Connect with us


      




ಕರ್ನಾಟಕ

ನಂದಿನಿ ಹಾಲಿನ ಬೆಲೆ ಏರಿಕೆ ಮುನ್ಸೂಚನೆ ನೀಡಿದ ಜಾರಕಿಹೊಳಿ

Published

on

ಬೆಂಗಳೂರು, ಜ ೧೪(ಯುಎನ್ ಐ)- ನಂದಿನಿ ಉತ್ಪನ್ನಗಳ ಮಾರಾಟವನ್ನು ದೇಶಾದ್ಯಂತ ವಿಸ್ತರಿಸಲು ಬೆಳಗಾವಿಯಲ್ಲಿ ನಂದಿನಿ ಮೇಗಾ ಫುಡ್ ಪಾರ್ಕನ್ನು ಆರಂಭಿಸುವ ಕಾರ್ಯ ಪ್ರಗತಿಯಲ್ಲಿದ್ದು, ಪನ್ನೀರ್ ಹಾಗೂ ಚೀಜ್ ಆಧಾರಿದ ಉತ್ಪನ್ನಗಳು ಮತ್ತು ಇತರೆ ನಂದಿನಿ ಸಿಹಿ ಉತ್ಪನ್ನಗಳನ್ನು ಈ ಘಟಕದ ಮೂಲಕ ಉತ್ಪಾದಿಸಿ ಮಾರುಕಟ್ಟೆ ಜಾಲವನ್ನು ವಿಸ್ತರಿಸಲಾಗುವುದು ಎಂದು ಕೆ ಎಂ ಎಫ್ ಅಧ್ಯಕ್ಷ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ.
ಕೆಎಂಎಫ್ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬೆಳಗಾವಿಯಲ್ಲಿ ಮೇಗಾ ಪುಡ್ ಪಾರ್ಕ್ ಮೂಲಕ ನೆರೆಯ ಗೋವಾ ಹಾಗೂ ಮಹಾರಾಷ್ಟ್ರ ರಾಜ್ಯಗಳಲ್ಲಿ ನಂದಿನಿ ಉತ್ಪನ್ನಗಳ ಮಾರಾಟ ವಿಸ್ತರಣೆಯಾಗಲಿದೆ ಎಂದು ಹೇಳಿದರು.
ದೇಶದ ಇತರೇ ರಾಜ್ಯಗಳಿಗೆ ಹೋಲಿಸಿದರೆ ನಂದಿನಿ ಹಾಲಿನ ದರವು ರಾಜ್ಯದಲ್ಲಿ ಅತೀ ಕಡಿಮೆ ದರವನ್ನು ಹೊಂದಿದೆ. ೩೭ ರೂ.ಗಳಂತೆ ಪ್ರತಿ ಲೀಟರ್ ಹಾಲನ್ನು ಮಾರಾಟ ಮಾಡಲಾಗುತ್ತಿದೆ. ರಾಜ್ಯದಲ್ಲಿರುವ ಎಲ್ಲ ಜಿಲ್ಲಾ ಹಾಲು ಒಕ್ಕೂಟಗಳ ಅಧ್ಯಕ್ಷರುಗಳು ಹಾಲಿನ ದರದಲ್ಲಿ ಪ್ರತಿ ಲೀಟರ್‌ಗೆ ೩ ರೂ.ಗಳಂತೆ ಏರಿಕೆ ಮಾಡುವಂತೆ ಮನವಿ ಮಾಡಿಕೊಂಡಿದ್ದಾರೆ. ಇದರಿಂದ ಪ್ರತಿ ಲೀಟರ್ ಹಾಲಿಗೆ ೪೦ ರೂ. ದರವನ್ನು ನಿಗದಿಪಡಿಸಿದಂತಾಗುತ್ತದೆ. ದರ ಹೆಚ್ಚಳದ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ನಿರ್ಧಾರ ಕೈಗೊಳ್ಳಲಾಗುವುದು. ಒಂದು ವೇಳೆ ರೂ. ೩೭ ರಿಂದ ೪೦ ರೂ. ಗಳಾದರೆ ಅದರಲ್ಲಿ ರೈತರಿಗೆ ೩ ರೂ.