Connect with us


      




ಕ್ರೀಡೆ

ಬೆಂಗಳೂರಲ್ಲಿ ಗೆದ್ದರೆ ಇತಿಹಾಸ! ಯಾರಿಗೂ ಸಿಗದ ಗೌರವ ಪಂತ್ ಗೆ!? ಪಿಚ್ ಹೇಗಿರಲಿದೆ?

Iranna Anchatageri

Published

on

ಬೆಂಗಳೂರು: ಜೂನ್ 19 (ಯು.ಎನ್.ಐ.) ಇಂದು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಐದನೇ ಮತ್ತು ಅಂತಿಮ ಟಿ20 ಪಂದ್ಯ ನಡೆಯಲಿದೆ. ಐದು ಪಂದ್ಯಗಳ ಸರಣಿ ಸದ್ಯ 2-2ರಲ್ಲಿ ಸಮಬಲಗೊಂಡಿದೆ. ಇಂದು ಟೀಂ ಇಂಡಿಯಾಗೆ ಇತಿಹಾಸ ಸೃಷ್ಟಿಸುವ ಅವಕಾಶ ಸಿಕ್ಕಿದೆ. ಇಲ್ಲಿಯವರೆಗೆ, ಭಾರತದ ನೆಲದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಟಿ20 ಸರಣಿಯಲ್ಲಿ ಟೀಂ ಇಂಡಿಯಾ ಸೋಲಿಸಲು ಸಾಧ್ಯವಾಗಿಲ್ಲ.

ಮೊದಲ ಬಾರಿಗೆ 2015-16ರಲ್ಲಿ ಟಿ20 ಸರಣಿ ಆಡಲು ದಕ್ಷಿಣ ಆಫ್ರಿಕಾ ತಂಡ ಭಾರತಕ್ಕೆ ಬಂದಿತ್ತು. 3 ಪಂದ್ಯಗಳ ಈ ಸರಣಿಯಲ್ಲಿ ಭಾರತ 2-0 ಅಂತರದಿಂದ ಸೋಲನುಭವಿಸಬೇಕಾಯಿತು. ಕೊನೆಯ ಟಿ20 ಪಂದ್ಯ ಮಳೆಯಿಂದಾಗಿ ರದ್ದಾಗಿತ್ತು. ಈ ಸರಣಿಯಲ್ಲಿ ಮಹೇಂದ್ರ ಸಿಂಗ್ ಧೋನಿ ತಂಡದ ನಾಯಕರಾಗಿದ್ದರು.

ಇದಾದ ಬಳಿಕ ದಕ್ಷಿಣ ಆಫ್ರಿಕಾ ತಂಡವು 2019-20ರಲ್ಲಿ T20 ಸರಣಿಯನ್ನು ಆಡಲು ಭಾರತಕ್ಕೆ ಬಂದಿತ್ತು. ಈ ಸರಣಿಯಲ್ಲಿ ಭಾರತ ತಂಡದ ನಾಯಕತ್ವವನ್ನು ವಿರಾಟ್ ಕೊಹ್ಲಿ ವಹಿಸಿಕೊಂಡಿದ್ದರು. 3 ಪಂದ್ಯಗಳ ಸರಣಿ 1-1ರಲ್ಲಿ ಸಮಬಲಗೊಂಡು ಒಂದು ಪಂದ್ಯ ಮಳೆಯಿಂದಾಗಿ ರದ್ದಾಯಿತು.

ಇದೀಗ ಇಂದು ಟೀಂ ಇಂಡಿಯಾಕ್ಕೆ ಚೊಚ್ಚಲ ನಾಯಕತ್ವ ವಹಿಸಿರುವ ರಿಷಬ್ ಪಂತ್ ಗೆ ಪಂದ್ಯ ಗೆಲ್ಲುವ ಜೊತೆಗೆ ಇತಿಹಾಸದಲ್ಲಿ ಹೆಸರು ದಾಖಲಿಸುವ ಸುವರ್ಣಾವಕಾಶ ಒದಗಿ ಬಂದಿದೆ.

