Connect with us


      
ದೇಶ

ಪ್ರಚೋದನಕಾರಿ ಭಾಷಣ ಆರೋಪ.. ಯತಿ ನರಸಿಂಗಾನಂದ ಬಂಧನ

UNI Kannada

Published

on

ಹರಿದ್ವಾರ, ಜ 16 ( ಯುಎನ್‌ ಐ) ಹರಿದ್ವಾರ ‘ಧರ್ಮ ಸಂಸದ್​’ನಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಡಿ ಧಾರ್ಮಿಕ ನಾಯಕ ಯತಿ ನರಸಿಂಗಾನಂದ ಅವರನ್ನು ಹರಿದ್ವಾರ ಪೊಲೀಸರು ಶನಿವಾರ ಬಂಧಿಸಿದ್ದಾರೆ.

ಕಳೆದ ತಿಂಗಳು ಹರಿದ್ವಾರದಲ್ಲಿ ನಡೆದ ಧರ್ಮ ಸಂಸದ್‌ನಲ್ಲಿ ಮುಸ್ಲಿಮರ ಹತ್ಯಾಕಾಂಡಕ್ಕೆ ಕರೆ ನೀಡುವ ಭಾಷಣ ಮಾಡಿದ್ದರು ಎಂದು ಆರೋಪಿಸಲಾಗಿತ್ತು. ಈ ಪ್ರಕರಣ ಸಂಬಂಧ ಉತ್ತರ ಪ್ರದೇಶ ಕೇಂದ್ರ ಶಿಯಾ ವಕ್ಫ್ ಮಂಡಳಿಯ ಮಾಜಿ ಅಧ್ಯಕ್ಷ ವಸೀಂ ರಿಜ್ವಿ ಅಲಿಯಾಸ್ ಜಿತೇಂದ್ರ ನಾರಾಯಣ ತ್ಯಾಗಿಯನ್ನು ಜ.13ರಂದು ಬಂಧಿಸಲಾಗಿತ್ತು. ಬಳಿಕ ಪ್ರಕರಣದಲ್ಲಿ ಇದು ಎರಡನೇ ಬಂಧನವಾಗಿದೆ.

ದ್ವೇಷ ಭಾಷಣದ ವಿರುದ್ಧ ಯತಿ ನರಸಿಂಗಾನಂದ ಸೇರಿದಂತೆ 10ಕ್ಕೂ ಹೆಚ್ಚುಮಂದಿಯ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಹರಿದ್ವಾರ ಧರ್ಮ ಸಂಸದ್‌ನಲ್ಲಿ ನಡೆದ ಭಾಷಣಗಳ ಬಗ್ಗೆ ಸ್ವತಂತ್ರ ತನಿಖೆ ಕೋರಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಉತ್ತರಾಖಂಡ ಹಾಗೂ ದೆಹಲಿ ಪೊಲೀಸರಿಗೆ ನೋಟಿಸ್ ಜಾರಿ ಮಾಡಿತ್ತು.

Share