ಗಳನ್ನು ನೀಡಲಾಗುವುದು ಎಂದು ಅವರು ಹೇಳಿದರು.
ನಂದಿನಿ ಉತ್ಪನ್ನಗಳನ್ನು ಹೊರ ರಾಜ್ಯಗಳಾದ ಹೈದ್ರಾಬಾದ್, ಪುಣೆ, ಮುಂಬಯಿ, ಆಂಧ್ರ ಗೋವಾ, ಚೆನ್ನೈ ಹಾಗೂ ವಿದೇಶಗಳಲ್ಲಿ ಈಗಾಗಲೇ ಪರಿಚಯಿಸಿದ್ದು, ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹೊರ ರಾಜ್ಯಗಳಲ್ಲಿ ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳ ಮಾರಾಟವನ್ನು ವಿಸ್ತರಿಸಲು ವಿಷನ್ ೨೦೨೫-೨೬ ಕಾರ್ಯಕ್ರಮ ರೂಪಿಸಲಾಗಿದೆ ಎಂದರು.
೨೦೨೧-೨೨ನೇ ಸಾಲಿನಲ್ಲಿ ಕೆಎಂಎಫ್‌ನ ೫ ಪಶು ಆಹಾರ ಘಟಕಗಳಿಂದ ಒಟ್ಟು ೭.೨೮ ಲಕ್ಷ ಮೆಟ್ರಿಕ್ ಟನ್ ಪಶು ಆಹಾರ ಉತ್ಪಾದಿಸಿ ಮಾರಾಟ ಮಾಡುವ ಗುರಿಯನ್ನು ಹೊಂದಲಾಗಿದ್ದು, ಒಟ್ಟಾರೆ ಅಂದಾಜು ೧೦೧೭ ಕೋಟಿ ರೂ.ಗಳ ವಹಿವಾಟು ನಡೆಯಲಿದೆ ಎಂದು ನಿರೀಕ್ಷಿಸಲಾಗಿದೆ. ಮಾರುಕಟ್ಟೆ ವಿಸ್ತರಣೆಯಲ್ಲಿ ಹಳ್ಳಿಯಿಂದ ಮಹಾನಗರದವರೆಗೆ ಎಂಬ ತತ್ವದಡಿ ನಂದಿನಿ ಹಾಲು, ಹಾಲಿನ ಉತ್ಪನ್ನಗಳನ್ನು ಮಾರಾಟ ಮಾಡುವ ವ್ಯವಸ್ಥೆ ಕಲ್ಪಿಸಿದ್ದು, ಇದರ ಮಾರಾಟವನ್ನು ಆಯಾ ಗ್ರಾಮ, ಹೋಬಳಿ, ತಾಲೂಕು, ಜಿಲ್ಲಾ ಮಟ್ಟದಲ್ಲಿ ಅಭಿವೃದ್ಧಿಪಡಿಸಲು ಸಮಗ್ರ ಮಾರುಕಟ್ಟೆ ಅಭಿವೃದ್ಧಿ ಯೋಜನೆಯನ್ನು ೨೦೨೨-೨೦೨೬ ರವರೆಗೆ ಜಾರಿಗೊಳಿಸಲು ರೂಪಿಸಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು.

