Connect with us


      
ಕರ್ನಾಟಕ

ಸಾಮಾಜಿಕ ಜವಾಬ್ದಾರಿ ಎಂದರೆ …. ಪಿ ಎಂ ಕೇರ್ಸ್‌ಗೆ ದೇಣಿಗೆ ನೀಡಿ ಸುಮ್ಮನಾಗುವುದಲ್ಲ; ಯದುವೀರ ಕೃಷ್ಣ ದತ್ತ

Published

on

ಬೆಂಗಳೂರು, ಜ, ೭(ಯು ಎನ್ ಐ) ಕಂಪೆನಿಗಳ ಸಾಮಾಜಿಕ ಜವಾಬ್ದಾರಿ ಎಂದರೆ ಪಿಎಂ ಕೇರ್ಸ್ ನಂತಹ ನಿಧಿಗಳಿಗೆ ತನ್ನ ಪಾಲಿನ ದೇಣಿಗೆ ನೀಡಿ ಸುಮ್ಮನಾಗುವುದು ಸೂಕ್ತವಲ್ಲ. ಬದಲಿಗೆ ಸಿ.ಎಸ್.ಆರ್. ನಿಧಿಯನ್ನು ಅತ್ಯಂತ ರಚನಾತ್ಮಕವಾಗಿ ಅಭಿವೃದ್ಧಿ ಉದ್ದೇಶಗಳಿಗೆ ಬಳಸಿದರೆ ಮಾತ್ರ ಅದು ಸಾರ್ಥಕತೆ ಪಡೆಯುತ್ತದೆ ಎಂದು ಮೈಸೂರಿನ ಯದುವಿರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದ್ದಾರೆ.

ಬೆಂಗಳೂರಿನ ಅರಮನೆಯಲ್ಲಿ ನಡೆಯುತ್ತಿರುವ ೪೯ ನೇ ಕಂಪೆನಿ ಸಕ್ರೆಟರಿಗಳ ರಾಷ್ಟ್ರೀಯ ಸಮಾವೇಶದಲ್ಲಿ ಕಂಪೆನಿಗಳ ಸಾಮಾಜಿಕ ಜವಾಬ್ದಾರಿ ಮತ್ತು ಸೇವಾ ಆಡಳಿತ ಕುರಿತು ಮಾತನಾಡಿದ ಅವರು, ಸರ್ಕಾರದ ನಿಧಿಗಳಿಗೆ ಸಿಎಸ್‌ಆರ್ ನಿಧಿಯನ್ನು ಸಮರ್ಪಿಸಿದರೆ ತನ್ನ ಸಾಮಾಜಿಕ ಜವಾಬ್ದಾರಿ ಕುರಿತ ತನ್ನ ಖರ್ಚು ವೆಚ್ಚಗಳಿಗೆ ವಿನಾಯಿತಿ ದೊರೆಯುತ್ತದೆ. ಪಿಎಂ ಕೇರ್ಸ್ ನಿಂದಲೂ ಸಹ ಅತ್ಯುತ್ತಮ ಕೆಲಸಗಳಾಗುತ್ತಿವೆ. ಆದರೆ ಕಂಪೆನಿಗಳು ಗಳಿಸುವ ತನ್ನ ಆದಾಯವನ್ನು ತಾವಿರುವ ಪರಿಸರಲ್ಲಿ ಸದ್ಬಳಕೆ ಮಾಡಿಕೊಳ್ಳುವುದು ಸೂಕ್ತ ವಿಧಾನವಾಗುತ್ತದೆ ಎಂದು ಹೇಳಿದರು.

