Connect with us


      




ರಾಜಕೀಯ

ಬಂಡೆ, ಗೋಮಾಳ ನುಂಗುವುದು ಡಿ.ಕೆ.ಶಿವಕುಮಾರ್ ಸಾಧನೆ

UNI Kannada

Published

on

ಬಂಡೆ,ಗೋಮಾಳ ನುಂಗುವುದೇ ಡಿ.ಕೆ.ಶಿವಕುಮಾರ್ ಸಾಧನೆ

ಬೆಂಗಳೂರು,ಜನವರಿ 11(ಯು.ಎನ್.ಐ) ಬಂಡೆ ನುಂಗುವುದು, ಗುಡ್ಡೆ ನುಂಗುವುದು, ಗೋಮಾಳ ನುಂಗುವುದೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಾಧನೆ ಎಂದು ಬಿಜೆಪಿ ವಕ್ತಾರ ಎಂ.ಜಿ.ಮಹೇಶ್ ಆರೋಪ ಮಾಡಿದ್ದಾರೆ.

ಬಿಜೆಪಿ ಕೇಂದ್ರ ಕಚೇರಿ ಜಗನ್ನಾಥ ಭವನದಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಕೀಳು ಮಟ್ಟದ ಭಾಷೆ ಬಳಸುವುದು ರಾಜಕೀಯ ಸಂಸ್ಕೃತಿಯೇ? ಎಂದು ಪ್ರಶ್ನಿಸಿದ ಮಹೇಶ್, ಕೊತ್ವಾಲ್ ರಾಮಚಂದ್ರನ ಗುರುಕುಲದಲ್ಲಿ ಕಲಿತವರಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ ಎಂದು ಡಿ.ಕೆ.ಶಿವಕುಮಾರ್‌ರನ್ನು ತಿವಿದರು.

ಸರ್ಕಾರ ಕೋರ್ಟ್ ಒಪ್ಪಿಗೆ ಸಿಕ್ಕಿದ ಬಳಿಕ ಮೇಕೆದಾಟು ವಿಚಾರದಲ್ಲಿ ವಿಳಂಬ ಮಾಡುವುದಿಲ್ಲಮೇಕದಾಟುವನ್ನೂ ಬಿಜೆಪಿ ಪೂರ್ಣಗೊಳಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಾಂಗ್ರೆಸ್ ನಾಟಕವನ್ನು ದೇಶದ ಜನರು ನೋಡಿದ್ದಾರೆ.ಕಾಂಗ್ರೆಸ್‍ಗೆ ಮತ್ತು ಅದರ ನಾಯಕರಿಗೆ ಒಂದು ಕ್ಯಾರೆಕ್ಟರ್ ಇಲ್ಲ. ಸ್ವಾರ್ಥದ ರಾಜಕೀಯ, ಅಧಿಕಾರದ ಹಪಾಹಪಿತನಕ್ಕೆ ಮೇಕೆದಾಟು ಪಾದಯಾತ್ರೆ ನಡೆದಿದೆ.ನಿಜಲಿಂಗಪ್ಪ ಅವರ ಕಾಲದಿಂದ ಪ್ರಾರಂಭಿಸಿದ ಯೋಜನೆ ಇಲ್ಲಿವರೆಗೆ ಏಕೆ ಬಂತು ಎಂದು ಡಿ.ಕೆ.ಶಿವಕುಮಾರ್ ಉತ್ತರಿಸಬೇಕು. ಮೇಕೆದಾಟು ಯೋಜನೆ ವಿಳಂಬದಿಂದ ಯೋಜನಾ ವೆಚ್ಚ 5 ಸಾವಿರ ಕೋಟಿಯಿಂದ 10 ಸಾವಿರ ಕೋಟಿಗೆ ಏರಿದೆ.4 ದಶಕಗಳ ಕಾಲ ರಾಜಕಾರಣ ಮಾಡಿದ ಡಿ.ಕೆ.ಶಿವಕುಮಾರ್ ಅವರ ಪ್ರಮುಖ ಹೆಜ್ಜೆ ಗುರುತುಗಳು ಏನು ಎಂದು ಪ್ರಶ್ನಿಸಿದರು.

ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷದ್ದು ಕೇವಲ ಶಂಕುಸ್ಥಾಪನೆಯ ಸರಕಾರವಾಗಿತ್ತು. 1500ಕ್ಕೂ ಹೆಚ್ಚು ಯೋಜನೆಗಳು ಹಾಗೇ ಉಳಿದಿದ್ದವು. ಅಂಥ ಯೋಜನೆಗಳನ್ನು ಪೂರ್ಣಗೊಳಿಸಲು 14 ಲಕ್ಷ ಕೋಟಿ ರೂಪಾಯಿ ಹೂಡುವ ನಿರ್ಧಾರವನ್ನು ನರೇಂದ್ರ ಮೋದಿ ಜಾರಿಗೊಳಿಸಿದರು.ದೆಹಲಿಗೆ ಹಿಮಾಚಲಪ್ರದೇಶದಿಂದ ಕುಡಿಯುವ ನೀರು ಸರಬರಾಜು ಮಾಡುವ 55 ವರ್ಷಗಳ ಕಾಲ ಕಾಂಗ್ರೆಸ್‍ನಿಂದಾಗಿ ನೆನೆಗುದಿಗೆ ಬಿದ್ದ ರೇಣುಕುಂಜ್ ಯೋಜನೆಯನ್ನು ನರೇಂದ್ರ ಮೋದಿ ಆರು ತಿಂಗಳ ಹಿಂದೆ ಪೂರ್ಣಗೊಳಿಸಿದ್ದಾರೆ. ದೇವೇಗೌಡರು ಪ್ರಧಾನಿಯಾಗಿದ್ದಾಗ ಅಸ್ಸಾಂನಲ್ಲಿ ಬಿಗಾನೆಲ್ ಸೇತುವೆಗೆ ಶಂಕುಸ್ಥಾಪನೆ ಮಾಡಿದ್ದನ್ನು 019ರಲ್ಲಿ ಬಿಜೆಪಿ ಕೇಂದ್ರ ಸರಕಾರ ಪೂರ್ಣಗೊಳಿಸಿದೆ. ನುಡಿದಂತೆ ನಡೆಯುವ ಸರಕಾರ ಬಿಜೆಪಿ ಸರಕಾರ ಎಂದು ಮಹೇಶ್ ಸ್ಪಷ್ಟಪಡಿಸಿದರು.