ಕರ್ನಾಟಕ

ಇಡೀ ವರ್ಷ ಸುಭಾಷ್ ಚಂದ್ರಬೋಸ್ ಜನ್ಮದಿನಾಚರಣೆಗೆ ತೀರ್ಮಾನ: ಸಿಎಂ

Published

on

ಬೆಂಗಳೂರು : ಜನೆವರಿ 23 (ಯು.ಎನ್.ಐ.) ರಾಜ್ಯ ಸರ್ಕಾರದ ವತಿಯಿಂದ ವರ್ಷವಿಡೀ ನೇತಾಜಿ ಸುಭಾಷ್ ಚಂದ್ರಬೋಸ್ ರವರ 125ನೇ ಜನ್ಮ ದಿನಾಚರಣೆಯನ್ನ ಆಚರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.  ಭಾರತದ ಸ್ವತಂತ್ರ್ಯಕ್ಕೆ ಬಹಳ ದೊಡ್ಡ ಬುನಾದಿ ಹಾಕಿಕೊಟ್ಟ ಮಹಾನ್ ನಾಯಕ ನೇತಾಜಿ ಸುಭಾಷ್ ಚಂದ್ರ ಭೋಸ್ ಅವರ 125 ನೇ ಜನ್ಮ ದಿನಾಚರಣೆಯ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ವಿಧಾನಸೌಧ ಆವರಣದಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.

ಬಳಿಕ ಮಾತನಾಡಿದ ಅವರು, ರಾಜ್ಯ ಸರ್ಕಾರದ ವತಿಯಿಂದ ವರ್ಷವಿಡೀ ನೇತಾಜಿ ಅವರ 125ನೇ ಜನ್ಮ ದಿನಾಚರಣೆಯನ್ನ ವಿಚಾರಧಾರೆಯ ಮೂಲಕ, ಚರ್ಚೆಗಳ ಮೂಲಕ, ವಿಮರ್ಶೆಗಳ ಮೂಲಕ ಸ್ಮರಣೆ ಮಾಡುವ ಮೂಲಕ ಆಚರಣೆ ಮಾಡಲಿದ್ದೇವೆ ಎಂದರು.

ದೇಶಕ್ಕೆ ಸ್ವಾತಂತ್ರ್ಯ ತಂದುಕೊಡಲು ಹೋರಾಟ ಮಾಡಿದ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನೋತ್ಸವದ ಅಂಗವಾಗಿ ಮುಖ್ಯಮಂತ್ರಿಗಳು ಪ್ರತಿಜ್ಞಾವಿಧಿ ಬೋಧಿಸಿದರು. ಬ್ರಿಟೀಷರ ವಿರುದ್ದ ಸೈನ್ಯವನ್ನ ಕಟ್ಟಿ ಹೋರಾಟ ಮಾಡಿದ ಅಪ್ರತಿಮ ವೀರ ಸುಭಾಷ್ ಚಂದ್ರಭೋಸ್. ಯುವಕರಿಗೆ ಪ್ರೇರಣೆಕೊಟ್ಟದ್ದು. ನೀವು ನನಗೆ ರಕ್ತ ಕೊಡಿ ನಾನು ನಿಮಗೆ ಸ್ವತಂತ್ರ್ಯಕೊಡಿಸುತ್ತೇನೆ ಎಂದು ಯುವಕರನ್ನ ಉತ್ಸಾಹಿಸಿ ಸೈನ್ಯಕಟ್ಟಿ ಹೋರಾಡಿದ ಸೇನಾನಿ ಎಂದು ಅವರ ಸಾಧನೆಯನ್ನ ಸ್ಮರಿಸಿದರು.

Continue Reading

ಕರ್ನಾಟಕ

ನ್ಯಾಯಮೂರ್ತಿ ಕೆ ಎಲ್. ಮಂಜುನಾಥ್ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ

Published

on

ಬೆಂಗಳೂರು: ಜನವರಿ 23 (ಯು.ಎನ್.ಐ.)  ಕರ್ನಾಟಕ ಹೈಕೋರ್ಟಿನ ನಿವೃತ್ತ ನ್ಯಾಯಮೂರ್ತಿ ಕೆ.ಎಲ್. ಮಂಜುನಾಥ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ.

