Connect with us


      
ನ್ಯಾಯಾಲಯ

ಕೋರ್ಟ್ ಆಕ್ರೋಶ ಸ್ಫೋಟಕ್ಕೆ ಕಾರಣವಾದ ವಸತಿ ಇಲಾಖೆ ಪ್ರಕರಣ

Kumara Raitha

Published

on

ಬೆಂಗಳೂರು: ನವೆಂಬರ್ 08 ಈಯು.ಎನ್.ಐ.) ಗ್ರಾಮೀಣ ಮತ್ತು ನಗರ ಪ್ರದೇಶ ಬಡವರಿಗೆ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಮನೆ ಹಂಚಿಕೆ ಪ್ರಕರಣದ ವಿಚಾರಣೆ ಸಂದರ್ಭದಲ್ಲಿ ಹೈಕೋರ್ಟ್ ಆಕ್ರೋಶ ಸ್ಫೋಟವಾಯಿತು.

ಅರ್ಜಿದಾರ ಮೊಹಮ್ಮದ್ ಇಕ್ಬಾಲ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಮನವಿಯ ವಿಚಾರಣೆ ಕೈಗೆತ್ತಿಕೊಂಡಿದ್ದ ಪೀಠದ ಮುಂದೆ ಕಳೆದ ಆದೇಶದಂತೆ ವಸತಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಖುದ್ದು ಹಾಜರಿಬೇಕಿತ್ತು. ಆದರೆ ಅವರೂ ಹಾಜರಾಗಿರಲಿಲ್ಲ. ಇದರಿಂದ ಪೀಠ ಆಕ್ರೋಶಗೊಂಡಿತು.

ನ್ಯಾಯಾಲಯದ ಮುಂದೆ ಹಾಜರಾಗುವಂತೆ ಅಧಿಕಾರಿಗೆ ಆದೇಶಿಸಿದ್ದರೂ ಅವರು ಬರದಂತೆ ಸಲಹೆ ಮಾಡಿದವರು ಯಾರು? ನ್ಯಾಯಾಲಯದ ಆದೇಶ ಪಾಲಿಸುವಂತೆ ಸಲಹೆ ಮಾಡುವುದು ನಿಮ್ಮ (ಸರ್ಕಾರಿ ವಕೀಲ) ಜವಾಬ್ದಾರಿ. ನೀವು ಏನು ಮಾಡುತ್ತಿದ್ದಿರಿ? ನಿಮ್ಮ ಪ್ರತಿಕ್ರಿಯೆ ದಾಖಲಿಸಿಲ್ಲ. ಅನುಪಾಲನಾ ವರದಿ ಸಲ್ಲಿಸಿಲ್ಲ. ಅಧಿಕಾರಿ ಹಾಜರಿರಬೇಕು ಎಂದು ನಿರ್ದಿಷ್ಟವಾಗಿ ಆದೇಶಿಸಿದರೂ ಅದನ್ನು ಪಾಲಿಸಿಲ್ಲ ಎಂದು ಸಿಟ್ಟಿನಿಂದ ಪ್ರತಿಕ್ರಿಯಿಸಿತು.

ಪ್ರತಿಕ್ರಿಯಿ ಸಿದ್ಧವಾಗಿದೆ ಎಂದು ನೀವು ಹೇಳುತ್ತಿದ್ದೀರಿ. ಅದನ್ನು ನೀವೆ ಇಟ್ಟುಕೊಳ್ಳಿ. ನಿಮ್ಮ ಜೇಬಿಗೆ ಹಾಕಿಕೊಳ್ಳಿ. ಇಂಥ ನಡವಳಿಕೆ ಏಕೆ? ಅಧಿಕಾರಿಯ ಖುದ್ದು ಹಾಜರಾತಿಗೆ ನೀವೇಕೆ ಸೂಚಿಸಿಲ್ಲ? ಅಧಿಕಾರಿಯನ್ನು ಪೊಲೀಸ್ ಮಹಾನಿರ್ದೇಶಕರು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸುವಂತೆ ಆದೇಶ ಹೊರಡಿಸಲು ನೀವೇಕೆ ನಮ್ಮನ್ನು ಪ್ರೇರೇಪಿಸುತ್ತಿದ್ದೀರಿ? ನ್ಯಾಯಾಲಯವನ್ನು ಇಷ್ಟು ಲಘುವಾಗಿ ಏಕೆ ಪರಿಗಣಿಸಿದ್ದೀರಿ? ಇದು ಅತ್ಯಂತ ಆಘಾತ ಉಂಟು ಮಾಡಿದೆ” ಎಂದು ನ್ಯಾಯಾಲಯ ತೀವ್ರ ಬೇಸರ ವ್ಯಕ್ತಪಡಿಸಿತು.

