Connect with us


      




ದೇಶ

ಗಣಿಗಾರಿಕೆ ವಲಯದಲ್ಲಿ ಭೂಕುಸಿತ; ನಾಲ್ಕು ಮಂದಿ ಸಾವು

Vanitha Jain

Published

on

ಭಿವಾನಿ, ಜನವರಿ 01(ಯು.ಎನ್.ಐ) ಹರಿಯಾಣದ ಭಿವಾನಿ ಜಿಲ್ಲೆಯ ದಡಮ್ ಗಣಿಗಾರಿಕೆ ವಲಯದಲ್ಲಿ ಶನಿವಾರ ಸಂಭವಿಸಿದ ಭೂಕುಸಿತದಲ್ಲಿ ಕನಿಷ್ಠ ನಾಲ್ಕು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ತೋಷಮ್ ಬ್ಲಾಕ್‍ನಲ್ಲಿ ಭೂಕುಸಿತ ಸಂಭವಿಸಿದಾಗ ಸುಮಾರು ಅರ್ಧ ಡಜನ್ ಡಂಪರ್ ಟ್ರಕ್‍ಗಳು ಮತ್ತು ಕೆಲವು ಯಂತ್ರಗಳು ಅವಶೇಷಗಳಡಿಯಲ್ಲಿ ಹೂತುಹೋಗಿವೆ ಎಂದು ಅವರು ಹೇಳಿದರು.

ಸ್ಥಳಕ್ಕಾಗಮಿಸಿದ ಹರಿಯಾಣ ಕೃಷಿ ಸಚಿವ ಜೆ.ಪಿ.ದಲಾಲ್, ಕೆಲವರು ಸಾವನ್ನಪ್ಪಿದ್ದಾರೆ. ಸದ್ಯಕ್ಕೆ ನಿಖರ ಅಂಕಿಅಂಶ ನೀಡಲು ಸಾಧ್ಯವಿಲ್ಲ. ವೈದ್ಯರ ತಂಡ ಆಗಮಿಸಿದೆ. ಸಾಧ್ಯವಾದಷ್ಟು ಜನರನ್ನು ಉಳಿಸಲು ಪ್ರಯತ್ನಿಸುತ್ತೇವೆ ಎಂದು ಹೇಳಿದರು.

ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಟ್ವೀಟ್ ಮಾಡಿ, “ಭಿವಾನಿಯಲ್ಲಿ ದಡಮ್ ಗಣಿಗಾರಿಕೆ ವಲಯದಲ್ಲಿ ಸಂಭವಿಸಿದ ದುರದೃಷ್ಟಕರ ಭೂಕುಸಿತದಿಂದ ದುಃಖವಾಗಿದೆ. ತ್ವರಿತ ರಕ್ಷಣಾ ಕಾರ್ಯಾಚರಣೆ ಮತ್ತು ಗಾಯಾಳುಗಳಿಗೆ ತಕ್ಷಣದ ಸಹಾಯ ಒದಗಿಸುವ ಸಲುವಾಗಿ ನಾನು ಸ್ಥಳೀಯ ಆಡಳಿತದೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ ಎಂದು ಹೇಳಿದ್ದಾರೆ

ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಸುಖ್ಬೀರ್ ತಿಳಿಸಿದ್ದಾರೆ.

Share