ನ್ಯಾಯಮೂರ್ತಿ ಮಂಜುನಾಥ್ ಅವರು ಅತ್ಯುತ್ತಮ ವಕೀಲರಾಗಿ, ವಕೀಲರ ಸಂಘದ ಅಧ್ಯಕ್ಷರಾಗಿ, ಹೈಕೋರ್ಟ್ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದ್ದಾರೆ. ರಾಜ್ಯದ ನದಿ ನೀರು ಮತ್ತು ಗಡಿ ವಿವಾದ ಪ್ರಾಧಿಕಾರದ ಅಧ್ಯಕ್ಷರಾಗಿ, ಆಂಧ್ರ ಪ್ರದೇಶದ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಸಲ್ಲಿಸಿದ ಸೇವೆ ಅವಿಸ್ಮರಣೀಯವಾದದ್ದು ಎಂದು ಸಿಎಂ ಮೃತ ಗಣ್ಯರ ಸಾಧನೆಗಳನ್ನು ಸ್ಮರಿಸಿದ್ದಾರೆ.

ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ. ಅವರ ಕುಟುಂಬದವರು ಹಾಗೂ ಹಿತೈಷಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

Continue Reading

ಕರ್ನಾಟಕ

ನಿವೃತ್ತ ಹೈಕೋರ್ಟ್‌ ನ್ಯಾಯಮೂರ್ತಿ ಕೆ.ಎಲ್.‌ ಮಂಜುನಾಥ್‌ ವಿಧಿವಶ

Published

on

By

ಬೆಂಗಳೂರು, ಜ 23 (ಯುಎನ್‌ ಐ) ರಾಜ್ಯ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಕೆ.ಎಲ್.ಮಂಜುನಾಥ್ ಶನಿವಾರ ತಡರಾತ್ರಿ ಹೃದಯಾಘಾತದಿಂದ ನಗರದ ನಿವಾಸದಲ್ಲಿ ವಿಧಿವಶರಾಗಿದ್ದಾರೆ.

ಬೆಂಗಳೂರಿನ ಕಾಮಾಕ್ಷಿಪಾಳ್ಯ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ 12 ಗಂಟೆವರೆಗೆ ಪಾರ್ಥಿವ ಶರೀರದ ಅಂತಿಮ ದರ್ಶನ ಇರಲಿದ್ದು, ಮಧ್ಯಾಹ್ನ 3 ಗಂಟೆಗೆ ನೆಲಮಂಗಲದ ತೋಟದಲ್ಲಿ ಅಂತ್ಯ ಸಂಸ್ಕಾರ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ಹೇಳಿವೆ.

ನ್ಯಾಯಮೂರ್ತಿ ಕೆ.ಎಲ್.ಮಂಜುನಾಥ್ ಅವರು 1974ರ ಸೆ.13 ರಂದು ರಾಜ್ಯ ಹೈಕೋರ್ಟ್‌ ನಲ್ಲಿ ವಕೀಲ ವೃತ್ತಿ ಆರಂಭಿಸಿದ್ದರು. 2000ರ ಡಿ.11 ರಂದು ಕರ್ನಾಟಕ ಹೈಕೋರ್ಟ್‌ ಹೆಚ್ಚುವರಿ ನ್ಯಾಯಮೂರ್ತಿಯಾಗಿ, 2001ರ ಅ. 27 ರಂದು ಖಾಯಂ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದರು

Continue Reading
Advertisement
ಅಂಕಣ26 mins ago

ದಟ್ಟ ಕಾಡಿನಲ್ಲಿ ʻಸಪ್ನೋಂ ಕೀ ರಾಣೀʼ

ಅಂಕಣ: ಒಂದೂರಲ್ಲಿ ಒಂದಿನ- 3 ಈ ಒಂದೂರು ಅನ್ನುವ ಮಾಯೆ ಇದೆಯಲ್ಲ, ಅದು ವಿಚಿತ್ರವಾದದ್ದು. ಅಪ್ಪ ಕಥೆ ಹೇಳುವಾಗ ಪ್ರತಿ ಸಲವೂ ಆ ಕಥೆ ಒಂದೂರಿನಲ್ಲಿ ಅಂತಲೇ...

