Connect with us


      
ಕರ್ನಾಟಕ

ಪ್ರಧಾನಿ ಭೇಟಿ: ಕರ್ನಾಟಕ ಕಿಸಾನ್ ಕಾಂಗ್ರೆಸ್‌ನಿಂದ ಮುತ್ತಿಗೆಗೆ ನಿರ್ಧಾರ

Iranna Anchatageri

Published

on

ಬೆಂಗಳೂರು: ಜೂನ್ 19 (ಯು.ಎನ್.ಐ.) ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ ನೀಡುತ್ತಿರುವ ಸಂದರ್ಭದಲ್ಲಿ ಮುತ್ತಿಗೆ ಹಾಕಲು ಕರ್ನಾಟಕ ಕಿಸಾನ್ ಕಾಂಗ್ರೆಸ್ ನಿರ್ಧರಿಸಿದೆ. ಇಡಿ ಬಳಸಿಕೊಂಡು ರಾಹುಲ್ ವಿರುದ್ಧ ಷಡ್ಯಂತ್ರ ರೂಪಿಸಲಾಗಿದೆ ಎಂದು ಆರೋಪಿಸಿ ಈ ಮುತ್ತಿಗೆ ಕೈಗೊಳ್ಳಲಾಗಿದೆ ಎಂದು ಕರ್ನಾಟಕ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಸಚಿನ್ ಮಿಗಾ ತಿಳಿಸಿದ್ದಾರೆ.

ಕರ್ನಾಟಕ ಕಿಸಾನ್ ಕಾಂಗ್ರೆಸ್ ರಾಜ್ಯ ಕಾರ್ಯಕಾರಿಣಿ ನಿರ್ಣಯದ (17/06/2022)ರ ತೀರ್ಮಾಣದಂತೆ ರಾಹುಲ್ ಗಾಂಧಿಗೆ ಇಡಿ ಬಳಸಿಕೊಂಡು ಷಡ್ಯಂತ್ರ ರೂಪಿಸುತ್ತಿರುವ ಕೆಂದ್ರ ಸರ್ಕಾರದ ನಡೆಯನ್ನು ಖಂಡಿಸಿ 20ರಂದು ಕರ್ನಾಟಕಕ್ಕೆ ಪ್ರಧಾನಿ ಆಗಮನದ ಹಿನ್ನೆಲೆಯಲ್ಲಿ ಕರ್ನಾಟಕ ಕಿಸಾನ್ ಕಾಂಗ್ರೆಸ್ ವತಿಯಿಂದ ಯಲಹಂಕ ಏರ್ ಬೇಸ್ ಹಾಗು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮುತ್ತಿಗೆಗೆ ತೀರ್ಮಾನಿಸಲಾಗಿದೆ.

ಈ ಚಳವಳಿ ಸಂದರ್ಭದಲ್ಲಿ ಸೂಕ್ತ ರಕ್ಷಣೆ ಹಾಗು ಭದ್ರತೆಯನ್ನು ಒದಗಿಸುವಂತೆ ಡೈರೆಕ್ಟರ್ ಜನರಲ್ ಮತ್ತು ಇನ್ಸ್ಪೆಕ್ಟರ್ ಜನರಲ್ ಅಪ್ ಪೊಲೀಸ್, ಕರ್ನಾಟಕ ರಾಜ್ಯ, ಬೆಂಗಳೂರು ಅವರಿಗೆ ಕೋರಲಾಗಿದೆ.

Share