ಕಂಪೆನಿಗಳು ಸಿಎಸ್‌ಆರ್ ನಿಧಿಯನ್ನು ಪರಿಸರ ಸಂರಕ್ಷಣೆಗಾಗಿ ಹೆಚ್ಚಿನ ರೀತಿಯಲ್ಲಿ ಬಳಸಿಕೊಳ್ಳಬೇಕು. ಪರಿಸರ ಸಮತೋಲನ ಕಾಪಾಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಮೈಸೂರು ಮಹಾರಾಜರ ಕಾಲದಲ್ಲಿ ಕಟ್ಟಿದ ಅಣೆಕಟ್ಟುಗಳು ಮತ್ತಿತರ ನಿರ್ಮಾಣ ಕಾಮಗಾರಿಗಳಿಂದ ಅಗಾಧವಾಗಿ ಅನುಕೂಲವಾಗುತ್ತಿದ್ದು, ಆಣೆಕಟ್ಟೆ ವ್ಯಾಪ್ತಿಯಲ್ಲಿ ನಾನಾ ಕಾರ್ಖಾನೆಗಳು ತಲೆ ಎತ್ತಿವೆ. ಆದರೆ ಇದೇ ಕಾಲಕ್ಕೆ ಪರಿಸರದ ಮೇಲೂ ಪ್ರತಿಕೂಲ ಪರಿಣಾಮಗಳಾಗುತ್ತಿವೆ ಎಂಬ ಆಕ್ಷೇಪವೂ ಇದೆ. ಪ್ರತಿಯೊಂದು ಕಂಪೆನಿ ತನ್ನ ಆದಾಯ ಹೆಚ್ಚಿಸಿಕೊಳ್ಳಲು, ತನ್ನ ವ್ಯಾಪ್ತಿಯನ್ನು ವಿಸ್ತರಿಸಲು ಮುಂದಾಗುತ್ತವೆ. ಇದೇ ರೀತಿ ತನ್ನ ಜವಾಬ್ದಾರಿಯನ್ನು ಅತ್ಯಂತ ಪರಿಣಾಮಕಾರಿಯಾಗಿ ನಿರ್ವಹಿಸುವುದುನ್ನು ಮರೆಯಬಾರದು ಎಂದರು.

ಪರಿಸರ ಸಂರಕ್ಷಣೆ, ಸಿಎಸ್‌ಆರ್ ಚಟುವಟಿಕೆ ಎನ್ನುವುದು ಈಗಿನ ಪರಿಕಲ್ಪನೆಯಲ್ಲ. ಭಾರತೀಯ ಸಂಸ್ಕೃತಿಯಲ್ಲೇ ಅಂತರ್ಗತವಾಗಿದೆ. ಈ ನಿಟ್ಟಿನಲ್ಲಿ ಎನ್.ಜಿ.ಓಗಳು ಸಹ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುವಂತಾಗಬೇಕು ಎಂದು ಯದುವಿರ್ ಕೃಷ್ಣದತ್ತ ಚಾಮರಾಜ ಒಡೆಯರ್ ಕರೆ ನೀಡಿದರು.