ಕ್ರೀಡೆ46 mins ago

ಅಂಕುಶ್ ರಘುವಂಶಿ ಟೀಂ ಇಂಡಿಯಾದ ಉದಯೋನ್ಮುಖ ತಾರೆ!

ಹೊಸದಿಲ್ಲಿ: ಜನೆವರಿ 23 (ಯು.ಎನ್.ಐ.) ಅಂಡರ್ 19 ವರ್ಲ್ಡ್ ಕಪ್ ಮೂಲಕ ಭಾರತ ಕ್ರಿಕೆಟ್ ತಂಡಕ್ಕೆ ಮತ್ತೊಬ್ಬ ಉದಯೋನ್ಮುಖ ಆಟಗಾರ ದೊರೆತಿದ್ದಾರೆ. ಅವರೇ ದೆಹಲಿ ಮೂಲದ ಅಂಕುಶ್...

ಅಂಕಣ2 hours ago

ಎಳವೆಯಿಂದ ರಂಗಭೂಮಿ

ನಾದಾಂಕಣ – ಡಾ. ನಾ. ದಾಮೋದರ ಶೆಟ್ಟಿ ಭಾರತೀಯ ಹಾಗೂ ಗ್ರೀಕ್‌ ರಂಗಭೂಮಿಗೆ ಬಹುದೊಡ್ಡ ಪರಂಪರೆಇದೆ ಎನ್ನುವುದು ಸಾರ್ವಕಾಲಿಕ ಸತ್ಯ. ಆದರೆ ಯುರೋಪಿನ ರಂಗಭೂಮಿಯಾಗಲೀ ರಷ್ಯಾ, ಅಮೇರಿಕಾ...

ದೇಶ2 hours ago

ಅರುಣಾಚಲದಿಂದ ನಾಪತ್ತೆಯಾಗಿದ್ದ ಯುವಕ ಚೀನಾ ಗಡಿಯಲ್ಲಿ ಪತ್ತೆ!

ಹೊಸದಿಲ್ಲಿ: ಜನೆವರಿ 23 (ಯು.ಎನ್.ಐ.) ಅರುಣಾಚಲ ಪ್ರದೇಶದಿಂದ ನಾಪತ್ತೆಯಾಗಿದ್ದ ಭಾರತೀಯ ಯುವಕ ಚೀನಾ ಗಡಿಯಲ್ಲಿ ಪತ್ತೆಯಾಗಿದ್ದಾನೆ. ಈ ಬಗ್ಗೆ ಚೀನಾ ಸೈನಿಕರು ಭಾರತೀಯ ಯೋಧರಿಗೆ ಮಾಹಿತಿ ನೀಡಿದ್ದು,...

ಹಣಕಾಸು2 hours ago

ಕೆಲಸ ಬದಲಾಯಿಸಿದ್ದೀರಾ? ಚಿಂತೆ ಬಿಡಿ.. ನಿಮ್ಮ ನೆರವಿಗೆ ಇದೆ ಇಪಿಎಫ್ಒ!

ಬೆಂಗಳೂರು: ಜನೆವರಿ 23 (ಯು.ಎನ್.ಐ.) ಉತ್ತಮ ಸಂಬಳ, ಭದ್ರತೆಯುಳ್ಳ ನೌಕರಿ, ವಿಶೇಷ ಸವಲತ್ತುಗಳು.. ಹೀಗೆ ನಾನಾ ಉದ್ದೇಶಗಳಿಂದ ಉದ್ಯೋಗಿಗಳು ತಮ್ಮ ಕೆಲಸವನ್ನು ಬದಲಾಯಿಸುತ್ತಾ ಇರುತ್ತಾರೆ. ಇಂತಹ ಸಂದರ್ಭದಲ್ಲಿ...

