Connect with us


      
ದೇಶ

ಟಿ- 20 ವಿಶ್ವಕಪ್ ಕ್ರಿಕೆಟ್: ಪಾಕಿಸ್ತಾನದ ಗೆಲುವನ್ನು ಸಂಭ್ರಮಿಸಿದ ಪತ್ನಿ, ಅತ್ತೆ: ದೂರು ನೀಡಿದ ಪತಿ

Bindushree Hosuru

Published

on

ರಾಂಪುರ: ನ. 7 (ಯುಎನ್ಐ) ಅಕ್ಟೋಬರ್ 24 ರಂದು ನಡೆದ ಟಿ- 20 ವಿಶ್ವಕಪ್ ಕ್ರಿಕೆಟ್​​ ಪಂದ್ಯದಲ್ಲಿ ಭಾರತದ ವಿರುದ್ಧ ಪಾಕಿಸ್ತಾನ ಗೆದ್ದಿತ್ತು. ಪಾಕಿಸ್ತಾನದ ಗೆಲುವನ್ನು ಸಂಭ್ರಮಿಸಿದ ಪತ್ನಿ ಮತ್ತು ಅತ್ತೆಯ ವಿರುದ್ಧ ಉತ್ತರ ಪ್ರದೇಶದ ರಾಂಪುರದಲ್ಲಿ ವ್ಯಕ್ತಿಯೊಬ್ಬರು ದೂರು ನೀಡಿದ್ದಾರೆ.

ಪಾಕಿಸ್ತಾನದ ವಿರುದ್ಧ ಭಾರತ ಸೋತ ನಂತರ ಪತ್ನಿ ರಬಿಯಾ ಶಮ್ಸಿ ಮತ್ತು ಕುಟುಂಬದವರು ಪಟಾಕಿ ಸಿಡಿಸಿ ಸಂಭ್ರಮಿಸಿದ್ದರು ಎಂದು ದೂರುದಾರ ಇಶಾನ್ ಮಿಯಾ ಹೇಳಿದ್ದಾರೆ.

ವ್ಯಕ್ತಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ನಮ್ಮ ಗಮನಕ್ಕೆ ಬಂದ ನಂತರ, ಭಾರತೀಯ ಕ್ರಿಕೆಟ್ ತಂಡವನ್ನು ಗೇಲಿ ಮಾಡಿದ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅಂಕಿತ್ ಮಿತ್ತಲ್ ಹೇಳಿದ್ದಾರೆ.

ಪಾಕಿಸ್ತಾನ ಗೆದ್ದಿರುವುದನ್ನು ವಾಟ್ಸಾಪ್ ಸ್ಟೇಟಸ್​ನಲ್ಲಿ ಸಹ ಹಾಕಿಕೊಂಡಿದ್ದರು ಎಂದು ಅಜೀಮ್ ನಗರದ ನಿವಾಸಿ ಮಿಯಾ ಆರೋಪಿಸಿದ್ದಾರೆ.

ರಾಂಪುರ ಪೊಲೀಸರು ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 153-ಎ ಮತ್ತು ಮಾಹಿತಿ ತಂತ್ರಜ್ಞಾನ (ತಿದ್ದುಪಡಿ) ಕಾಯ್ದೆ, 2008 ರ ಸೆಕ್ಷನ್ 67 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಮದುವೆಯಾದ ಕೆಲವೇ ದಿನಗಳ ಬಳಿಕ ಗಂಡ ಮತ್ತು ಹೆಂಡತಿ ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ಪತ್ನಿ ತನ್ನ ಕುಟುಂಬದೊಂದಿಗೆ ವಾಸಿಸುತ್ತಿದ್ದು, ಪತಿ ವಿರುದ್ಧ ವರದಕ್ಷಿಣೆ ಪ್ರಕರಣ ದಾಖಲಿಸಿದ್ದಾರೆ ಎಂದು ಎಫ್​ಐಆರ್​ನಲ್ಲಿ ಇದೆ.

ಇತ್ತೀಚೆಗೆ ಭೋಪಾಲ್ ಪೊಲೀಸರು ಮಧ್ಯಪ್ರದೇಶದ ಸತ್ನಾ ಜಿಲ್ಲೆಯಲ್ಲಿ 23 ವರ್ಷದ ವ್ಯಕ್ತಿಯನ್ನು ದೇಶದ್ರೋಹದ ಆರೋಪದ ಮೇಲೆ ಬಂಧಿಸಿದ್ದರು. ಈ ವ್ಯಕ್ತಿಯನ್ನು ಪಾಕಿಸ್ತಾನದ ಪರ ಕಾಮೆಂಟ್‌ ಮಾಡಿದ ಆರೋಪದ ಮೇಲೆ ಬಂಧಿಸಲಾಗಿತ್ತು.

Continue Reading
Share