Connect with us


      




ಕರ್ನಾಟಕ

ಸಚಿವಾಲಯದ ನೌಕರರಿಗೆ ಸುತ್ತೋಲೆ ಹೊರಡಿಸಿದ ಸರ್ಕಾರ

UNI Kannada

Published

on

VIDHANASOUDHA
GOVT NEW GUIDELINES TO SECRETARIAT WORKERS

ಬೆಂಗಳೂರು: ಜನವರಿ 04 (ಯು.ಎನ್.ಐ) ರಾಜ್ಯದಲ್ಲಿ ಕೋವಿಡ್-19 ರೂಪಾಂತರಿ ವೈರಸ್ “ಒಮೈಕ್ರಾನ್” ವೈರಾಣು ಸೋಂಕು ಹರಡುವಿಕೆ ನಿಯಂತ್ರಣಕ್ಕಾಗಿ ಹೆಚ್ಚಿನ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವ  ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸಚಿವಾಲಯದಲ್ಲಿ ಅತ್ಯಗತ್ಯ ಸೇವೆಗಳನ್ನು ಒದಗಿಸುವ ಇಲಾಖೆಗಳಿಗೆ ಸುತ್ತೋಲೆ ಹೊರಡಿಸಿದೆ.

ಅತ್ಯಗತ್ಯ ಸೇವೆಗಳನ್ನೊದಗಿಸುತ್ತಿರುವ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲ ವರ್ಗದ ಅಧಿಕಾರಿ ಸಿಬ್ಬಂದಿಗಳು ಕರ್ತವ್ಯಕ್ಕೆ ಹಾಜರಾಗಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಿರುವ ಸರ್ಕಾರ
ಗ್ರೂಪ್ ಎ ವೃಂದದ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಕಚೇರಿಗೆ ಹಾಜರಾಗಬೇಕು ಮತ್ತು ಗ್ರೂಪ್ ಬಿ.ಸಿ. ಮತ್ತು ಡಿ ವೃಂದದ ಅಧಿಕಾರಿ ಸಿಬ್ಬಂದಿಗಳು ಶೇ.50 ರಂತೆ ರೊಟೇಷನ್ ಆಧಾರದ ಮೇಲೆ ಕರ್ತವ್ಯಕ್ಕೆ ಹಾಜರಾಗಬೇಕೆಂದಿದೆ.

ಕೋವಿಡ್ ಕರ್ತವ್ಯಕ್ಕಾಗಿ ನಿಯೋಜಿಸಿದ್ದ ಅಧಿಕಾರಿ ನೌಕರರು ತಪ್ಪದೇ ಹಾಜರಾಗಿ ಕರ್ತವ್ಯ ನಿರ್ವಹಿಸಬೇಕು.ದೃಷ್ಟಿಹೀನ ಮತ್ತು ಇತರ ದೈಹಿಕ ವಿಕಲಚೇತನ ಅಧಿಕಾರಿ,ಸಿಬ್ಬಂದಿ ಮತ್ತು ಗರ್ಭಿಣಿ ಮಹಿಳಾ ಸಿಬ್ಬಂದಿಗಳು ಕಚೇರಿಗೆ ಹಾಜರಾಗುವುದರಿಂದ ವಿನಾಯಿತಿ ನೀಡಲಾಗಿದೆ.

Share