ಕರ್ನಾಟಕ

ಸಿಎಂ ಭೇಟಿ ಮಾಡಿದ ಚಿಕ್ಕಮಗಳೂರು ಶಾಸಕರ ನಿಯೋಗ

Published

on

ಬೆಂಗಳೂರು: ಜನೆವರಿ 27 (ಯು.ಎನ್.ಐ.) ಶಾಸಕ ಹಾಗೂ ಬಿಜೆಪಿ ಪ್ರಧಾನ ಕಾರ್ಯಯದರ್ಶಿ ಸಿ ಟಿ ರವಿ ನೇತೃತ್ವದಲ್ಲಿ ಚಿಕ್ಕಮಗಳೂರು ಜಿಲ್ಲೆ ಶಾಸಕರು ಮುಖ್ಯಮಂತ್ರಿ‌ ಬಸವರಾಜ ಎಸ್ ಬೊಮ್ಮಾಯಿ ಅವರನ್ನು ಭೇಟಿಯಾಗಿದ್ದರು. ಇಂದು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿದ ನಿಯೋಗದ ಅಹವಾಲುಗಳನ್ನು ಮುಖ್ಯಮಂತ್ರಿ ಆಲಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಗೆ ಪ್ರತ್ಯೇಕ ಹಾಲು ಒಕ್ಕೂಟ, ಮತ್ತು ಭದ್ರಾ ಉಪಕಣವೆಯ 2 ಮತ್ತು 3 ನೇ ಹಂತದ ಯೋಜನೆಗೆ ಹಣ ಬಿಡುಗಡೆ ಹಾಗೂ ಜಿಲ್ಲೆಯ ಜಲಧಾರೆ ಯೋಜನೆಗೆ ಬಜೆಟ್ ಹಣ ನೀಡುವಂತೆ ನಿಯೋಗ ಮನವಿ ಮಾಡಿದೆ. ನಿಯೋಗದಲ್ಲಿ ಉಪ ಸಭಾಪತಿ ಪ್ರಾಣೇಶ್, ಶಾಸಕ ಸುರೇಶ್, ಬೆಳ್ಳಿ ಪ್ರಕಾಶ್, ಸಿಎಂ ರಾಜಕೀಯ ಕಾರ್ಯದರ್ಶಿ ಜೀವರಾಜ್‌ ಸಹ ಇದ್ದರು.

ಸಿಎಂ ಭೇಟಿ ಬಳಿಕ ಜೀವರಾಜ್ ಅವರು ಮಾತನಾಡಿ, ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಪ್ರತಿಕ್ರಿಯಿಸಿದರು. ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ. ನಮ್ಮ ಜಿಲ್ಲೆಯಲ್ಲಿ ನನಗಿಂತಲೂ ಹಿರಿಯರಿದ್ದಾರೆ, ಮೂಡಿಗೆರೆ ಎಂ ಪಿ ಕುಮಾರಸ್ವಾಮಿ ಇದಾರೆ, ತರೀಕೆರೆ ಸುರೇಶ್ ಇದಾರೆ, ಅವರಿಗೆ ಕೊಡಲಿ. ಸಿ ಟಿ ರವಿ ಮಾರ್ಗದರ್ಶನದಲ್ಲಿ ಮುಂದೆ‌ ಹೋಗ್ತೀವಿ.
ಸಂಪುಟ ವಿಸ್ತರಣೆ ಸಮಯದಲ್ಲಿ ನಮ್ಮ ಜಿಲ್ಲೆಗೆ ಅವಕಾಶ ಸಿಕ್ಕರೆ ಸಿಗಬಹುದು.. ಸಿಗದೇನೂ ಇರಬಹುದು. ಯಾರಿಗೆ ಕೊಟ್ಟರು ಸಂತೋಷ ಕೊಟ್ಟಿಲ್ಲ ಅಂದ್ರೂ ಸಂತೋಷ ಎಂದರು.

ಬಿಜೆಪಿ ಶಾಸಕರು ಕಾಂಗ್ರೆಸ್ನವರ ಸಂಪರ್ಕದಲ್ಲಿರುವ ವಿಚಾರವಾಗಿ ಮಾತನಾಡಿ, ನಮ್ಮ ಪಕ್ಷದಿಂದ ಯಾರು ಹೋಗೋದಿಲ್ಲ. ಚುನಾವಣಾ ಹತ್ತಿರ ಬಂದಾಗ ಏನ್ ಆಗುತ್ತೆ ಅನ್ನೋದು ದೇವರೊಬ್ಬರಿಗೆ ಮಾತ್ರ ಗೊತ್ತು.‌ ಒಮ್ಮೆ ಪಕ್ಷಕ್ಕೆ ಸೇರ್ಪಡೆಯಾದರೆ ಅಲ್ಲಿ ವಲಸಿಗ ಮೂಲ ಅನ್ನೋದು ಬರೋದಿಲ್ಲ.‌ ಈಶ್ವರಪ್ಪ ಉಸ್ತುವಾರಿಯಾಗಿ ಬಂದಿರೋದನ್ನ ನಾವು ಸ್ವಾಗತ ಮಾಡ್ತೀವಿ ಎಂದು ಹೇಳಿದರು.

ಕಡೂರು ಶಾಸಕ ಬೆಳ್ಳಿ ಪ್ರಕಾಶ್ ಮಾತನಾಡಿ.‌ ಸಿ.ಟಿ ರವಿ ನೇತೃತ್ವದಲ್ಲಿ ನಮ್ಮ ಪಕ್ಷದ ಚಿಕ್ಕಮಗಳೂರು ಶಾಸಕರೆಲ್ಲ ಸಿಎಂ ಭೇಟಿ ಮಾಡಿದ್ವಿ. ಚಿಕ್ಕಮಗಳೂರು ಜಿಲ್ಲೆ ಸಮಸ್ಯೆ ಬಗ್ಗೆ ಚರ್ಚೆಗೆ ತೆರಳಿದ್ವಿ. ಜಿಲ್ಲೆಗೆ ಪ್ರತ್ಯೇಕ ಹಾಲು ಒಕ್ಕೂಟ ಮತ್ತು ಮೂಡಿಗೆರೆಯಲ್ಲಿ ತೋಟಗಾರಿಕೆ ವಿಶ್ವವಿದ್ಯಾಲಯ ಹಾಗೂ ಭದ್ರಾ ಉಪಕಣಿವೆಯ ಕಾಮಗಾರಿ, ಜಿಲ್ಲೆಯ ಜಲಧಾರೆಯ ಯೋಜನೆ ಬಗ್ಗೆ ಸಿಎಂ ಜೊತೆ ಚರ್ಚೆ ಮಾಡಿ ಮನವಿ ಸಲ್ಲಿಸಿ ಬಂದಿದ್ದೇವೆ ಎಂದು ವಿವರಿಸಿದರು.

Continue Reading

ಕರ್ನಾಟಕ

ಸಿಎಂ‌ ಇಬ್ರಾಹಿಂ ಬಂದರೆ ಸ್ವಾಗತ: ಎಚ್‌‌‌ಡಿಕೆ

Published

on

ಬೆಂಗಳೂರು:ಜನೆವರಿ 27 (ಯು.ಎನ್.ಐ.) ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಸಿಎಂ‌ ಇಬ್ರಾಹಿಂ‌ ಅವರು ಜಾತ್ಯತೀತ ಜನತಾ ದಳಕ್ಕೆ ಬಂದರೆ ಸ್ವಾಗತಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.‌ಕುಮಾರಸ್ವಾಮಿ ಹೇಳಿದ್ದಾರೆ.

ಅವರಿಂದು ಸುದ್ದಿಗಾರರ ಜೊತೆ ಮಾತನಾಡಿ, ಇಬ್ರಾಹಿಂ ಅವರು ಹಿರಿಯ ರಾಜಕಾರಣಿ.‌ ನಮ್ಮ ಪಕ್ಷ ಹಾಗೂ ದೇವೇಗೌಡರ ಏಳು ಬೀಳುವಿನಲ್ಲೊಯೂ ಜೊತೆಯಾದವರು. ವಿರೋಧ ಪಕ್ಷದ ನಾಯಕರ ಸ್ಥಾನಕ್ಕೆ ಅವರ ಹೆಸರು ಕೇಳಿ‌ ಬಂದಿತ್ತು. ಆ ಸ್ಥಾನ ದೊರೆತರೆ ನಾಯಕರ ಉಪಯೋಗ ಮಾಡಿಕೊಳ್ಳಿ. ನಿಮ್ಮನ್ನು ದುರುಪಯೋಗ ಪಡಿಸಿಕೊಳ್ಳಲ್ಲ ಎಂದಿದ್ದೆ ಎಂದು ವಿವರಿಸಿದರು.

