Connect with us


      




ಆರೋಗ್ಯ

ಮಾಸ್ಕ್ ಕಡ್ಡಾಯಗೊಳಿಸಿ ಸರ್ಕಾರದ ಆದೇಶ

Kumara Raitha

Published

on

ಬೆಂಗಳೂರು: ಜೂನ್‌ ೧೦ (ಯು.ಎನ್‌.ಐ.) ರಾಜ್ಯದಲ್ಲಿ ಕಳೆದ 10 ದಿನಗಳಿಂದ ದೈನಂದಿನ ಕೋವಿಡ್ 19 ಪ್ರಕರಣಗಳ ಸಂಖ್ಯೆಯಲ್ಲಿ ನಿಧಾನಗತಿಯ ಏರಿಕೆಯನ್ನು ಗಮನಿಸಲಾಗಿದೆ. ದಿನಾಂಕ: 9.6.2022 ರಂದು 471 ಪ್ರಕರಣಗಳು ಹಾಗು ಪಾಸಿಟಿವ್ ಪ್ರಮಾಣ 2.14% ವರದಿಯಾಗಿದೆ. ಕೋವಿಡ್ 19 ನ ಮೂರನೇ ಅಲೆಯ ನಂತರದ ಅವಧಿಯ ಏರಿಕೆ ಇದಾಗಿದ್ದು, ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವುದು ಅಗತ್ಯವಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

1. ಸಾರ್ವಜನಿಕ ಪ್ರದೇಶಗಳಲ್ಲಿ ಮಾಸ್ಕ್ ಧರಿಸುವುದನ್ನು ಉಲ್ಲೇಖ (3) ರ ಅನ್ವಯ ಕಡ್ಡಾಯಗೊಳಸಲಾಗಿದೆ. ಈ ಕ್ರಮವನ್ನು ಜಾರಿಗೊಳಸಲು ಮಾರ್ಷಲ್/ ಪೋಲೀಸ್ ಸಿಬ್ಬಂದಿಗಳ ಸಹಾಯವನ್ನು ಪಡೆಯುವುದು.

2. ಮುಚ್ಚಿದ ಸಂರಚನೆಯನ್ನು (Closed areas) ಹೊಂದಿದ ಸ್ಥಳಗಳಾದ ಶಾಪಿಂಗ್ ಮಾಲ್‌ಗಳು, ರೆಸ್ಟೋರೆಂಟ್‌ಗಳು, ಪಬ್‌ಗಳು, ಕೆಫೆಟೀರಿಯಾ, ಹೊಟೇಲ್‌ಗಳು, ಶೈಕ್ಷಣಿಕ ಸಂಸ್ಥೆಗಳು, ಹಾಸ್ಟೆಲ್‌ಗಳು, ಕಛೇರಿಗಳು, ಕಾರ್ಖಾನೆ ಇತ್ಯಾದಿ ಪ್ರದೇಶಗಳಲ್ಲಿ ಸಿಬ್ಬಂದಿಗಳು ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸುವುದು ಹಾಗೂ ಮಾಸ್ಕ್ ಧರಿಸಿ ಬರುವರಿಗೆ ಮಾತ್ರವೇ ಪ್ರವೇಶ ನೀಡುವುದನ್ನು ಖಚಿತಪಡಿಸಿಕೊಳ್ಳುವುದು ಆಯಾ ಸಂಸ್ಥೆಯ ಮಾಲಕರ / ಆಡಳತಗಳ ಜವಾಬ್ದಾರಿಯಾಗಿರುತ್ತದೆ.

3. ಸ್ವಂತ ವಾಹನಗಳು ಹಾಗೂ ಸಾರ್ವಜನಿಕ ಸಾರಿಗೆ ವಾಹನಗಳಲ್ಲಿ ( ಬಸ್‌ ಹಾಗೂ ರೈಲು) ಪ್ರಯಾಣಿಸುವ ಸಂದರ್ಭದಲ್ಲಿ ಸಾರ್ವಜನಿಕರು ಮಾಸ್ಕ್ ಧರಿಸುವುದು ಕಡ್ಡಾಯವಾಗಿರುತ್ತದೆ.

4. ILI & SARI ಲಕ್ಷಣಗಳನ್ನು ಹೊಂದಿದವರು, ಹೈರಿಸ್ ಗುಂಪಿನವರು ಹಾಗೂ ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರನ್ನು ಆದ್ಯತೆಯ ಮೇಲೆ ಪರೀಕ್ಷೆಗೆ ಒಳಪಡುವುದು ಹಾಗೂ ಫಲಿತಾಂಶ ಲಭ್ಯವಾಗುವವರೆಗೂ ಮನೆಯಲ್ಲಿಯೇ ಪ್ರತ್ಯೇಕವಾಗಿರುವುದು.

5. ಅರ್ಹ ಜನರೆಲ್ಲರೂ Precautionary dose ಸೇರಿದಂತೆ, ಕೋವಿಡ್ 19 ಲಸಿಕೆಯನ್ನು ಪಡೆಯುವುದು. ಕೋವಿಡ್ 19, ಮುಂಜಾಗ್ರತಾ ಕ್ರಮವಾಗಿ ಮೇಲೆ ತಿಳಿಸಿದ ಅಂಶಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಸುವ ನಿಟ್ಟಿನಲ್ಲಿ ಅಧಿಕಾರಿಗಳು ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದೆ.

Share