Connect with us


      
ದೇಶ

ಭಾರತ ಇಸ್ಲಾಮಿಕ್ ರಾಷ್ಟ್ರವಾಗುವುದ ತಪ್ಪಿಸಲು ಹಿಂದುಗಳು ಹೆಚ್ಚು ಮಕ್ಕಳಿಗೆ ಜನ್ಮ ನೀಡಿ: ಯತಿ ನರಸಿಂಗಾನಂದ ಕರೆ

Vanitha Jain

Published

on

ನವದೆಹಲಿ: ಏಪ್ರಿಲ್ 18 (ಯು.ಎನ್.ಐ.) ಭಾರತವು ಇಸ್ಲಾಮಿಕ್ ರಾಷ್ಟ್ರವಾಗುವುದನ್ನು ತಪ್ಪಿಸಲು ಹಿಂದುಗಳು ಹೆಚ್ಚು ಮಕ್ಕಳಿಗೆ ಜನ್ಮ ನೀಡುವಂತೆ ವಿವಾದಿತ ಅರ್ಚಕ ಯತಿ ನರಸಿಂಗಾನಂದ ಕರೆ ನೀಡಿದ್ದಾರೆ.

ಹರಿದ್ವಾರದ ದ್ವೇಷ ಭಾಷಣ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಯತಿ ನರಸಿಂಗಾನಂದ ಈ ತಿಂಗಳ ಆರಂಭದಲ್ಲಿ ಮಥುರಾದಲ್ಲಿ ಮುಂದಿನ ದಶಕಗಳಲ್ಲಿ ದೇಶದಲ್ಲಿ ಹಿಂದೂಗಳ ಸಂಖ್ಯೆ ಕಡಿಮೆಯಾಗುವುದನ್ನು ತಡೆಯಲು ಹಿಂದೂಗಳು ಹೆಚ್ಚು ಮಕ್ಕಳಿಗೆ ಜನ್ಮ ನೀಡಬೇಕು ಎಂದು ಮಥುರಾದಲ್ಲಿ ಈ ತಿಂಗಳ ಪ್ರಾರಂಭದಲ್ಲಿ ಮಾತನಾಡಿದ್ದು, ಇದೀಗ ವೈರಲ್ ಆಗಿದೆ.

ಅಖಿಲ ಭಾರತೀಯ ಸಂತ ಪರಿಷತ್ತಿನ ಹಿಮಾಚಲ ಪ್ರದೇಶ ಉಸ್ತುವಾರಿ ಯತಿ ಸತ್ಯದೇವಾನಂದ ಸರಸ್ವತಿ, ಹಿಂದೂಗಳು ಬಹುಸಂಖ್ಯಾತರಾಗಿರುವುದರಿಂದ ಭಾರತವು ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಆದರೆ ಮುಸ್ಲಿಮರು ಯೋಜಿತ ರೀತಿಯಲ್ಲಿ ಅನೇಕ ಮಕ್ಕಳಿಗೆ ಜನ್ಮ ನೀಡುವ ಮೂಲಕ ತಮ್ಮ ಜನಸಂಖ್ಯೆಯನ್ನು ಹೆಚ್ಚಿಸಿಕೊಳ್ಳುತ್ತಿದ್ದಾರೆ. ಅದಕ್ಕಾಗಿಯೇ, ಭಾರತವು ಇಸ್ಲಾಮಿಕ್ ರಾಷ್ಟ್ರವಾಗುವುದನ್ನು ತಪ್ಪಿಸಲು ಹಿಂದೂಗಳು ಹೆಚ್ಚಿನ ಮಕ್ಕಳಿಗೆ ಜನ್ಮ ನೀಡಬೇಕು ಎಂದು ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಮುಬಾರಕ್ ಪುರದಲ್ಲಿ ಸಂಘಟನೆಯ ಮೂರು ದಿನಗಳ ‘ಧರಮ್ ಸಂಸದ್’ ಮೊದಲ ದಿನದಲ್ಲಿ ಪ್ರತಿಪಾದಿಸಿದರು.

Share