ಅವರಿಗೆ ಇನ್ನೂ ದೇವೇಗೌಡರು ಹಾಗೂ ನಮ್ಮ ಪಕ್ಷದ ಬಗ್ಗೆ ವ್ಯಾಮೋಹ ಇದೆ.‌ ಅವರು ಬಂದರೆ ಸ್ವಾಗತ. ನಾವು ಕದ್ದು ಮುಚ್ಚಿ ಯಾವುದನ್ನೂ ಮಾಡಿಲ್ಲ. ಇಂದೂ ಕೂಡ ನಾನು ಕರೆ ಮಾಡಿ ಮಾತಾಡಿದ್ದೀನಿ. ಅವರು ನಮ್ಮ ಪಕ್ಷಕ್ಕೆ ಬಂದರೆ ಸ್ವಾಗತ. ಜನತಾ ಪರಿವಾರದ ನಾಯಕರು ಸೆಟ್ಟಲ್ ಆಗಿದ್ದಾರೆ. ಅವರನ್ನು ವಾಪಸ್ ತರುವ ನಿರೀಕ್ಷೆ ಇಟ್ಟುಕೊಂಡಿಲ್ಲ ಎಂದರು.

ಯವ ನಾಯಕತ್ವ ತರುವ ನಿಟ್ಟಿನಲ್ಲಿ ಚಿಂತಿಸಲಾಗುತ್ತಿದೆ. ಹೊಸ ನಾಯಕರ ನೇಮಕಾತಿ‌ ಮಾಡಲಾಗುತ್ತಿದೆ. ಹೊಸ ನಾಯಕರ ಸೃಷ್ಟಿ ಮೊದಲಿನಿಂದಲೂ ನಡೆಯುತ್ತಿದೆ. ಜೆಡಿಎಸ್ ಮೊದಲಿನಿಂದಲೂ ಗುರು ಮನೆ ಇದ್ದಂತೆ. ಹಲವರು ನಾಯಕರಾಗಿ‌ ಬೆಳೆದು ಹೋಗಿದ್ದಾರೆ ಎಂದು ಪ್ರತಿಪಾದಿಸಿದರು.

Continue Reading

ಕರ್ನಾಟಕ

ಶಾಲಾ ವಿದ್ಯಾರ್ಥಿಗಳಿಗೆ ಕೋವಿಡ್ ದೃಢ; ಹೆಬ್ಬಳ್ಳಿ ಶಾಲೆ ಸೀಲ್‌ಡೌನ್

Published

on

ಧಾರವಾಡ: ಜನೆವರಿ 27 (ಯು.ಎನ್.ಐ.) ಧಾರವಾಡ ಜಿಲ್ಲೆಯಲ್ಲಿ ಕೋವಿಡ್ ಹಾವಳಿ ಹೆಚ್ಚಾಗತೊಡಗಿದೆ. ಧಾರವಾಡ ಜಿಲ್ಲಾ ಆರೋಗ್ಯ ಇಲಾಖೆ ಜನೆವರಿ 26ರಂದು ಕೊಟ್ಟ ಮಾಹಿತಿ ಪ್ರಕಾರ ಜಿಲ್ಲೆಯಲ್ಲಿ ಅತ್ಯಧಿಕ ಕೋವಿಡ್ ಪ್ರಕರಣಗಳು ದಾಖಲಾಗಿವೆ. ಬರೋಬ್ಬರಿ 1,523 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಆಕ್ಟಿವ್ ಕೇಸ್ ಗಳ ಸಂಖ್ಯೆ 5,718ಕ್ಕೆ ಏರಿಕೆಯಾಗಿದೆ.

