಿ ಈವರೆಗೆ ಒಟ್ಟು ಒಂದು ಸಾವಿರದ ೮೯೨ ಒಮಿಕ್ರಾನ್ ರೂಪಾಂತರಿ ಪ್ರಕರಣಗಳು ವರದಿಯಾಗಿವೆ.
ಈ ಪೈಕಿ ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ೫೬೮ ಪ್ರಕರಣಗಳು ಪತ್ತೆಯಾಗಿವೆ. ನಂತರ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ೩೮೨ ಪ್ರಕರಣಗಳು ವರದಿಯಾಗಿವೆ. ಕೇರಳದಲ್ಲಿ ೧೮೫, ರಾಜಸ್ತಾನದಲ್ಲಿ ೧೭೪ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ. ಈವರೆಗೆ ೭೬೬ ಮಂದಿ ಸೋಂಕಿತರು ಚೇತರಿಸಿಕೊಂಡು ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ.