Connect with us


      
ಕರ್ನಾಟಕ

ಅಂತಾರಾಷ್ಟ್ರೀಯ ಪ್ರವಾಸಿ ಕೇಂದ್ರವಾಗಲಿರುವ ಜೋಗ!

Iranna Anchatageri

Published

on

ಬೆಂಗಳೂರು : ಜನೆವರಿ 06 (ಯು.ಎನ್.ಐ.) ಜೋಗ ಜಲಪಾತವನ್ನು ಅಂತಾರಾಷ್ಟ್ರೀಯ ಪ್ರವಾಸಿ ಕೇಂದ್ರ ಮಾಡಲು ರಾಜ್ಯ ಸರ್ಕಾರ ತೀರ್ಮಾನ ಕೈಗೊಂಡಿದೆ. ಇಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಯಿತು.

ಕ್ಯಾಬಿನೆಟ್ ಮೀಟಿಂಗ್ ಬಳಿಕ ಈ ಮಾಹಿತಿ ತಿಳಿಸಿದ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ, ಜೋಗದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಸೌಕರ್ಯಗಳನ್ನು ಒದಗಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಪಿಪಿಪಿ  ಮಾದರಿಯಲ್ಲಿ ಈ ಪ್ರವಾಸಿ ಕೇಂದ್ರವನ್ನು ಅಭಿವೃದ್ಧಿ ಮಾಡಲು 116 ಕೋಟಿ ರೂಪಾಯಿ ಬಿಡುಗಡೆ ಮಾಡಲು ಆಡಳಿತಾತ್ಮಕ ಒಪ್ಪಿಗೆ ನೀಡಲಾಗಿದೆ.

ಜೋಗ ಅಭಿವೃದ್ಧಿ ಪ್ರಾಧಿಕಾರಕ್ಕು ಇದಕ್ಕೂ ಯಾವುದೇ ರೀತಿಯಲ್ಲಿ ಸಂಬಂಧ ಇಲ್ಲ. ಜೋಗ ಜಲಪಾತದಲ್ಲಿ ರೂಪ್ ವೇ, ಪಂಚತಾರಾ ಹೊಟೇಲ್ ನಿರ್ಮಾಣ ಮಾಡಲಾಗುತ್ತದೆ. ಕಾಫಿ ಬಾರ್, ಇಂಟರ್ ನೆಟ್ ಸೌಲಭ್ಯ ಸೇರಿದಂತೆ 12 ಹೆಚ್ಚುವರಿ ಅಂಶಗಳನ್ನು ಸೇರ್ಪಡೆ ಮಾಡಲಾಗಿದೆ ಎಂದು ಸಚಿವ ಮಾಧುಸ್ವಾಮಿ ತಿಳಿಸಿದರು.

Share