ಇನ್ನೊಂದೆಡೆ ಧಾರವಾಡ ಜಿಲ್ಲೆಯಲ್ಲಿನ ಶಾಲೆಗಳಲ್ಲೂ ಕೋವಿಡ್ ದುಗುಡ ಹೆಚ್ಚಾಗುತ್ತಿದ್ದು, ತಾಲೂಕಿನ ಹೆಬ್ಬಳ್ಳಿ ಗ್ರಾಮದ ಶಾಲೆಯಲ್ಲಿ 18 ವಿದ್ಯಾರ್ಥಿಗಳಿಗೆ ಕೋವಿಡ್ ಕಾಣಿಸಿಕೊಂಡಿದೆ. ಇಲ್ಲಿನ ನೆಹರು ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಜನೆವರಿ 24 ರಂದು ಇಬ್ಬರು ವಿದ್ಯಾರ್ಥಿಗಳಲ್ಲಿ ಮಾತ್ರ ಸೋಂಕು ಕಾಣಿಸಿಕೊಂಡಿತು. ಬಳಿಕ ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆ ಮಾಡಿಸಿದಾಗ ಒಟ್ಟಾರೆ 18 ವಿದ್ಯಾರ್ಥಿಗಳಲ್ಲಿ ಕೋವಿಡ್ ಹರಡಿರುವುದು ಗ್ರಾಮದಲ್ಲಿ ಆತಂಕ ಹೆಚ್ಚಿಸಿದೆ.

18 ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಮಂಗಳವಾರ ಬಾಕಿ ವಿದ್ಯಾರ್ಥಿಗಳ ಕೋವಿಡ್ ಪರೀಕ್ಷೆಯನ್ನು ಮಾಡಲಾಗಿದ್ದು, ಇಂದು ವರದಿ ಬರುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮುಂಜಾಗ್ರತ ಕ್ರಮಕೈಗೊಂಡಿದ್ದು, ಹೆಬ್ಬಳ್ಳಿ ಶಾಲೆಯನ್ನು ಸೀಲ್ ಡೌನ್ ಮಾಡಲಾಗಿದೆ. ಈ ಬಗ್ಗೆ ಶಾಲಾ ವಿದ್ಯಾರ್ಥಿಗಳಿಗೆ ಮೊಬೈಲ್ ಮೂಲಕ ಮಾಹಿತಿ ಕಳುಹಿಸಿರುವ ಪ್ರಾಂಶುಪಾಲರು, ಸರ್ಕಾರದ ನಿರ್ದೇಶನ ಮತ್ತು ತಹಸೀಲ್ದಾರರ ಮಾಹಿತಿ ಆದೇಶದಂತೆ ಇಂದು 27/01/2022 ರಿಂದ 02/02/2022 ವರೆಗೆ ಶಾಲೆಗೆ ರಜೆ ನೀಡಲಾಗಿದೆ. ಅಲ್ಲದೆ, ಭೌತಿಕ ಶಿಕ್ಷಣಕ್ಕೆ ರಜೆ ನೀಡಲಾಗಿದ್ದು, ಆನ್ ಲೈನ್ ಕ್ಲಾಸುಗಳಿಗೆ ಹಾಜರಾಗುವಂತೆ ಸೂಚಿಸಿದ್ದಾರೆ.

Continue Reading
Advertisement
ದೇಶ13 mins ago

ವೈಯಕ್ತಿಕ ದ್ವೇಷ: ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ, ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ ದುಷ್ಟರು

ನವದೆಹಲಿ: ಜನೆವರಿ 27 (ಯು.ಎನ್.ಐ.) ವೈಯಕ್ತಿಕ ದ್ವೇಷದ ಕಾರಣ ಮಹಿಳೆಯನ್ನು ಅಪಹರಿಸಿ ಆಕೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ದುಷ್ಟರು ಚಪ್ಪಲಿ ಹಾರ ಹಾಕಿ, ಮುಖಕ್ಕೆ ಕಪ್ಪು...

ಕರ್ನಾಟಕ1 hour ago

ಸಿಎಂ ಭೇಟಿ ಮಾಡಿದ ಚಿಕ್ಕಮಗಳೂರು ಶಾಸಕರ ನಿಯೋಗ

ಬೆಂಗಳೂರು: ಜನೆವರಿ 27 (ಯು.ಎನ್.ಐ.) ಶಾಸಕ ಹಾಗೂ ಬಿಜೆಪಿ ಪ್ರಧಾನ ಕಾರ್ಯಯದರ್ಶಿ ಸಿ ಟಿ ರವಿ ನೇತೃತ್ವದಲ್ಲಿ ಚಿಕ್ಕಮಗಳೂರು ಜಿಲ್ಲೆ ಶಾಸಕರು ಮುಖ್ಯಮಂತ್ರಿ‌ ಬಸವರಾಜ ಎಸ್ ಬೊಮ್ಮಾಯಿ...