ರಾಜ್ಯ ಕಾರ್ಯಕಾರಿಣಿ ಸದಸ್ಯ ವಿವೇಕ್ ರೆಡ್ಡಿ ಮಾತನಾಡಿ, 2007ರಲ್ಲಿ ಮೇಕೆದಾಟು ಯೋಜನೆಗೆ ನದಿ ನೀರು ಹಂಚಿಕೆ ಕುರಿತ ಟ್ರಿಬ್ಯೂನಲ್ ಒಪ್ಪಿಗೆ ನೀಡಿತ್ತು. ಇದನ್ನು ವಿರೋಧಿಸಿ ತಮಿಳುನಾಡು ಸರಕಾರ ಬಲವಾದ ಪ್ರತಿವಾದ ಮಂಡಿಸಿತು. ಮೇಲಿನ ರಾಜ್ಯವಾಗಿ ನಮಗೆ ಅದರ ಮೇಲೆ ನಿಯಂತ್ರಣ ಇದೆ ಎಂದು ಕರ್ನಾಟಕ ವಾದ ಮುಂದಿಟ್ಟಿತು. ಅಣೆಕಟ್ಟು ನಿರ್ಮಾಣದ ಬಗ್ಗೆ ಪ್ರಸ್ತಾಪಿಸಿತು. 2013ರಿಂದ 2018ರವರೆಗೆ ಆಡಳಿತ ನಡೆಸಿದ ಕಾಂಗ್ರೆಸ್ ಸರಕಾರ ಡಿಪಿಆರ್ ಸಿದ್ಧಪಡಿಸಲು 5 ವರ್ಷ ತೆಗೆದುಕೊಂಡಿತು ಎಂದು ಆಕ್ಷೇಪಿಸಿದರು.

ಡಿಪಿಆರ್ ಕೇಂದ್ರಕ್ಕೆ ಪ್ರಸ್ತಾಪ ಸಲ್ಲಿಸಲು 2 ವರ್ಷ ಬೇಕಾಯಿತು. 4 ಜಿ ಕ್ಲಿಯರೆನ್ಸ್‍ಗೆ 2 ವರ್ಷ ಬೇಕಾಯಿತು. ತಂತ್ರಜ್ಞಾನ ಕಂಪೆನಿ ಆಯ್ಕೆಗೆ 3 ವರ್ಷ ಬೇಕಾಯಿತು. ಕಡತಗಳ ಮೇಲೆ ಕುಳಿತು ದೂಳು ಪೇರಿಸುವ ಪರಿಸ್ಥಿತಿಯನ್ನು ಕಾಂಗ್ರೆಸ್ ಆಗಿನ ಸರಕಾರ ನಿರ್ಮಾಣ ಮಾಡಿತ್ತು. ನಮ್ಮ ಸರಕಾರವು ಡಿಪಿಆರ್ ಅನ್ನು ಕೂಡಲೇ ಕೇಂದ್ರಕ್ಕೆ ಸಲ್ಲಿಸಿದೆ. ಡಿ.ಕೆ.ಶಿವಕುಮಾರ್ ಹಿಂದೆ ಪವರ್ ಮಿನಿಸ್ಟರ್ ಆಗಿದ್ದರು. ಆದರೆ, ಕೇಂದ್ರ ಸರಕಾರಕ್ಕೆ ಪ್ರಸ್ತಾಪ ಸಲ್ಲಿಸಿದರೇ? ಎಂದು ಕೇಳಿದರು.

ಯೋಜನೆಯನ್ನು ಮುನ್ನೆಲೆಗೆ ತಂದಿದ್ದೇ ಯಡಿಯೂರಪ್ಪ ಮತ್ತು ಬೊಮ್ಮಾಯ ಅವರ ಸರಕಾರ ಎಂದ ಅವರು, 2044-45 ಕ್ಕೆ ಬೆಂಗಳೂರಿಗೆ 63 ಟಿಎಂಸಿ ನೀರು ಬೇಕು. ಯೋಜನೆಗೆ ಅರಣ್ಯ ಇಲಾಖೆ ಒಪ್ಪಿಗೆ ಇದಕ್ಕೆ ಇದೆ. ಆದರೆ, ಕಾಂಗ್ರೆಸ್ ಪುನಶ್ಚೇತನಕ್ಕಾಗಿ ಒಮಿಕ್ರಾನ್ ಸಂದರ್ಭದಲ್ಲೇ ಈ ಪಾದಯಾತ್ರೆ ನಡೆಸಬೇಕಿತೇ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಕಾನೂನು ಪ್ರಕೋಷ್ಠದ ರಾಜ್ಯ ಸಂಚಾಲಕ ಯೋಗೇಂದ್ರ ಹೂಡಘಟ್ಟ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Share