Published
1 month agoon
By
Vanitha Jainಮೈನ್ಪುರಿ: ಮೇ 17 (ಯು.ಎನ್.ಐ.) 2024ರಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ದೇಶದ ಸಮಗ್ರತೆಗೆ ಧಕ್ಕೆ ಉಂಟಾಗಲಿದೆ ಎಂದು ಸಮಾಜವಾದಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಗೋಪಾಲ್ ಯಾದವ್ ಎಚ್ಚರಿಸಿದ್ದಾರೆ.
ಮೈನ್ಪುರಿಯ ಕರ್ಹಾಲ್ ಪಟ್ಟಣದಲ್ಲಿ ಪಕ್ಷದ ಬೆಂಬಲಿಗರನ್ನು ಭೇಟಿ ಮಾಡಿದ ಯಾದವ್, ಕೇಂದ್ರ ಮತ್ತು ಯುಪಿ ಸರ್ಕಾರದ ಕೆಲಸವನ್ನು ಪ್ರಶ್ನಿಸಿ ಬಿಜೆಪಿ ದೇಶದಲ್ಲಿ ದ್ವೇಷವನ್ನು ಹರಡುತ್ತಿದೆ ಎಂದು ಹೇಳಿದರು.
ಬಿಜೆಪಿಗೆ ಇರುವುದು ಒಂದೇ ಅಜೆಂಡಾ. ಅದುವೇ ಸಮಾಜದಲ್ಲಿ ದ್ವೇಷವನ್ನು ಬಿತ್ತುವುದು. ಕೇಂದ್ರ ಮತ್ತು ಉತ್ತರ ಪ್ರದೇಶದ ಸರ್ಕಾರಗಳು ಜನರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಬಿಜೆಪಿ ಕಾಳಜಿ ವಹಿಸುತ್ತಿಲ್ಲ, ಬಿಜೆಪಿ ದೇಶದಲ್ಲಿ ಕೋಮುವಾದವನ್ನು ಸೃಷ್ಟಿಸಲು ಮತ್ತು ಧರ್ಮದ ಹೆಸರಿನಲ್ಲಿ ಜನರನ್ನು ಪ್ರಚೋದಿಸಲು ಪ್ರಾರಂಭಿಸಿದೆ ಎಂದು ಹೇಳಿದರು.
ಹಣದುಬ್ಬರವು ದೇಶದಲ್ಲಿ ಗರಿಷ್ಠ ಮಟ್ಟವನ್ನು ತಲುಪಿದೆ. ಇಂಧನ ಬೆಲೆಗಳು ಮತ್ತು ಆಹಾರದ ಬೆಲೆಗಳು ಗಗನಕ್ಕೇರುತ್ತಿವೆ. ಯುಪಿಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಆಗ್ರಾದಲ್ಲಿ ಹಗಲು ಹೊತ್ತಿನಲ್ಲಿ ಆಭರಣ ವ್ಯಾಪಾರಿಯನ್ನು ಬಂದೂಕು ತೋರಿಸಿ ದರೋಡೆ ಮಾಡಲಾಗಿದ್ದು, ಪೊಲೀಸರಿಗೆ ಏನೂ ಮಾಡಲು ಸಾಧ್ಯವಾಗಲಿಲ್ಲ. ಬಡವರಿಗೆ ಪೊಲೀಸರ ನೆರವು ಸಿಗುತ್ತಿಲ್ಲ ಎಂದು ಆರೋಪಿಸಿದರು.
ಸರ್ಕಾರವು ಅಸ್ಥಿಪಂಜರಗಳನ್ನು ಅಗೆಯುವ ಮತ್ತು ಮೂಲಭೂತ ಸಮಸ್ಯೆಗಳಿಂದ ಜನರನ್ನು ಬೇರೆಡೆಗೆ ಸೆಳೆಯುವಲ್ಲಿ ನಿರತವಾಗಿದೆ ಎಂದು ಹೇಳಿದ ಅವರು, ಬಿಜೆಪಿಯ ಕೋಮುವಾದಿತನದಿಂದ ದೂರವಿರಬೇಕು ಮತ್ತು ಎಲ್ಲಾ ಸಮುದಾಯಗಳ ನಡುವೆ ಸಹೋದರತ್ವ ಕಾಪಾಡಬೇಕು ಎಂದು ಮಾಜಿ ಸಂಸದರು ಜನರನ್ನು ಒತ್ತಾಯಿಸಿದರು.
ಆಭರಣ ಅಂಗಡಿಗೆ ನುಗ್ಗಿ ದರೋಡೆ, ಮಾಲೀಕನಿಗೆ ಗುಂಡೇಟು; ಸಿಸಿಕ್ಯಾಮೆರಾದಲ್ಲಿ ಕೃತ್ಯ ಸೆರೆ
ಸಿಧು ಮೂಸೆವಾಲಾರ ಕೊನೆಯ ಹಾಡನ್ನ ಯೂಟ್ಯೂಬ್ ನಿಂದ ತೆಗೆದುಹಾಕಿರೋದೇಕೆ?
ಹಕ್ಕುಗಳನ್ನು ರಕ್ಷಿಸುವುದು ಅಪರಾಧವಲ್ಲ; ತೀಸ್ತಾ ಸೆತಲ್ವಾಡ್ ಪರ ವಿಶ್ವಸಂಸ್ಥೆ ಅಧಿಕಾರಿ ದನಿ
“ರಾಷ್ಟ್ರೀಯ ಭದ್ರತೆಗೆ ಡ್ರಗ್ಸ್ ದೊಡ್ಡ ಸವಾಲು” : ಷಾ
ಸಿಎಂ ಭೇಟಿಯಾಗಲು ಪ್ರವಾಹದ ನೀರಲ್ಲಿ ಪರದಾಡಿದ ಅಸ್ಸಾಂ ಯುವಕ
ಸಿಎಂ ಯೋಗಿ ಆದಿತ್ಯನಾಥ್ ಪ್ರಯಾಣಿಸ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