ದೇಶ3 hours ago

ನೇತಾಜಿ ಸುಭಾಷ್ ಚಂದ್ರ ಬೋಸ್ ಜಯಂತಿ… ದೇಶಾದ್ಯಂತ ಪರಾಕ್ರಮ ದಿನವಾಗಿ ಆಚರಣೆ

ನವದೆಹಲಿ, ಜ ೨೩( ಯುಎನ್ ಐ) ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ೧೨೫ನೇ ಜನ್ಮಜಯಂತಿ ಇಂದು. ದೇಶಾದ್ಯಂತ ಪರಾಕ್ರಮ ದಿನವಾಗಿ ನೇತಾಜಿ...

ಕರ್ನಾಟಕ3 hours ago

ಇಡೀ ವರ್ಷ ಸುಭಾಷ್ ಚಂದ್ರಬೋಸ್ ಜನ್ಮದಿನಾಚರಣೆಗೆ ತೀರ್ಮಾನ: ಸಿಎಂ

ಬೆಂಗಳೂರು : ಜನೆವರಿ 23 (ಯು.ಎನ್.ಐ.) ರಾಜ್ಯ ಸರ್ಕಾರದ ವತಿಯಿಂದ ವರ್ಷವಿಡೀ ನೇತಾಜಿ ಸುಭಾಷ್ ಚಂದ್ರಬೋಸ್ ರವರ 125ನೇ ಜನ್ಮ ದಿನಾಚರಣೆಯನ್ನ ಆಚರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ...

ಅಂಕಣ3 hours ago

ಸ್ವಾತಂತ್ರ್ಯಕ್ಕಿಂತ ದೊಡ್ಡದು ಇನ್ಯಾವುದಿದೆ ?

‌ಅಂಕಣ: ದಿಟನುಡಿ -೩ ಕಳೆದ ವಾರ ನನ್ನ ಕೈರೋಪ್ರಾಕ್ಟರ್ ರೇ ಬಳಿ ಹೋಗಿದ್ದೆ. ಏಕೋ ಗೊತ್ತಿಲ್ಲ ಕೆಲ ದಿನಗಳ ಹಿಂದೆ ಸೊಂಟ ಹಿಡಿದಿತ್ತು. ಏಳಲು, ಕೂರಲು, ನಿಲ್ಲಲು...

ದೇಶ3 hours ago

ಪಂಜಾಬ್ ಚುನಾವಣೆ: ಕೆಂಪು ಕೋಟೆ ಹಿಂಸಾಚಾರದ ಆರೋಪಿಗೆ ರೈತ ಸಂಘಟನೆಯಿಂದ ಟಿಕೆಟ್!

ಚಂಡೀಗಢ: ಜನೆವರಿ 23 (ಯು.ಎನ್.ಐ.) ರೈತರ ಸಂಘಟನೆ ಯುನೈಟೆಡ್ ಸಮಾಜ ಮೋರ್ಚಾ ಪಂಜಾಬ್ ವಿಧಾನಸಭಾ ಚುನಾವಣೆಗೆ 35 ಅಭ್ಯರ್ಥಿಗಳ ಹೊಸ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಮಾಜಿ...

ಕರ್ನಾಟಕ4 hours ago

ನ್ಯಾಯಮೂರ್ತಿ ಕೆ ಎಲ್. ಮಂಜುನಾಥ್ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ

ಬೆಂಗಳೂರು: ಜನವರಿ 23 (ಯು.ಎನ್.ಐ.)  ಕರ್ನಾಟಕ ಹೈಕೋರ್ಟಿನ ನಿವೃತ್ತ ನ್ಯಾಯಮೂರ್ತಿ ಕೆ.ಎಲ್. ಮಂಜುನಾಥ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ. ನ್ಯಾಯಮೂರ್ತಿ ಮಂಜುನಾಥ್ ಅವರು...

ಟ್ರೆಂಡಿಂಗ್

Share