Connect with us


      
ರಾಜಕೀಯ

‘ಕೈ’ ಹಿಡಿದ ಕೊತ್ತೂರು ಮಂಜುನಾಥ್ ಹಾಗೂ ಎಂ.ಸಿ.ಸುಧಾಕರ್

Iranna Anchatageri

Published

on

ಬೆಂಗಳೂರು: ಜೂನ್ 29 (ಯು.ಎನ್.ಐ.) ಮಾಜಿ ಶಾಸಕರಾದ ಕೋಲಾರ ಜಿಲ್ಲೆಯ ಮುಳಬಾಗಿಲಿನ ಕೊತ್ತೂರು ಮಂಜುನಾಥ್ ಹಾಗೂ ಚಿಂತಾಮಣಿಯ ಡಾ.ಎಂ.ಸಿ. ಸುಧಾಕರ್ ಅವರು ಇಂದು ಎಐಸಿಸಿ ವರಿಷ್ಠರಾದ ರಾಹುಲ್ ಗಾಂಧಿಯವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ.ವೇಣುಗೋಪಾಲ, ರಣದೀಪ್ ಸಿಂಗ್ ಸುರ್ಜೆವಾಲ, ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮಾಜಿ ಸ್ಪೀಕರ್ ರಮೇಶ್ ಕುಮಾರ್, ಶಾಸಕರಾದ ನಸೀರ್ ಅಹಮದ್, ಶಿವಶಂಕರ ರೆಡ್ಡಿ, ಶ್ರೀನಿವಾಸಗೌಡ, ನಂಜೇಗೌಡ, ಅನಿಲ್ ಕುಮಾರ್, ನಾರಾಯಣಸ್ವಾಮಿ ಹಾಜರಿದ್ದರು.

ಈ ಕುರಿತು ಟ್ವೀಟ್ ಮಾಡಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೊತ್ತೂರು ಮಂಜುನಾಥ್ ಹಾಗೂ ಎಂ ಸಿ ಸುಧಾಕರ್ ಅವರ ರಾಜಕೀಯ ಭವಿಷ್ಯ ಉಜ್ವಲವಾಗಲೆಂದು ಶುಭ ಹಾರೈಸಿದ್ದಾರೆ.

Share