Connect with us


      
ಕರ್ನಾಟಕ

ರಾಜ್ಯಾದ್ಯಂತ ಮದ್ಯ ಮಾರಾಟ ಸಂಪೂರ್ಣ ಬಂದ್

Vanitha Jain

Published

on

ಬೆಂಗಳೂರು: ಜನೆವರಿ 06 (ಯು.ಎನ್.ಐ.) ಕೋವಿಡ್ ಹೆಚ್ಚುತ್ತಿರುವ ಕಾರಣ ಸರ್ಕಾರ ಘೋಷಿಸಿರುವ ವಾರಾಂತ್ಯದ ಲಾಕ್ ಡೌನ್ ಹಿನ್ನೆಲೆ ಇಂದು ರಾತ್ರಿ ಎಂಟು ಗಂಟೆಯಿಂದ ಸೋಮವಾರ ಬೆಳಗಿನವರೆಗೆ ರಾಜ್ಯಾದ್ಯಂತ ಮದ್ಯ ಮಾರಾಟ ಸಂಪೂರ್ಣ ನಿಷೇಧಿಸಲಾಗಿದೆ ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಜನರ ಹಿತದೃಷ್ಟಿಯಿಂದ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದ್ದು, ಎಲ್ಲ ಬಾರ್ ಅಂಡ್ ರೆಸ್ಟೊಂರೆಂಟ್ ಮಾಲೀಕರು ಸಹಕರಿಸಬೇಕು ಎಂದು ಮನವಿ ಮಾಡಿದರು.

ರಾಜ್ಯದ ಜನರ ಆರೋಗ್ಯ ಕಾಪಾಡುವುದು ಸರ್ಕಾರದ ಆದ್ಯ ಕರ್ತವ್ಯವಾಗಿದ್ದು, ಈ ಹಿನ್ನೆಲೆಯಲ್ಲಿ ಇಂದು ರಾತ್ರಿ 8 ಗಂಟೆಯಿಂದ ಸಂಪೂರ್ಣವಾಗಿ ರಾಜ್ಯಾದ್ಯಂತ ಮದ್ಯ ಮಾರಾಟ ನಿಷೇಧಿಸಲಾಗಿದೆ ಮಾಡಲಾಗಿದೆ ಎಂದರು.

Share