Published
4 months agoon
By
Vanitha Jainಮುಂಬೈ: ಜನೆವರಿ 17 (ಯು.ಎನ್.ಐ.) ಐಐಟಿ ಬಾಂಬೆಯ ವಿದ್ಯಾರ್ಥಿ ಸೋಮವಾರ ಮುಂಜಾನೆ ಇಲ್ಲಿನ ಪೊವೈ ಕ್ಯಾಂಪಸ್ ನಲ್ಲಿರುವ ತನ್ನ ಹಾಸ್ಟೆಲಿನ ಟೆರೇಸ್ನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮೃತ ವಿದ್ಯಾರ್ಥಿಯನ್ನು ದರ್ಶನ್ ಮಾಳವಿಯಾ (26) ಎಂದು ಗುರುತಿಸಲಾಗಿದೆ. ಮೃತ ವಿದ್ಯಾರ್ಥಿ ಖಿನ್ನತೆಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮೇಲಿನಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವುದನ್ನು ಹಾಸ್ಟೆಲ್ ಕಟ್ಟಡದ ಭದ್ರತಾ ಸಿಬ್ಬಂದಿ ಗಮನಿಸಿ ಹಾಸ್ಟೆಲ್ ಸಿಬ್ಬಂದಿಯ ಗಮನಕ್ಕೆ ತಂದಿದ್ದಾರೆ. ನಂತರ ಪೊಲೀಸರಿಗೆ ಮಾಹಿತಿ ನೀಡಲಾಯಿತು. ಮಾಳವಿಯಾ ಅವರನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಆಸ್ಪತ್ರೆಗೆ ದಾಖಲಿಸುವ ಮೊದಲೇ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಮಧ್ಯಪ್ರದೇಶ ಮೂಲದ ಮೃತ ವಿದ್ಯಾರ್ಥಿ ಕಳೆದ ಜುಲೈನಿಂದ ಪ್ರತಿಷ್ಠಿತ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಸ್ನಾತಕೋತ್ತರ ಕೋರ್ಸ್ ಓದುತ್ತಿದ್ದರು. ಸಾವಿನ ಬಗ್ಗೆ ಅವರ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಪೊಲೀಸರು ಆಕಸ್ಮಿಕ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ವಿದ್ಯಾರ್ಥಿಯು ತನ್ನ ಹಾಸ್ಟೆಲ್ ಕೊಠಡಿಯಲ್ಲಿನ ಬೋರ್ಡ್ನಲ್ಲಿ ತಾನು ಖಿನ್ನತೆಗೆ ಚಿಕಿತ್ಸೆ ಪಡೆಯುತ್ತಿರುವುದಾಗಿ ಬರೆದಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊವೈ ಪೊಲೀಸ್ ಠಾಣೆಯ ಹಿರಿಯ ಪೊಲೀಸ್ ಅಧಿಕಾರಿ ಬುಧನ್ ಸಾವಂತ್ ತಿಳಿಸಿದ್ದಾರೆ.
ರಾಂಬನ್-ಬನಿಹಾಲ್ ಸುರಂಗ ಕುಸಿತ: ತನಿಖೆಗೆ ಕೇಂದ್ರದಿಂದ ಸಮಿತಿ ರಚನೆ
“ನೆಹರೂ ಅವರು ಅಸ್ಸಾಂ ಅನ್ನು ಪಾಕಿಸ್ತಾನಕ್ಕೆ ಕೊಡಲು ಮುಂದಾಗಿದ್ದರು”
ಯುಪಿ ರಸ್ತೆ ಅಪಘಾತದಲ್ಲಿ 9 ಮಂದಿ ಸಾವು: ಧನಸಹಾಯ ಘೋಷಿಸಿದ ಮೋದಿ
ನಮಗೆ ಯಾವಾಗಲೂ ಜನರು ಮೊದಲು: ಪೆಟ್ರೋಲ್ ಬೆಲೆ ಇಳಿಸಿದ ಬಳಿಕ ಪ್ರಧಾನಿ ಮೋದಿ ಹೇಳಿಕೆ
ಜನಸಾಮಾನ್ಯರಿಗೆ ಗುಡ್ ನ್ಯೂಸ್; ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ!
ಜ್ಞಾನವಾಪಿ ಮಸೀದಿಯ ಶಿವಲಿಂಗದ ಬಗ್ಗೆ ಪೋಸ್ಟ್ ಹಾಕಿದ್ದ ಪ್ರಾಧ್ಯಾಪಕರಿಗೆ ಜಾಮೀನು ಮಂಜೂರು