Connect with us


      




ಕರ್ನಾಟಕ

ರಾಮನಗರ; ಕೆಂಪೇಗೌಡ, ಅಂಬೇಡ್ಕರ್ ಪ್ರತಿಮೆ ಅನಾವರಣ

Kumara Raitha

Published

on

ರಾಮನಗರ: ಜನೆವರಿ 03 (ಯು.ಎನ್.ಐ.) ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರು ಇಂದು ರಾಮನಗರ ಜಿಲ್ಲಾಡಳಿತ ವತಿಯಿಂದ ಡಿಸಿ ಕಚೇರಿ ಆವರಣದಲ್ಲಿ ನಿರ್ಮಿಸಿರುವ ಡಾ.ಬಿ.ಆರ್. ಅಂಬೇಡ್ಕರ್ ಮತ್ತು ನಾಡಪ್ರಭು ಕೆಂಪೇಗೌಡರ ಪ್ರತಿಮೆಗಳ ಅನಾವರಣ ಮಾಡಿದರು.

ಈ ನಂತರ ರಾಮನಗರ, ಚನ್ನಪಟ್ಟಣ ಮತ್ತು ಕನಕಪುರ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಸಚಿವರಾದ ಡಾ. ಸಿ ಎನ್ ಅಶ್ವತ್ಥ ನಾರಾಯಣ, ಡಾ. ಕೆ. ಸುಧಾಕರ, ಬೈರತಿ ಬಸವರಾಜ, ಶಾಸಕರಾದ ಅನಿತಾ ಕುಮಾರಸ್ವಾಮಿ, ಸಿ ಪಿ ಯೋಗೇಶ್ವರ ಮತ್ತು ಇತರರು ಉಪಸ್ಥಿತರಿದ್ದರು.

Share