ಕನ್ನಡ, ತಮಿಳು, ತೆಲುಗು, ಮಲಯಾಳಂ ಸಿನಿಮಾಗಳಲ್ಲಿ ಮಿಂಚುತ್ತಿರುವ ನಟಿ ಭಾವನಾ ಮೆನನ್ ಐದು ವರ್ಷಗಲ ಹಿಂದೆ ನಡೆದ ಆಘಾತಕಾರಿ ವಿಚಾರದ ಬಗ್ಗೆ ಮೌನ ಮುರಿದು, ನನ್ನ ಹೋರಾಟದ ಹಾದಿಯಲ್ಲಿ ನಾನು ಒಬ್ಬಂಟಿಯಲ್ಲ ಎಂದಿದ್ದಾರೆ.
ಐದು ವರ್ಷಗಳ ಹಿಂದೆ ನಡೆದ ಘಟನೆಯನ್ನು ಇನ್ಸ್ಟಾಗ್ರಾಮ್ನಲ್ಲಿ ಮೆಲುಕು ಹಾಕಿದ ಭಾವನಾ, ಐದು ವರ್ಷದ ಹಾದಿ ಬಲಿಪಶುವಿನಿಂದ ಬದುಕುವ ಹುಮ್ಮಸ್ಸಿನೊಂದಿಗಿನ ಹಾದಿ ಸುಲಭವಾಗಿರಲಿಲ್ಲ. ಆ ಸಂದರ್ಭದಲ್ಲಿ ಎಷ್ಟೋ ಮಂದಿ ನನ್ನನ್ನು ಹತ್ತಿಕ್ಕಲು ಪ್ರಯತ್ನಿಸಿದವು, ಅವಮಾನಿಸಿದವು. ಇನ್ನು ಕೆಲವು ಧ್ವನಿಗಳು ನನ್ನ ಪರವಾಗಿ ಮಾತನಾಡಿದವು. ಇದೆಲ್ಲವನ್ನು ನೋಡಿದಾಗ ನನ್ನ ನ್ಯಾಯದ ಹೋರಾಟದ ಹಾದಿಯಲ್ಲಿ ನಾನು ಒಬ್ಬಂಟಿಯಲ್ಲ ಎಂದೆನಿಸುತ್ತಿದೆ. ನ್ಯಾಯ ಗೆಲ್ಲಲು, ಯಾವುದೇ ಮಹಿಳೆಯು ಇಂತಹ ಹೀನಾ ಪರಿಸ್ಥಿತಿಗೆ ಒಳಗಾಗದಂತೆ ನೋಡಿಕೊಳ್ಳಲು ಮತ್ತು ತಪ್ಪಿತಸ್ಥರಿಗೆ ಶಿಕ್ಷೆಯಾಗುವಂತೆ ಮಾಡಲು ನನ್ನ ಹೋರಾಟದ ಹಾದಿ ಮುಂದುವರೆಸುತ್ತೇನೆ. ನನ್ನ ಪರವಾಗಿ ನಿಂತ ಎಲ್ಲರಿಗೂ ಧನ್ಯವಾದಗಳು ಎಂದು ಹೇಳಿದ್ದಾರೆ.
ಶಿವರಾಜ್ ಕುಮಾರ್ ಅಭಿನಯದ ಭಜರಂಗಿ 2 ಸಿನಿಮಾದಲ್ಲಿ ನಾಯಕಿ ನಟಿಯಾಗಿ ಕಾಣಿಸಿಕೊಂಡಿದ್ದ ಭಾವನಾ ಹಳೆಯ ಎಲ್ಲಾ ಕಹಿ ನೆನಪುಗಳಿಂದ ಹೊರಬಮದು ತಮ್ಮ ನಟನೆಗೆ ಮತ್ತಷ್ಟು ಜೀವ ತುಂಬುತ್ತಿದ್ದಾರೆ.