ಹವಾಮಾನ
ಇಂದು ಸಹ ಐದನೇ ಟಿ20 ಪಂದ್ಯದಲ್ಲಿ ಮಳೆಯೇ ನಿರ್ಣಾಯಕವಾಗಲಿದೆ. ಹವಾಮಾನ ಇಲಾಖೆ ವರದಿ ಪ್ರಕಾರ ಬೆಂಗಳೂರಿನಲ್ಲಿ ಭಾನುವಾರ ದಿನವಿಡೀ ಮಳೆಯಾಗುವ ಸಾಧ್ಯತೆ ಇದೆ. Accuweather.com ಪ್ರಕಾರ, ಬೆಂಗಳೂರಿನಲ್ಲಿ ಭಾನುವಾರ ಸಂಜೆ ತಾಪಮಾನ 21 ಡಿಗ್ರಿ ಇರಲಿದ್ದು, ಮಳೆಯ ಸಂಭವನೀಯತೆ ಶೇಕಡಾ 50 ಕ್ಕಿಂತ ಹೆಚ್ಚು. ಅದೇ ಸಮಯದಲ್ಲಿ, ಗಾಳಿಯ ವೇಗ ಗಂಟೆಗೆ 28 ​​ಕಿ.ಮೀ. ಇರಲಿದೆ.

ಪಿಚ್ ಹೇಗಿರಲಿದೆ?
ಚಿನ್ನಸ್ವಾಮಿ ಕ್ರೀಡಾಂಗಣದ ಪಿಚ್ ಬ್ಯಾಟ್ಸ್‌ಮನ್‌ಗಳಿಗೆ ನೆರವಾಗಲಿದೆ. ಇಂತಹ ಪರಿಸ್ಥಿತಿಯಲ್ಲಿ ಟಾಸ್ ಗೆದ್ದ ನಾಯಕ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಬೇಕು, ಏಕೆಂದರೆ ಇಲ್ಲಿ ಗುರಿ ಬೆನ್ನಟ್ಟುವುದು ತುಂಬಾ ಸುಲಭ. ಇನ್ನು ಸ್ಪಿನ್ ಬೌಲರ್‌ಗಳಿಗೆ ಈ ಪಿಚ್ ಸಹಕಾರ ನೀಡುವ ಸಾಧ್ಯತೆ ಇದೆ.

ಎರಡು ತಂಡಗಳ ನಡುವೆ ಇದುವರೆಗೆ 19 ಟಿ20 ಅಂತರಾಷ್ಟ್ರೀಯ ಪಂದ್ಯಗಳು ನಡೆದಿದ್ದು, ಅದರಲ್ಲಿ ಟೀಂ ಇಂಡಿಯಾ 11 ಪಂದ್ಯಗಳನ್ನು ಗೆದ್ದಿದೆ . ಮತ್ತೊಂದೆಡೆ, ದಕ್ಷಿಣ ಆಫ್ರಿಕಾ ಎಂಟು ಪಂದ್ಯಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಎರಡೂ ತಂಡಗಳು ಎಂಟು ಬಾರಿ ಭಾರತದ ನೆಲದಲ್ಲಿ ಮುಖಾಮುಖಿಯಾಗಿದ್ದು, ಅದರಲ್ಲಿ ದಕ್ಷಿಣ ಆಫ್ರಿಕಾ ಐದು ಪಂದ್ಯಗಳನ್ನು ಗೆದ್ದಿದೆ, ಭಾರತ ಮೂರು ಪಂದ್ಯಗಳನ್ನು ಗೆದ್ದುಕೊಂಡಿದೆ.

ಚಿನ್ನಸ್ವಾಮಿ ಕ್ರೀಡಾಂಗಣ
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ 5 ಪಂದ್ಯಗಳನ್ನು ಆಡಿದ್ದು, ಈ ಪೈಕಿ ತಂಡ ಕೇವಲ ಎರಡರಲ್ಲಿ ಗೆದ್ದು ಮೂರು ಪಂದ್ಯಗಳಲ್ಲಿ ಸೋತಿದೆ. ಭಾರತ ಈ ಮೈದಾನದಲ್ಲಿ ಬಾಂಗ್ಲಾದೇಶ ಮತ್ತು ಇಂಗ್ಲೆಂಡ್ ತಂಡಗಳನ್ನು ಸೋಲಿಸಿದ್ದರೆ, ಪಾಕಿಸ್ತಾನ, ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧ ಸೋಲು ಕಂಡಿದೆ.

Continue Reading
Click to comment

Leave a Reply

Your email address will not be published.

Share