Connect with us


      




ರಾಜಕೀಯ

ವಿಧಾನಪರಿಷತ್ ಚುನಾವಣೆ: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿಗೆ ಗೆಲುವು

Vanitha Jain

Published

on

ದಕ್ಷಿಣ ಕನ್ನಡ, ಡಿಸೆಂಬರ್ 13(ಯು.ಎನ್.ಐ) ವಿಧಾನಪರಿಷತ್ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು ದಕ್ಷಿಣ ಕನ್ನಡ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ 1274 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಹಾಸನ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸೂರಜ್ ರೇವಣ್ಣ ಮೊದಲ ಪ್ರಾಶಸ್ತ್ಯದಲ್ಲೇ ಗೆಲುವಿನ ಗರಿ ಮೂಡಿಸಿಕೊಂಡಿದ್ದಾರೆ.

ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿರುವ ಸೂರಜ್ ರೇವಣ್ಣ, 2247 ಮತಗಳನ್ನು ಪಡೆದು ಗೆಲುವಿನ ನಗೆ ಬೀರಿದ್ದಾರೆ. ಬಿಜೆಪಿಯ ವಿಶ್ವನಾಥ್ 374 ಮತಗಳು, ಕಾಂಗ್ರೆಸ್ ಅಭ್ಯರ್ಥಿ ಎ ಶಂಕರ್ 747 ಮತಗಳಿಗೆ ತೃಪ್ತಿಪಟ್ಟುಕೊಂಡಿದ್ದಾರೆ.

ಕೊಡಗು: ನೂರಾ ಐದು ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಸುಜಾ ಕುಶಾಲಪ್ಪ ಗೆಲುವು ಸಾಧಿಸಿದ್ದು, 705 ಮತಗಳು ಬಂದಿವೆ. ಕಾಂಗ್ರೆಸ್ ನ ಮಂಥರ್ ಗೌಡ ಅವರಿಗೆ 603 ಮತಗಳು ಸಿಕ್ಕಿವೆ.

ಬೀದರ್:

  • ಕಾಂಗ್ರೆಸ್ ಅಭ್ಯರ್ಥಿ ಭೀಮರಾವ್ ಪಾಟೀಲ್ ಜಯ

ಬೆಂಗಳೂರು ನಗರ :

  • ಬಿಜೆಪಿ ಅಭ್ಯರ್ಥಿ ಗೋಪಿನಾಥ್ ರೆಡ್ಡಿ ಗೆಲುವು
  • ಕಾಂಗ್ರೆಸ್ ನ ಕೆಜಿಎಫ್ ಬಾಬು ಸೋಲು

ಚಿತ್ರದುರ್ಗ

  • ಬಿಜೆಪಿ ಅಭ್ಯರ್ಥಿ ಕೆ.ಎಸ್.ನವೀನ್ ಗೆಲುವು

 ಉತ್ತರ ಕನ್ನಡ

  • ಬಿಜೆಪಿ ಅಭ್ಯರ್ಥಿ ಗಣಪತಿ ಗಣಪತಿ ಉಳ್ವೇಕರ್ ಗೆಲುವು

ಬಳ್ಳಾರಿ

  • ಬಿಜೆಪಿ ಅಭ್ಯರ್ಥಿ ವೈ.ಎಂ.ಸತೀಶ್ ಗೆಲುವು

ಬಿಜಾಪುರ

  • ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಗೌಡ ಪಾಟೀಲ್ ಗೆಲುವು

ಚಿಕ್ಕಮಗಳೂರು

  • ಬಿಜೆಪಿ ಅಭ್ಯರ್ಥಿ ಎಂ.ಕೆ.ಪ್ರಾಣೇಶ್ ಗೆಲುವು

ದಕ್ಷಿಣ ಕನ್ನಡ

  • ಬಿಜೆಪಿ ಅಭ್ಯರ್ಥಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಗೆಲುವು

ದಾವಣಗೆರೆ- ಚಿತ್ರದುರ್ಗ

  • ಬಿಜೆಪಿ ಅಭ್ಯರ್ಥಿ ಕೆ ಎಸ್ ನವೀನ್ ವಿಜಯೋತ್ಸವ

ಬೆಳಗಾವಿ

  • ಬಿಜೆಪಿ ಅಧಿಕೃತ ಅಭ್ಯರ್ಥಿ ಮೂರನೇ ಸ್ಥಾನಕ್ಕೆ

ಕೋಲಾರ

  • ಕಾಂಗ್ರೆಸ್ ಅಭ್ಯರ್ಥಿ ಅನಿಲ್ ಕುಮಾರ್ ಗೆಲುವು

ಧಾರವಾಡ

  • ಕಾಂಗ್ರೆಸ್ ಅಭ್ಯರ್ಥಿ ಸಲೀಂ ಅಹ್ಮದ್  ಗೆಲುವು

ಮೈಸೂರು

  • ಕಾಂಗ್ರೆಸ್ ಅಭ್ಯರ್ಥಿ ಡಾ.ಡಿ.ತಿಮ್ಮಯ್ಯ ಗೆಲುವು

ಮಂಡ್ಯ

  • ಕಾಂಗ್ರೆಸ್ ಅಭ್ಯರ್ಥಿ ದಿನೇಶ್ ಗೂಳಿಗೌಡ  ಗೆಲುವು

Share