Connect with us


      




ಕರ್ನಾಟಕ

ಡಿಕೆ ಶಿವಕುಮಾರ್ ಗೆ ಕೋರ್ಟ್ ನಿಂದ ವಾರೆಂಟ್

Vanitha Jain

Published

on

ಬೆಂಗಳೂರು: ಏಪ್ರಿಲ್ 22 (ಯು.ಎನ್.ಐ.) ಕರೋನ ನಿಯಮ ಉಲ್ಲಂಘನೆ ಮಾಡಿ ಪ್ರತಿಭಟನೆ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ಹೈಕೋರ್ಟ್ ವಾರೆಂಟ್ ಜಾರಿ ಮಾಡಿದೆ.

ಈ ಬಗ್ಗೆ ನಗರದ ಸದಾಶಿವನಗರದಲ್ಲಿ ಮಾತನಾಡಿದ ಅವರು, ರೈತರ ಪ್ರತಿಭಟನೆ ಮತ್ತು ಪೆಟ್ರೋಲ್ ಡಿಸೇಲ್ ದರ ಏರಿಕೆ ಪ್ರತಿಭಟನೆ ಭಾಗಿ ಹಿನ್ನೆಲೆ ನನಗೆ ಹೈಕೋರ್ಟ್ ವಾರೆಂಟ್ ಜಾರಿ ಮಾಡಿದೆ. ಹೀಗಾಗಿ ಕೋರ್ಟ್ ಗೆ ಹೋಗುತ್ತಿದ್ದೇನೆ ಎಂದು ಹೇಳಿದರು.

ಡಿಕೆ ಶಿವಕುಮಾರ್ ಸೇರಿ ಕೆಲವು ಕಾಂಗ್ರೆಸ್ ಮುಖಂಡರು ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಪ್ರತಿಭಟನೆ ಕೈಗೊಂಡಿದ್ದರು.

Share