ಕರ್ನಾಟಕ2 hours ago

ಸಿಎಂ‌ ಇಬ್ರಾಹಿಂ ಬಂದರೆ ಸ್ವಾಗತ: ಎಚ್‌‌‌ಡಿಕೆ

ಬೆಂಗಳೂರು:ಜನೆವರಿ 27 (ಯು.ಎನ್.ಐ.) ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಸಿಎಂ‌ ಇಬ್ರಾಹಿಂ‌ ಅವರು ಜಾತ್ಯತೀತ ಜನತಾ ದಳಕ್ಕೆ ಬಂದರೆ ಸ್ವಾಗತಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.‌ಕುಮಾರಸ್ವಾಮಿ ಹೇಳಿದ್ದಾರೆ....

ದೇಶ2 hours ago

ದೆಹಲಿಯಲ್ಲಿ ವೀಕೆಂಡ್ ಕರ್ಫ್ಯೂ ಅಂತ್ಯ; ಶಾಲಾ-ಕಾಲೇಜುಗಳು ಬಂದ್

ಹೊಸದಿಲ್ಲಿ: ಜನೆವರಿ 27 (ಯು.ಎನ್.ಐ.) ರಾಷ್ಟ್ರ ರಾಜಧಾನಿ ಜನರಿಗೆ ದೆಹಲಿ ಸರ್ಕಾರ ಗುಡ್ ನ್ಯೂಸ್ ನೀಡಿದೆ. ದೆಹಲಿಯಲ್ಲಿ ಕೋವಿಡ್ ಪ್ರಕರಣಗಳು ಕಡಿಮೆಯಾಗುತ್ತಿರುವ  ಹಿನ್ನೆಲೆಯಲ್ಲಿ ವೀಕೆಂಡ್ ಕರ್ಫ್ಯೂ ಅನ್ನು...

ಕ್ರೀಡೆ2 hours ago

ಟೀಂ ಇಂಡಿಯಾ ಆಲ್‌ರೌಂಡರ್ ಕೃನಾಲ್ ಪಾಂಡ್ಯ ಟ್ವಿಟರ್ ಖಾತೆ ಹ್ಯಾಕ್

ಮುಂಬೈ: ಜನೆವರಿ ೨೭ (ಯು.ಎನ್.ಐ.) ಇತ್ತೀಚೆಗೆ ಬಿಟ್‌ಕಾಯಿನ್ ಸ್ಕ್ಯಾಮರ್ ಗಳು ಟ್ವಿಟರ್ ಖಾತೆಗಳನ್ನು ಹ್ಯಾಕ್ ಮಾಡುತ್ತಿದ್ದು, ಈಗಾಗಲೇ ಸಾಕಷ್ಟು ಮಂದಿಯ ಟ್ವಿಟರ್ ಖಾತೆ ಇದೇ ವಿಚಾರಕ್ಕೆ ಹ್ಯಾಕ್...

ಸಿನೆಮಾ3 hours ago

ನಾಗಚೈತನ್ಯ, ಸಮಂತಾ ವಿಚ್ಛೇದನಕ್ಕೆ ನಟ ನಾಗಾರ್ಜುನ ಕೊಟ್ಟ ಕಾರಣ ಏನು?

ಹೈದರಾಬಾದ್: ಜನೆವರಿ 27 (ಯು.ಎನ್.ಐ.) ಟಾಲಿವುಡ್ ಸ್ಟಾರ್ ಗಳಾದ ನಾಗಚೈತನ್ಯ ಮತ್ತು ಸಮಂತಾ ರುತ್ ಪ್ರಭು 2021ರಲ್ಲಿ ವಿಚ್ಛೇದನ ಘೋಷಿಸಿದರು. ಅಂದಿನಿಂದ ಇಮದಿನವರೆಗೆ ಅವರ ನಡುವಿನ ಪ್ರತ್ಯೇಕತೆಗೆ...

