Published
2 weeks agoon
By
Vanitha Jainನವದೆಹಲಿ: ಹಣದುಬ್ಬರ, ಬೆಲೆ ಏರಿಕೆ, ಜಿಎಸ್ಟಿ ಮತ್ತು ನಿರುದ್ಯೋಗ ಸಮಸ್ಯೆಗಳ ವಿರುದ್ಧ ಪ್ರತಿಭಟನೆ ನಡೆಸಲು ರಾಷ್ಟ್ರಪತಿ ಭವನಕ್ಕೆ ಮೆರವಣಿಗೆಯಲ್ಲಿ ತೆರಳುತ್ತಿದ್ದ ಕಾಂಗ್ರೆಸ್ ಮುಖಂಡರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಮತ್ತು ಶಶಿ ತರೂರ್, ಉತ್ತರಾಖಂಡದ ಮಾಜಿ ಸಿಎಂ ಹರೀಶ್ ರಾವತ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರನ್ನು ಬಂಧಿಸಲಾಯಿತು.
ಇದೇ ವೇಳೆ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಭಾರತದಲ್ಲಿ ಈಗ ಪ್ರಜಾಪ್ರಭುತ್ವ ವ್ಯವಸ್ಥೆ ಇಲ್ಲ, ನಮ್ಮ ದೇಶ ನಾಲ್ಕು ಜನರ ಸರ್ವಾಧಿಕಾರದಲ್ಲಿದೆ ಎಂದು ಆರೋಪಿಸಿದರು.
ದೆಹಲಿ ಪೊಲೀಸರು ಅನುಮತಿ ನಿರಾಕರಿಸಿದರೂ ಕಾಂಗ್ರೆಸ್ ಹಣದುಬ್ಬರ, ಬೆಲೆ ಏರಿಕೆ, ಜಿಎಸ್ ಟಿ ಮತ್ತು ನಿರುದ್ಯೋಗ ಸಮಸ್ಯೆಗಳ ವಿರುದ್ಧ ಬೃಹತ್ ಪ್ರತಿಭಟನೆ ನಡೆಸುತ್ತಿದೆ. ಅರೆಸೇನಾ ಪಡೆಗಳು ಮತ್ತು ದೆಹಲಿ ಪೊಲೀಸರು ವಿಜಯ್ ಚೌಕ್ ರಸ್ತೆ ಮತ್ತು ಸಂಸತ್ತಿನಿಂದ ರಾಷ್ಟ್ರಪತಿ ಭವನಕ್ಕೆ ಹೋಗುವ ಮಾರ್ಗವನ್ನು ಬ್ಯಾರಿಕೇಡ್ ಗಳಿಂದ ನಿರ್ಬಂಧಿಸಿದ್ದಾರೆ.