Connect with us


      
ಕರ್ನಾಟಕ

ಜಡ್ಜ್‌ಗೆ ಬೆದರಿಕೆ ಪ್ರಕರಣ: ಎರಡನೇ ಆರೋಪಿ ಬಂಧನ

Iranna Anchatageri

Published

on

ಬೆಂಗಳೂರು: ಮಾರ್ಚ್ 25 (ಯು.ಎನ್.ಐ.) ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧಾರಣೆ ಕುರಿತಂತೆ ತೀರ್ಪು ನೀಡಿದ ಹೈಕೋರ್ಟ್ ಜಡ್ಜ್ ಗೆ ಬೆದರಿಕೆ ಪ್ರಕರಣ ಕುರಿತಂತೆ ಮತ್ತೊಬ್ಬ ಆರೋಪಿಯನ್ನು ಬಂಧಿಸಲಾಗಿದೆ.

ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ ಗೃಹ ಸಚಿವ ಅರಗ ಜ್ಞಾನೇಂದ್ರ, ಹಿಜಾಬ್ ತೀರ್ಪು ನೀಡಿದ್ದ ಜಡ್ಜ್ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡನೇ ಆರೋಪಿಯನ್ನ ಕರ್ನಾಟಕ ಪೊಲೀಸರು ಬಂಧನ ಮಾಡಿದ್ದಾರೆ. ತಮಿಳುನಾಡಿನ ತಂಜಾವೂರಿನಲ್ಲಿ ನಿನ್ನೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಯನ್ನ ಬೆಂಗಳೂರಿಗೆ ಕರೆದುಕೊಂಡು ಬರಲಾಗಿದೆ. ಆರೋಪಿ ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗುವುದು. ಇದರಿಂದ ತನಿಖೆಗೆ ಸಹಕಾರಿಯಾಗಲಿದೆ. ಪ್ರಕರಣದ ಹಿಂದೆ ಯಾವ ಸಂಘಟನೆಗಳು ಇವೆ ಅನ್ನೋದರ ಬಗ್ಗೆ ತನಿಖೆ ನಡೀತಿದೆ.

ಜಡ್ಜ್ ಗೆ ಬೆದರಿಕೆ ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿಯವರೆಗೆ ಒಟ್ಟಾರೆ ಇಬ್ಬರೂ ಆರೋಪಿಗಳ ಬಂಧನವಾಗಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದರು.

Share