Connect with us


      




ದೇಶ

ದೆಹಲಿ ತಲುಪಿದ ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿಡಾ

Iranna Anchatageri

Published

on

ಹೊಸದಿಲ್ಲಿ: ಮಾರ್ಚ್ 19 (ಯು.ಎನ್.ಐ.) ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿಡಾ ಅವರು ಇಂದು ದೆಹಲಿಗೆ ಆಗಮಿಸಿದ್ದಾರೆ. ಇಲ್ಲಿ ಅವರು 14ನೇ ಭಾರತ-ಜಪಾನ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಅಲ್ಲದೆ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಲಿದ್ದಾರೆ.

ಪ್ರಮುಖವಾಗಿ ಸಭೆಯಲ್ಲಿ ಉಕ್ರೇನ್ ಬಿಕ್ಕಟ್ಟು, ಚೀನಾ, ಹೂಡಿಕೆ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ. ಇದೇ ವೇಳೆ ಎರಡೂ ದೇಶಗಳು ಆರ್ಥಿಕ ಸಹಕಾರವನ್ನು ಹೆಚ್ಚಿಸುವುದರ ಜೊತೆಗೆ ಇಂಡೋ-ಪೆಸಿಫಿಕ್ ಪ್ರದೇಶದ ಮಾತುಕತೆಗಳ ಬಗ್ಗೆ ಚರ್ಚಿಸಲಿವೆ ಎಂದು ಮೂಲಗಳು ತಿಳಿಸಿವೆ. ಇದಲ್ಲದೆ, ಜಪಾನ್ ಸಮುದ್ರದಲ್ಲಿ ರಷ್ಯಾದ ವಾಯುಪಡೆಯೊಂದಿಗೆ ಜಂಟಿ ಸಮರಾಭ್ಯಾಸ, ಸುಲು ಹಾಗೂ ಫಿಲಿಪೈನ್ಸ್ ಸಮುದ್ರದಲ್ಲಿ ಯುದ್ಧನೌಕೆಗಳನ್ನು ಕಳುಹಿಸುವ ಬಗ್ಗೆಯೂ ಚರ್ಚಿಸಲಾಗುವುದು. ಈ ಸಭೆಯ ಬಳಿಕ ಮಾರ್ಚ್ 20ರಂದು ಕಿಶಿದಾ ಕಾಂಬೋಡಿಯಾ ಪ್ರವಾಸ ಕೈಗೊಳ್ಳಲಿದ್ದಾರೆ.

ಅಸ್ಸಾಂನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆಯಿಂದಾಗಿ 2019ರಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಆಗಿನ ಜಪಾನ್ ಪ್ರಧಾನಿ ಶಿಂಜೋ ಅಬೆ ನಡುವಿನ ಸಭೆಯನ್ನು ಮುಂದೂಡಲಾಗಿತ್ತು.

Share