Connect with us


      




ಸಿನೆಮಾ

ಟ್ವಿಟರ್ ನಲ್ಲಿ ಅಪರೂಪದ ಸಾಧನೆ ಮಾಡಿದ ಭಾರತದ ಏಕೈಕ ನಟ ಮಹೇಶ್ ಬಾಬು

UNI Kannada

Published

on

ಜನವರಿ,02 (ಯು.ಎನ್.ಐ.) ಸೂಪರ್ ಸ್ಟಾರ್ ಮಹೇಶ್ ಬಾಬು ಸಾಮಾಜಿಕ ಜಾಲತಾಣದಲ್ಲಿ ಅಪರೂಪದ ಸಾಧನೆ ಮಾಡಿದ್ದಾರೆ. ಅವರು ಇತ್ತೀಚೆಗೆ ಟ್ವಿಟರ್ ವೇದಿಕೆಯಲ್ಲಿ ಹೊಸ ದಾಖಲೆಯನ್ನು ನಿರ್ಮಿಸುವುದರೊಂದಿಗೆ ಹೊಸ ವರ್ಷವನ್ನು ಪ್ರಾರಂಭಿಸಿದರು.

ಮಹೇಶ್ ತಮ್ಮ ಕುಟುಂಬದೊಂದಿಗೆ ದುಬೈನಲ್ಲಿ ಹೊಸ ವರ್ಷವನ್ನು ಆಚರಿಸಿದರು. ಈ ಸಂದರ್ಭದಲ್ಲಿ ಅವರು ತಮ್ಮ ಕುಟುಂಬದೊಂದಿಗೆ ಇರುವ ಫೋಟೋವನ್ನು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿ ಎಲ್ಲಾ ಅಭಿಮಾನಿಗಳಿಗೆ ಶುಭ ಹಾರೈಸಿದರು . ಈ ಟ್ವೀಟ್ ಮೈಕ್ರೋಬ್ಲಾಗಿಂಗ್ ಸೈಟ್‌ನಲ್ಲಿ ದಾಖಲೆ ಸಂಖ್ಯೆಯ ಲೈಕ್‌ಗಳನ್ನು ಗಳಿಸುವ ಮೂಲಕ ಸಂಚಲನ ಸೃಷ್ಟಿಸಿದೆ.

ಮಹೇಶ್ ಬಾಬು ಒಂದು ಟ್ವೀಟ್ ಮಾಡಿದರೆ ಲಕ್ಷಕ್ಕೂ ಅಧಿಕ ಲೈಕ್ಸ್ ಬರುತ್ತವೆ. ಅವರು ಟ್ವೀಟ್ ಮಾಡಿದ ಕೆಲವೇ ಗಂಟೆಗಳಲ್ಲಿ 1 ಲಕ್ಷಕ್ಕೂ ಹೆಚ್ಚು ಲೈಕ್‌ಗಳನ್ನು ಪಡೆದ 31 ನೇ ಟ್ವೀಟ್ ಅನ್ನು ಹೊಸ ವರ್ಷದ ಸಂದರ್ಭದಲ್ಲಿ ಮಾಡಲಾಗಿದೆ. ಈ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಈ ಅಪರೂಪದ ಸಾಧನೆ ಮಾಡಿದ ಏಕೈಕ ಭಾರತೀಯ ನಟ ಎಂಬ ಹೆಗ್ಗಳಿಕೆಗೆ ಮಹೇಶ್ ಬಾಬು ಪಾತ್ರರಾಗಿದ್ದಾರೆ.

Share