ದೇಶ3 hours ago

ಅನ್ಯ ಜಾತಿ ಹುಡುಗಿ ಮದುವೆಯಾದ ಮಗ: ತಾಯಿ ಮೇಲೆ ಹಲ್ಲೆ

ಚೆನ್ನೈ: ಜನೆವರಿ 27 (ಯು.ಎನ್.ಐ.) ಅನ್ಯ ಜಾತಿಯ ಹುಡುಗಿಯನ್ನು ಮಗ ವಿವಾಹವಾದ ಕಾರಣ ತಾಯಿಯನ್ನು ದೀಪದ ಕಂಬಕ್ಕೆ ಕಟ್ಟಿಹಾಕಿ ಥಳಿಸಿದ ಘಟನೆ ತಮಿಳುನಾಡಿನ ವಿರುದುನಗರ ಜಿಲ್ಲೆಯ ತಿರುಚುಲಿ...

ಸಿನೆಮಾ4 hours ago

‘ದೇವರು ನನ್ನ ಬ್ರಾ ಸೈಜ್ ತೆಗೆದುಕೊಳ್ಳುತ್ತಿದ್ದಾರೆ’ – ನಟಿ ಶ್ವೇತಾ ತಿವಾರಿ

ಭೋಪಾಲ್: ಜನೆವರಿ 27 (ಯು.ಎನ್.ಐ.) ಕಿರುತೆರೆ ಹಾಗೂ ಹಿಂದಿ ಫಿಲಂ ನಟಿ ಶ್ವೇತಾ ತಿವಾರಿ ದೇವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಫ್ಯಾಶನ್ ಸಂಬಂಧಿತ ವೆಬ್ ಸರಣಿಯ...

ಸಿನೆಮಾ4 hours ago

ವಿವಾಹ ಜೀವನಕ್ಕೆ ಕಾಲಿರಿಸಿದ ಮೌನಿರಾಯ್, ಸೂರಜ್ ನಂಬಿಯಾರ್

ಪಣಜಿ: ಜನೆವರಿ 27 (ಯು.ಎನ್.ಐ.) ಬಾಲಿವುಡ್ ನಟಿ ಮೌನಿ ರಾಯ್ ಮತ್ತು ಉದ್ಯಮಿ ಸೂರಜ್ ನಂಬಿಯಾರ್ ಇಂದು ಗೋವಾದಲ್ಲಿ ವಿವಾಹ ಜೀವನಕ್ಕೆ ಕಾಲಿರಿಸಿದ್ದಾರೆ. ಇವರ ವಿವಾಹದ ಫೋಟೋಗಳು...

ದೇಶ4 hours ago

ಕಾಂಗ್ರೆಸ್ ಉಚ್ಛಾಟಿತ ನಾಯಕ ಕಿಶೋರ್ ಉಪಾಧ್ಯಾಯ ಬಿಜೆಪಿಗೆ ಸೇರ್ಪಡೆ

ಡೆಹ್ರಾಡೂನ್: ಜನೆವರಿ 27 (ಯು.ಎನ್.ಐ.) ಉತ್ತರಾಖಂಡ ವಿಧಾನಸಭಾ ಚುನಾವಣೆಗೆ ಮುನ್ನ, ಉಚ್ಛಾಟಿತ ರಾಜ್ಯ ಕಾಂಗ್ರೆಸ್ ಮಾಜಿ ಮುಖ್ಯಸ್ಥ ಕಿಶೋರ್ ಉಪಾಧ್ಯಾಯ ಗುರುವಾರ ಭಾರತೀಯ ಜನತಾ ಪಕ್ಷ (ಬಿಜೆಪಿ)...

ಟ್ರೆಂಡಿಂಗ್

Share