“ನ್ಯಾಯಾಲಯದ ಆದೇಶ ಪಾಲಿಸಿದ ಇಂಥ ನಡತೆಯನ್ನು ನಾನು ಯಾವುದೇ ಹೈಕೋರ್ಟ್ನಲ್ಲಿ ನೋಡಿಲ್ಲ. ಅಡ್ವೊಕೇಟ್ ಜನರಲ್ ಅವರು ಮಧ್ಯಾಹ್ನ ಖುದ್ದಾಗಿ ನ್ಯಾಯಾಲಯದಲ್ಲಿ ಹಾಜರಾಗಿ ಉತ್ತರಿಸಬೇಕು. ನಿಮ್ಮ (ಹೆಚ್ಚುವರಿ ಸರ್ಕಾರಿ ವಕೀಲರು) ವಾದವನ್ನು ನಾವು ಆಲಿಸುವುದಿಲ್ಲ” ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿ ಪೀಠವು ವಿಚಾರಣೆಯನ್ನು ಮುಂದೂಡಿತ್ತು.

ಸುತ್ತೋಲೆ ಹೊರಡಿಸಲು ಸರ್ಕಾರಕ್ಕೆ ಆದೇಶ:

ನಗರ ಮತ್ತು ಗ್ರಾಮೀಣ ಪ್ರದೇಶದ ಬಡವರಿಗೆ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಮನೆ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಸತಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ರವಿಶಂಕರ್ ಅವರು ನ್ಯಾಯಾಲಯದ ಮುಂದೆ ಹಾಜರಾಗಿ ಪೀಠಕ್ಕೆ ಸಮಸ್ಯೆ ಮಾಡಿರುವುದಕ್ಕೆ ಕ್ಷಮೆಯಾಚಿಸಿದ್ದಾರೆ.

ಅಧಿಕಾರಿಗಳ ಖುದ್ದು ಹಾಜರಾತಿಗೆ ಸಂಬಂಧಿಸಿದಂತೆ ಮುಂದೆ ನ್ಯಾಯಾಲಯದ ಆದೇಶಗಳನ್ನು ಪಾಲಿಸುವ ಖಾತರಿಯನ್ನು ಅಡ್ವೊಕೇಟ್ ಜನರಲ್ (ಎಜಿ) ನೀಡಿದ್ದಾರೆ. ಈ ಸಂಬಂಧ ಅಗತ್ಯ ಸುತ್ತೋಲೆ ಹೊರಡಿಸಲು ಸರ್ಕಾರಕ್ಕೆ ಎಜಿ ಸಲಹೆ ಮಾಡಲಿದ್ದು, ನ್ಯಾಯಾಲಯಕ್ಕೆ ಸಮಸ್ಯೆಯಾಗದಂತೆ ನೋಡಿಕೊಳ್ಳಲಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದ ಆಕ್ಷೇಪಣೆ ಸಿದ್ಧವಾಗಿದ್ದು, ಅದನ್ನು ರಿಜಿಸ್ಟ್ರಿಗೆ ಸಲ್ಲಿಸಲಾಗುವುದು ಎಂದು ಸರ್ಕಾರಿ ವಕೀಲರು ತಿಳಿಸಿದ್ದಾರೆ. ಆಕ್ಷೇಪಣೆಯನ್ನು ಅರ್ಜಿದಾರರಿಗೆ ನೀಡಲಾಗಿದ್ದು, ಅರ್ಜಿದಾರರು ಎರಡು ವಾರಗಳಲ್ಲಿ ಪ್ರತ್ಯುತ್ತರ ದಾಖಲಿಸಬೇಕು” ಎಂದು ಆದೇಶದಲ್ಲಿ ದಾಖಲಿಸಿಕೊಂಡಿರುವ ಪೀಠವು ಎರಡು ವಾರಗಳ ಕಾಲ ವಿಚಾರಣೆ ಮುಂದೂಡಿತು.

Share