Connect with us


      




ಕರ್ನಾಟಕ

ಹೊಸಕೋಟೆ ಪಟ್ಟಣಕ್ಕೆ ಮೆಟ್ರೋ ರೈಲು: ಕ್ರಿಯಾ ಯೋಜನೆ ಸಿದ್ದಪಡಿಸಲು ಸೂಚನೆ

pratham

Published

on

ಬೆಂಗಳೂರು ,ಅ.29: ಹೊಸಕೋಟೆ ಪಟ್ಟಣಕ್ಕೆ ಮೆಟ್ರೋ ರೈಲು ವಿಸ್ತರಣೆ ಸಂಬಂಧ ಕ್ರಿಯಾ ಯೋಜನೆ ಸಿದ್ದಪಡಿಸುವಂತೆ ಪೌರಾಡಳಿತ, ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಎಂಟಿಬಿ ನಾಗರಾಜು ಅವರು ಬಿಎಂಆರ್‌ಸಿಎಲ್ ನ ವ್ಯವಸ್ಥಾಪಕ ನಿರ್ದೇಶಕ ಅಜುಂ ಪರ್ವೇಜ್ ಅವರಿಗೆ ಸೂಚನೆ ನೀಡಿದ್ದಾರೆ.

ಹೊಸಕೋಟೆ ಪಟ್ಟಣಕ್ಕೆ ಮೆಟ್ರೋ ರೈಲು ವಿಸ್ತರಣೆ ಸಂಬಂಧ  ಸಚಿವ ಎಂಟಿಬಿ ನಾಗರಾಜು ಅವರು ಇಂದು ಬಿಎಂಆರ್‌ಸಿಎಲ್ ನ ವ್ಯವಸ್ಥಾಪಕ ನಿರ್ದೇಶಕ ಅಜುಂ ಪರ್ವೇಜ್ ಅವರೊಂದಿಗೆ ವಿಧಾನ ಸೌಧದಲ್ಲಿಂದು ಸಭೆ ನಡೆಸಿದರು. ಈ ಸಂದರ್ಭದಲ್ಲಿ ಮೆಟ್ರೋ ರೈಲು ವಿಸ್ತರಣೆ ಸಂಬಂಧ ಕ್ರಿಯಾ ಯೋಜನೆಯನ್ನು ಸಿದ್ದಪಡಿಸುವುದಾಗಿ ಎಂ.ಡಿ. ಅಜುಂ ಪರ್ವೇಜ್ ಅವರು ತಿಳಿಸಿದರು.

ಆಗಸ್ಟ್ ೨೮ ರಂದು ಮೈಸೂರು-ಕೆಂಗೇರಿ ವಿಸ್ತರಿತ ಮಾರ್ಗದ ಉದ್ಘಾಟನಾ ಸಮಾರಂಭದಲ್ಲಿ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮೆಟ್ರೋ ರೈಲು ಮಾರ್ಗವನ್ನು ಹೊಸಕೋಟೆ ಪಟ್ಟಣದವರೆಗೆ ವಿಸ್ತರಿಸುವಂತೆ ಮನವಿ ಸಲ್ಲಿಸಿದ್ದ ಎಂಟಿಬಿ ನಾಗರಾಜು ಅವರು, ಇಂದು ಅದರ ಮುಂದುವರೆದ ಭಾಗವಾಗಿ ಬೆಂಗಳೂರು ಮೆಟ್ರೋ ರೈಲು ನಿಗಮದ ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಸಭೆ ನಡೆಸಿದರು.

ಬಿಎಂಆರ್‌ಸಿಎಲ್ ನ ವ್ಯವಸ್ಥಾಪಕ ನಿರ್ದೇಶಕ ಅಜುಂ ಪರ್ವೇಜ್ ಮಾತನಾಡಿ, ಬೆಂಗಳೂರು ಉಪ ನಗರ ರೈಲು ಯೋಜನೆಯನ್ನು ಬೆಂಗಳೂರಿನ ಹೊರವಲಯದ ಹೊಸಕೋಟೆ, ನೆಲಮಂಗಲ, ಬಿಡದಿ, ಮಾಗಡಿ ಮತ್ತು ಆನೇಕಲ್ ಸೇರಿದಂತೆ ಸುತ್ತಲಿನ ಇತರ ಪಟ್ಟಣಗಳಿಗೆ ವಿಸ್ತರಿಸಲು ಅವಕಾಶ ಇದ್ದು, ಈ ಸಂಬಂಧ ಕರ್ನಾಟಕ ರೈಲ್ವೇ ಮೂಲ ಸೌಕರ್ಯ ಅಭಿವೃದ್ಧಿ ನಿಗಮ (ಕೆ-ರೈಡ್) ದ ಅಧಿಕಾರಿಗಳ ಸಭೆ ನಡೆಸಿ ತೀರ್ಮಾನಕ್ಕೆ ಬರುವಂತೆ  ಸಲಹೆ ಮಾಡಿದರು.

Share