Connect with us


      
ದೇಶ

“ಪ್ರಧಾನಿಗೆ ಭದ್ರತೆ ಕೊಡಲು ಆಗದಿದ್ದರೆ ರಾಜಿನಾಮೆ ನೀಡಿ” – ಕ್ಯಾಪ್ಟನ್ ಅಮರಿಂದರ್ ಸಿಂಗ್

Iranna Anchatageri

Published

on

ಚಂಡೀಗಢ: ಜನವರಿ 05 (ಯು.ಎನ್.ಐ.) ಪ್ರಧಾನಿ ಮೋದಿಗೆ ಭದ್ರತೆ ಕೊಡಲು ಆಗದಿದ್ದರೆ ಮುಖ್ಯಮಂತ್ರಿ ಹುದ್ದೆ ಖಾಲಿ ಮಾಡಿ ಎಂದು ಪಂಜಾಬ್ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಆಗ್ರಹಿಸಿದ್ದಾರೆ.

ಪ್ರಧಾನಿ ಮೋದಿ ಭದ್ರತಾ ಲೋಪಕ್ಕೆ ಸಂಬಂಧಿಸಿದಂತೆ ಪಂಜಾಬ್ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಅಮರಿಂದರ್ ಸಿಂಗ್, ಭದ್ರತೆ ಹಾಗೂ ಸುಗಮ ಮಾರ್ಗವನ್ನು ಕೊಡಲು ಸಾಧ್ಯವಾಗದಿದ್ದರೆ ಸಿಎಂ ಕುರ್ಚಿಯಿಂದ ಕೆಳಗಿಳಿಯಬೇಕು ಎಂದು ಟೀಕಿಸಿದ್ದಾರೆ.

ಬಟಿಂಡಾದಿಂದ ಹುಸೇನಿವಾಲಾದಲ್ಲಿರುವ ರಾಷ್ಟ್ರೀಯ ಹುತಾತ್ಮರ ಸ್ಮಾರಕಕ್ಕೆ ಪ್ರಧಾನಿ ಭೇಟಿ ನೀಡಬೇಕಾಗಿತ್ತು. ಆದರೆ, ಈ ವೇಳೆ, ರೈತರ ಪ್ರತಿಭಟನೆಯಿಂದಾಗಿ ಪ್ರಧಾನಿ ಮೋದಿ ಪಂಜಾಬ್‌ನ ಫ್ಲೈಓವರ್ ಮೇಲೆ ಸುಮಾರು 20 ನಿಮಿಷಗಳ ಕಾಲ ಸಿಲುಕಿಕೊಂಡಿದ್ದರು. ಈ ಸಂದರ್ಭದಲ್ಲಿ ಎಸ್‌ಪಿಜಿ ಪಡೆ ಪ್ರಧಾನಿ ಕಾರಿನ ಸುತ್ತಲೂ ಶಸ್ತ್ರಾಸ್ತ್ರಗಳೊಂದಿಗೆ ರಕ್ಷಣೆ ನೀಡಿದ್ದರು.

ಪ್ರಧಾನಿ ಭದ್ರತಾ ಲೋಪ ಕುರಿತಂತೆ ಟ್ವೀಟ್ ಮಾಡಿರುವ ಪಂಜಾಬ್ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್, “ಪಂಜಾಬ್ ಮುಖ್ಯಮಂತ್ರಿ ಹಾಗೂ ಗೃಹ ಸಚಿವರಿಂದ ಪಂಜಾಬ್‌ನಲ್ಲಿ ಕಾನೂನು ಮತ್ತು ಸುವ್ಯವಸ್ಥೆಯ ಸಂಪೂರ್ಣ ವಿಫಲವಾಗಿದೆ. ಪಾಕಿಸ್ತಾನದ ಗಡಿಯಿಂದ ಕೇವಲ 10 ಕಿ.ಮೀ ದೂರದಲ್ಲಿದ್ದಾಗ ನೀವು ದೇಶದ ಪ್ರಧಾನಿಗೆ ಸುಗಮ ಮಾರ್ಗವನ್ನು ಒದಗಿಸಲು ಸಾಧ್ಯವಾಗದಿದ್ದಾಗ ನಿಮಗೆ ಕಚೇರಿಯಲ್ಲಿ ಉಳಿಯಲು ಯಾವುದೇ ಹಕ್ಕಿಲ್ಲ. ರಾಜೀನಾಮೆ ನೀಡಿ!” ಎಂದು ಸಾಮಾಜಿಕ ಮಾಧ್ಯಮದಲ್ಲಿ ಹರಿಹಾಯ್ದಿದ್ದಾರೆ.

Share