Published
6 months agoon
By
UNI Kannadaಶ್ರೀನಗರ, ಜ 10(ಯುಎನ್ ಐ) ಜಮ್ಮು – ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಭಾನುವಾರ ಭದ್ರತಾ ಪಡೆಗಳು ನಡೆಸಿದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಜಿಲ್ಲೆಯ ಹಸನ್ಪೋರಾ ಗ್ರಾಮದಲ್ಲಿ ಉಗ್ರರು ಅಡಗಿರುವ ಸಂಬಂಧ ಖಚಿತ ಸುಳಿವು ಅನುಸರಿಸಿ ಭದ್ರತಾ ಪಡೆಗಳು ಇಡೀ ಪ್ರದೇಶವನ್ನು ಸುತ್ತುವರಿದು ಶೋಧ ಕಾರ್ಯಾಚರಣೆ ನಡೆಸಿದವು. ಈ ಸಂದರ್ಭದಲ್ಲಿ ಯೋಧರು ಹಾಗೂ ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಸಾವನ್ನಪ್ಪಿದ್ದಾರೆ. ಹತ್ಯೆಯಾದ ಉಗ್ರರ ಯಾವ ಗುಂಪಿಗೆ ಸೇರಿದ್ದಾರೆ ಎಂಬುದನ್ನು ಪತ್ತೆ ಹಚ್ಚಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
ಗುಂಡಿನ ಚಕಮಕಿ ನಡೆದ ಸ್ಥಳದಲ್ಲಿ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಸೇರಿದಂತೆ ಆಕ್ಷೇಪಾರ್ಹ ಪದಾರ್ಥಗಳನ್ನು ವಶಪಡಿಸಿಕೊಳ್ಳಲಾಗಿದೆ.
ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಜುಬೇರ್ ಬಂಧನ; ಜರ್ಮನಿ ಹೇಳಿಕೆಗೆ ಕಟುವಾಗಿ ಪ್ರತಿಕ್ರಿಯಿಸಿದ ಕೇಂದ್ರ
ಚೀನಾದ ಕಂಪನಿಗಳು ಭಾರತದ ಕಾನೂನು ಪಾಲಿಸಬೇಕು: ವಿದೇಶಾಂಗ ಸಚಿವಾಲಯ
ಶೀಘ್ರದಲ್ಲೇ ವಾಣಿಜ್ಯ ಹಾರಾಟ ನಡೆಸಲಿದೆ ‘ಆಕಾಶ ಏರ್’
ಫೋನ್ ಹಿಂತಿರುಗಿಸಲು ನಿರಾಕರಿಸಿದ್ದಕ್ಕೆ ಸ್ನೇಹಿತನ ಕೊಂದ ಪಾಪಿ
ಹಿಂದೂ ವ್ಯಕ್ತಿಯ ಅಂತಿಮ ವಿಧಿವಿಧಾನ ನೆರವೇರಿಸಿದ ಮುಸ್ಲಿಂ ಕುಟುಂಬ
ವಿವಾಹ ಜೀವನಕ್ಕೆ ಕಾಲಿರಿಸಿದ ಪಂಜಾಬ್ ಸಿಎಂ ಭಗವಂತ್ ಮಾನ್