Connect with us


      
ರಾಜಕೀಯ

ಅಧಿಕಾರಕ್ಕಾಗಿ ಕಾಂಗ್ರೆಸ್ ಪಾದಯಾತ್ರೆ ಮಾಡುತ್ತಿದೆ

UNI Kannada

Published

on

MINISTER GOVIND KARJOLA
ಕಾಂಗ್ರೆಸ್‌ನ ಕೃಷ್ಣೆ ಪಾದಯಾತ್ರೆ ಏನಾಯಿತು?ಎಂದು ಸಚಿವ ಗೋವಿಂದ ಕಾರಜೋಳ ಪ್ರಶ್ನಿಸಿದ್ದಾರೆ.

ಬೆಂಗಳೂರು,ಜನೆವರಿ.05(ಯು.ಎನ್.ಐ)ಅಧಿಕಾರವಿದ್ದಾಗ ಏನೂ ಮಾಡದ ಕಾಂಗ್ರೆಸ್ ಈಗ ಅಧಿಕಾರಕ್ಕಾಗಿ ಪಾದಯಾತ್ರೆ ಮಾಡುತ್ತಿದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಟೀಕಿಸಿದ್ದಾರೆ

ವಿಕಾಸ ಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಕಾಂಗ್ರೆಸ್ ನಾಯಕರು ಭ್ರಮೆಯಲ್ಲಿದ್ದಾರೆ. ಪಂಜಾಬ್‌ನಲ್ಲಿ ಕಾಂಗ್ರೆಸ್‌ನವರದ್ದೇ ಸರ್ಕಾರ ಇದೆ. ಕೋವಿಡ್ ಹೆಚ್ಚಳದಿಂದಾಗಿ ಶಾಲಾ ಕಾಲೇಜುಗಳು ಬಂದ್ ಮಾಡಿದ್ದಾರೆ. ಅಮೇರಿಕಾದಲ್ಲೂ ಪಾಸಿಟಿವ್ ಪ್ರಕರಣಗಳು ಹೆಚ್ಚಾಗಿವೆ.ಇಂತಹ ಸಂದರ್ಭದಲ್ಲಿ ಕಾಂಗ್ರೆಸ್‌ನವರು ರಾಜಕೀಯ ಮಾಡುತ್ತಿದ್ದಾರೆ.ಅಧಿಕಾರ ಇದ್ದಾಗ ಏನೂ ಮಾಡದ ಕಾಂಗ್ರೆಸ್, ಈಗ ಅಧಿಕಾರಕ್ಕಾಗಿ ಪಾದಯಾತ್ರೆ ಮಾಡುತ್ತಿದ್ದಾರೆ.ಕಾಂಗ್ರೆಸ್ ಸರ್ಕಾರವಿದ್ದಾಗ ಅವರ ಕಾಲದಲ್ಲಿ ಏನು ಸಾಧನೆ ಮಾಡಿದ್ದಾರೆಂದು ಮಾಧ್ಯಮಗಳ ಮುಂದೆ ಇಡಲಿ.ಕೃಷ್ಣೆ ಕಡೆ ಪಾದಯಾತ್ರೆ ಮಾಡಿದ್ದು ಏನಾಯ್ತು? ಎಂದು ಕಾರಜೋಳ ಪ್ರಶ್ನಿಸಿದರು‌

ಪ್ರಧಾನಿ ಕಾರ್ಯಕ್ರಮಗಳಿಗೆ ಅನುಮತಿ ನಿಡುತ್ತಾರೆ ಎಂಬುದು ಪ್ರಶ್ನೆ ಅಲ್ಲ. ಸರ್ಕಾರದಿಂದ ಯಾವುದೇ ಹೋರಾಟಗಾರರನ್ನೂ ಹತ್ತಿಕ್ಕುವ ಪ್ರಶ್ನೆ ಇಲ್ಲ. ಸಮಯ -ಸಂದರ್ಭ ನೋಡಿಕೊಂಡು ಪಾದಯಾತ್ರೆ ಮಾಡಲಿ. ಮೇಕೆದಾಟು ಪಾದಯಾತ್ರೆಗೂ ಮುನ್ನ ಕಾಂಗ್ರೆಸ್ ಹಗರಣಗಳ ಸತ್ಯ ದರ್ಶನವಾಗಲಿದೆ ಎಂದು ಮಾರ್ಮಿಕವಾಗಿ ಹೇಳಿದರು.

Share