Connect with us


      
ಕರ್ನಾಟಕ

ಬೆಂಗಳೂರು ತನಕ ನಡೆದೇ ನಡೆಯುತ್ತೇವೆ: ಸಿದ್ದರಾಮಯ್ಯ

Kumara Raitha

Published

on

ಮೇಕೆದಾಟು ಸಂಗಮ: ಜನೆವರಿ 09 (ಯು.ಎನ್.ಐ.)   ಕುಡಿಯುವ ನೀರಿನ ಸಲುವಾಗಿ ಮೇಕೆದಾಟು ಯೋಜನೆ ಅನುಷ್ಠಾನಕ್ಕಾಗಿ ಒತ್ತಾಯಿಸಿ   ನೀರಿಗಾಗಿ ನಡಿಗೆ ಹಮ್ಮಿಕೊಳ್ಳಲಾಗಿದೆ. ಇದು ಪಕ್ಷಾತೀತ ಕಾರ್ಯಕ್ರಮ. ನಾವೆಲ್ಲರೂ ಬೆಂಗಳೂರು ತನಕ ನಡೆದೇ ನಡೆಯುತ್ತೇವೆ ಎಂಬ ವಿಶ್ವಾಸವನ್ನು ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ವ್ಯಕ್ತಪಡಿಸಿದರು.

ಅವರಿಂದು ಮೇಕೆದಾಟು ಸಂಗಮ ಸನಿಹ ಸುದ್ದಿಗಾರರೊಂದಿಗೆ ಮಾತನಾಡಿದರು. ಕಾಂಗ್ರೆಸ್ ಪಕ್ಷ ಸ್ವಾತಂತ್ರ್ಯಪೂರ್ವದಿಂದಲೂ ಹೋರಾಟಗಳನ್ನು ಮಾಡಿಕೊಂಡೇ ಬಂದಿದೆ. ನಮಗೆ ಹೋರಾಟ ಹೊಸದಲ್ಲ. ಮೇಕೆದಾಟು ಯೋಜನೆ ಶೀಘ್ರ ಜಾರಿಯಾಗಬೇಕು. ಕುಡಿಯುವ ನೀರಿನ ಬವಣೆ ನೀಗಬೇಕು ಎಂಬುದು ನಮ್ಮ ನಿಲುವು ಎಂದು ಹೇಳಿದರು.

ಮೇಕೆದಾಟು ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಲು ಈಗಾಗಲೇ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಮೇಕೆದಾಟು ಸಂಗಮದಲ್ಲಿ ಅಪಾರ ಸಂಖ್ಯೆಯಲ್ಲಿ ಸೇರಿದ್ದಾರೆ. ಪಕ್ಷದ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕಾವೇರಿ ನದಿಗೆ ವಿದ್ಯುಕ್ತವಾಗಿ ಪೂಜೆ ಮಾಡಿ ಪಾದಯಾತ್ರೆ ಸಲುವಾಗಿ ವಿನ್ಯಾಸ ಮಾಡಿರುವ ಬಾವುಟ ಹಿಡಿದು ತೆಪ್ಪದ ಮೂಲಕ ಸಂಗಮದಲ್ಲಿ ದಡದ ಸನಿಹ ಸುತ್ತು ಬಂದಿದ್ದಾರೆ.

ಆರಂಭದ ದಿನ 15 ಕಿಲೋ ಮೀಟರ್ ನಡೆಯುವ ಯೋಜನೆಯನ್ನು ಕಾಂಗ್ರೆಸ್ ನಾಯಕರು ಹಾಕಿಕೊಂಡಿದ್ದಾರೆ. ಭಾಗವಹಿಸುವ ಎಲ್ಲರಿಗೂ ಉಪಹಾರ, ಭೋಜನದ ವ್ಯವಸ್ಥೆ ಮಾಡಲಾಗಿದೆ.

ರಾಜ್ಯ ಸರಕಾರ ಈಗಾಗಲೇ  ಕೋವಿಡ್ ನಿಯಮಾವಳಿಗಳನ್ನು ಜಾರಿಗೊಳಿಸಿದೆ. ಈ ಹಿನ್ನೆಲೆಯಲ್ಲಿ ಸಹಸ್ರಾರು ಮಂದಿ ಭಾಗವಹಿಸುತ್ತಿರುವ ಪಾದಯಾತ್ರೆಗೆ ಅವಕಾಶ ನೀಡುತ್ತದೆಯೇ ಎಂಬ ಪ್ರಶ್ನೆ ಮೂಡಿದೆ.

Share