Published
6 months agoon
By
Vanitha Jainಚಂಡೀಗಡ: ಜನೆವರಿ 11 (ಯು.ಎನ್.ಐ.) ಫೆಬ್ರವರಿ 10 ರಿಂದ ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ ಪ್ರಾರಂಭವಾಗಲಿದೆ. ಹಾಗಾಗಿ ಕೆಲವು ಆಕಾಂಕ್ಷಿಗಳು ತಮ್ಮ ಇಷ್ಟದ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿದ್ದಾರೆ. ಕೆಲವರು ತಾವಿರುವ ಪಕ್ಷ ತೊರೆದು ತಮ್ಮ ಇಷ್ಟದ ಪಕ್ಷಕ್ಕೆ ಜೊತೆಯಾಗುತ್ತಿದ್ದಾರೆ.
ಬಾಲಿವುಡ್ ನಟ ಸೋನು ಸೂದ್ ಸಹೋದರಿ ಮಾಳವಿಕಾ ಸೂದ್ ಪಂಜಾಬಿನ ಮೋಗಾ ಜಿಲ್ಲೆಯ ಸೂದ್ ನಿವಾಸದಲ್ಲಿ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಂಡಿದ್ದಾರೆ.
ರಾಜ್ಯದ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ ಮತ್ತು ಸಿಧು ಅವರ ಸಮ್ಮುಖದಲ್ಲಿ ಜೊತೆಯಾದ ಮಾಳವಿಕ ಸೂದ್ಗೆ ಸೋನು ಸೂದ್ ಬೆಂಬಲ ಸೂಚಿಸಿದ್ದಾರೆ.
ಪಕ್ಷ ಸೇರ್ಪಡೆಯ ವೇಳೆ ಮಾತನಾಡಿದ ಮಾಳವಿಕಾ ಸೂದ್, ಜನಸೇವೆಗಾಗಿ ತನ್ನನ್ನು ತಾನು ಅರ್ಪಿಸಿಕೊಳ್ಳಲು ರಾಜಕೀಯಕ್ಕೆ ಧುಮುಕಿದ್ದೇನೆ ಎಂದು ಹೇಳಿದರು. ಇಂಜಿನಿಯರಿಂಗ್ ಓದಿರುವ ಮಾಳವಿಕ ಸ್ವತಃ ಎನ್ಜಿಒ ಮೂಲಕ ಸಮಾಜಸೇವೆ ಮಾಡುತ್ತಿದ್ದಾರೆ.
ಪಂಜಾಬ್ ಚುನಾವಣೆ ಫೆಬ್ರವರಿ 14ರಂದು ನಡೆಯಲಿದ್ದು, ಈ ಬೆಳವಣಿಗೆಯನ್ನು ರಾಜ್ಯ ಕಾಂಗ್ರೆಸ್ ಘಟಕದ ಅಧ್ಯಕ್ಷ ನವಜೋತ್ ಸಿಧು ಇದನ್ನು ಗೇಮ್ ಚೇಂಜರ್ ಎಂದು ಕರೆದಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ನವಜೋತ್ ಸಿಂಗ್ ಸಿಧು, ಮನುಷ್ಯನಿಗೆ ಸಂತಸ ನೀಡಬೇಕೆಂಬ ಮನಸ್ಸಿನ ಮುಂದೆ ಹೆಸರು ಖ್ಯಾತಿ ಇದ್ಯಾವುದೂ ಬರುವುದಿಲ್ಲ. ಕುರ್ಚಿಗಲು ಜನರನ್ನು ಆಕರ್ಷಿಸುವುದಿಲ್ಲ. ಆದರೆ ಮನುಷ್ಯರು ಕುರ್ಚಿಗಳನ್ನು ಅಲಂಕರಿಸುತ್ತಾರೆ ಎಂದು ಹೇಳುವ ಮೂಲಕ ಮಾಳವಿಕ ಅವರನ್ನು ಪಕ್ಷಕ್ಕೆ ಸ್ವಾಗತಿಸಿದ್ದಾರೆ. ಮುಂಬರುವ ಪಂಜಾಬ್ ವಿಧಾನಸಭಾ ಚುನಾವಣೆ ಫೆಬ್ರವರಿ 14ರಂದು ನಡೆಯಲಿದೆ.
ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಉದ್ಧವ್ ಠಾಕ್ರೆ
ರಾಜಸ್ಥಾನ ಶಿರಚ್ಛೇದ: ಹಂತಕರಿಗೆ ಪಾಕಿಸ್ತಾನದಲ್ಲಿ 15 ದಿನ ಟ್ರೈನಿಂಗ್
National Statistics Day: ದೌರ್ಜನ್ಯಕ್ಕೆ ಒಳಗಾದವರ ಸಂಖ್ಯೆ ಶೇ.10ರಷ್ಟು ಹೆಚ್ಚಳ!
ಉದಯಪುರ ಹತ್ಯೆ: ಎನ್ಐಎ ತನಿಖೆ – ಕೇಂದ್ರ ಸರಕಾರ ಆದೇಶ
ಉದಯಪುರ ಟೈಲರ್ ಹತ್ಯೆ ಖಂಡಿಸಿದ ಮಮತಾ ಬ್ಯಾನರ್ಜಿ
ಬಿಹಾರ ರಾಜಕೀಯ: ಓವೈಸಿ ಪಾರ್ಟಿಯಿಂದ ನಾಲ್ವರು ಶಾಸಕರು ಆರ್ಜೆಡಿಗೆ ಜಿಗಿತ!