Published
6 months agoon
By
Vanitha Jainಬೆಂಗಳೂರು ಗ್ರಾಮಾಂತರ, ಡಿಸೆಂಬರ್ 7, (ಯು.ಎನ್.ಐ): ಬೆಂಗಳೂರು ಗ್ರಾಮಾಂತರ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ರಾಜ್ಯ ವಿಧಾನ ಪರಿಷತ್ತಿಗೆ ನಡೆಯುವ ದ್ವೈವಾರ್ಷಿಕ ಚುನಾವಣೆಗೆ ಡಿಸೆಂಬರ್ 10ರಂದು ಮತದಾನ ನಡೆಯಲಿದ್ದು, ಮತದಾನದ ಕೊನೆಯ ಒಂದು ಗಂಟೆಯ ಅವಧಿಯಲ್ಲಿ ಕೋವಿಡ್ ಸೋಂಕಿತರಿಗೆ ಪಿಪಿಇ ಕಿಟ್ ಧರಿಸಿ, ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಬೆಂಗಳೂರು ಗ್ರಾಮಾಂತರ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಚುನಾವಣಾಧಿಕಾರಿಗಳಾದ ಕೆ.ಶ್ರೀನಿವಾಸ್ ಅವರು ತಿಳಿಸಿದ್ದಾರೆ.
ಡಿಸೆಂಬರ್ 10ರಂದು ಬೆಳಿಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದ್ದು, ಮಧ್ಯಾಹ್ನ 3 ಗಂಟೆಯಿಂದ ಸಂಜೆ 4 ಗಂಟೆಯವರೆಗಿನ ಒಂದು ಗಂಟೆಗಳ ಕಾಲಾವಧಿಯಲ್ಲಿ ಅರೋಗ್ಯ ಸಿಬ್ಬಂದಿಗಳ ಉಸ್ತುವಾರಿಯಲ್ಲಿ ಕೋವಿಡ್-19 ಮಾರ್ಗಸೂಚಿಗಳನ್ನು ಅನುಸರಿಸಿ, ಪಿಪಿಇ ಕಿಟ್ ಧರಿಸಿ, ಕೋವಿಡ್ ಸೋಂಕಿತರು ಸಂಬಂಧಿಸಿದ ಮತಗಟ್ಟೆಯಲ್ಲಿ ಮತದಾನ ಮಾಡಬಹುದಾಗಿದೆ.
ಪ್ರತಿ ಮತಗಟ್ಟೆಗಳಲ್ಲಿಯೂ ಕೋವಿಡ್-19 ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸುವುದು ಕಡ್ಡಾಯವೆಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಬೆಂಗಳೂರು ಗ್ರಾಮಾಂತರ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಚುನಾವಣಾಧಿಕಾರಿಗಳಾದ ಕೆ.ಶ್ರೀನಿವಾಸ್ ತಿಳಿಸಿದ್ದಾರೆ.
ರಾಜ್ಯದಲ್ಲಿ 191 ಹೊಸ ಕೋವಿಡ್ ಪ್ರಕರಣಗಳು ಪತ್ತೆ
ರಾಜ್ಯದಲ್ಲಿ 104 ಹೊಸ ಕೋವಿಡ್ ಪ್ರಕರಣಗಳು ಪತ್ತೆ: ಸಚಿವ ಕೆ. ಸುಧಾಕರ್
ಕೋವಿಡ್ ಹೆಚ್ಚಳ ಭೀತಿ: ಮಾಸ್ಕ್ ಕಡ್ಡಾಯಗೊಳಿಸಿದ ಕೇರಳ ಸರ್ಕಾರ
ಕೊರೋನಾ ವಿರುದ್ಧ ಮುನ್ನೆಚ್ಚರಿಕೆ ಕ್ರಮ ಅನುಸರಿಸಿ: ಮೋದಿ
ಕೋವಿಡ್ -19 ಪ್ರಕರಣಗಳು ಹೆಚ್ಚಳ: ಕಳೆದ 24 ಗಂಟೆಗಳಲ್ಲಿ 30 ಸಾವುಗಳು
ಕೋವಿಡ್ ಹೆಚ್ಚಳ: ದೆಹಲಿ ಸರ್ಕಾರ ಹೊರಡಿಸಿದ ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ ಏನು?