Connect with us


      
ಕರ್ನಾಟಕ

ನೀರಿಗಾಗಿ ನಡಿಗೆ ಸಂಭ್ರಮದಿಂದ ಚಾಲನೆ

Kumara Raitha

Published

on

ಮೇಕೆದಾಟು ಸಂಗಮ: ರಾಜ್ಯ ಕಾಂಗ್ರೆಸ್, ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನಕ್ಕಾಗಿ ಆಗ್ರಹಿಸಿ ಆಯೋಜಿಸಿರುವ ನೀರಿಗಾಗಿ ನಡಿಗೆ ಕಾರ್ಯಕ್ರಮಕ್ಕೆ ಸಂಭ್ರಮದ ಚಾಲನೆ ದೊರೆತಿದೆ. ಪಕ್ಷದ ಹಿರಿಯ ನಾಯಕರುಗಳೊಂದಿಗೆ ಅಪಾರ ಸಂಖ್ಯೆಯ ಕಾರ್ಯಕರ್ತರು ಸಂಭ್ರಮ -ಸಡಗರದಿಂದ  ಹೆಜ್ಜೆ ಹಾಲು ಶುರು ಮಾಡಿದರು.

ಇಂದು ಮೇಕೆದಾಟು ಸಂಗಮದಲ್ಲಿ ಹಿಂದೂ – ಕ್ರೈಸ್ತ- ಮುಸ್ಲೀಮ್ ಧರ್ಮಗುರುಗಳು ಕುಂಡಗಳಲ್ಲಿದ್ದ ಸಸಿಗಳಿಗೆ ನೀರೆರೆಯುವ ಮೂಲಕ ನಡಿಗೆ ಆರಂಭದ ಸಮಾರಂಭಕ್ಕೆ ವಿಧ್ಯುಕ್ತ ಚಾಲನೆ ನೀಡಿದರು. ಲೋಕಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ರಾಜ್ಯ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ನಗಾರಿ ಬಾರಿಸುವ ಮೂಲಕ ನೀರಿಗಾಗಿ ಹೋರಾಟಕ್ಕೆ ಬದ್ಧ ಎಂಬ ಸಂದೇಶ ಸಾರಿದರು. ಕಾಂಗ್ರೆಸ್ ಶಾಸಕಿಯರು, ಹಿರಿಯ ಕಾರ್ಯಕರ್ತೆಯರು ವೇದಿಕೆ ಸನಿಹ ಇದ್ದ ಕೊಡಗಳಿಗೆ ಸಂಗಮದ ನೀರನ್ನು ತಂದು ತುಂಬಿದರು. ಈ ನೀರನ್ನು ಬೆಂಗಳೂರಿಗೆ ತರಲಾಗುತ್ತದೆ.

ಆರಂಭದಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಅವರು ಇದು ಅತ್ಯಂತ ಮಹತ್ವದ ಕಾರ್ಯಕ್ರಮ. ಅತ್ಯುಪಯುಕ್ತ ಯೋಜನೆ ಅನುಷ್ಠಾನಕ್ಕಾಗಿ ಅನುಷ್ಠಾನದ ಶೀಘ್ರ ಅನುಷ್ಠಾನಕ್ಕಾಗಿ ಆಗ್ರಹಿಸಿ ನಡೆಸುತ್ತಿರುವ ನಡಿಗೆ. ರಾಜ್ಯ, ಕೇಂದ್ರ ಸರಕಾರಗಳು ಇದಕ್ಕೆ ಸ್ಪಂದಿಸಬೇಕು. ಯೋಜನೆ ಅನುಷ್ಠಾನಕ್ಕೆ ಚಾಲನೆ ನೀಡಬೇಕು ಎಂದು ಹೇಳಿದರು.

ಸಿದ್ದರಾಮಯ್ಯ ಅವರು ಮಾತನಾಡಿ ಎರಡು ತಿಂಗಳ ಹಿಂದೆಯೇ ಮೇಕೆದಾಟು ಪಾದಯಾತ್ರೆ ಘೋಷಣೆಯನ್ನು ಪಕ್ಷದಿಂದ ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. ಆದರೆ ನೀರಿಗಾಗಿ ನಡಿಗೆ ಆರಂಭವಾಗುವ ಸಮಯದಲ್ಲಿ ಬಿಜೆಪಿ ಸರಕಾರ ಕೋವಿಡ್ ನಿಯಮಾವಳಿಗಳನ್ನು ಜಾರಿಗೆ ತಂದು ನಡಿಗೆ ನಿಲ್ಲಿಸಲು ಪ್ರಯತ್ನ ಮಾಡಿದೆ.  ನಾವು ಕೋವಿಡ್ ನಿಯಮಾವಳಿ ಪಾಲಿಸಿಕೊಂಡೇ ಬೆಂಗಳೂರು ತನಕ ಪಾದಯಾತ್ರೆ ಮಾಡುತ್ತೇವೆ. ಯಾವುದೇ ಕಾರಣಕ್ಕೂ ಪಾದಯಾತ್ರೆ ನಿಲ್ಲುವುದಿಲ್ಲ ಎಂದು ಪುನರುಚ್ಛರಿಸಿದರು.

ಜಲಸಂಫನ್ಮೂಲ ಸಚಿವ ಗೋವಿಂದ ಕಾರಜೋಳ ಅವರು ಪದೇಪದೇ ಸುಳ್ಳು ಹೇಳುತ್ತಿದ್ದಾರೆ. ಈ ಮೂಲಕ ಜನರನ್ನು ದಾರಿ ತಪ್ಪಿಸಲು ಪ್ರಯತ್ನ ಮಾಡುತ್ತಿದ್ದಾರೆ. ಅದು ಸಾಧ್ಯವಿಲ್ಲ. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಯೋಜನೆಗೆ ಅಗತ್ಯವಿರುವ  ಪ್ರಕ್ರಿಯೆಗಳನ್ನು ಪ್ರಾಮಾಣಿಕವಾಗಿ ಮಾಡಲಾಗಿದೆ ಎಂದರು.

ನೀರಿಗಾಗಿ ನಡಿಗೆಯನ್ನು ಕಾಂಗ್ರೆಸ್ ಪಕ್ಷದ ವತಿಯಿಂದ ಮಾಡಿದ್ದರೂ ಇದು ಪಕ್ಷಾತೀತವಾದ ಕಾರ್ಯಕ್ರಮ, ಸಾಂಸ್ಕೃತಿಕ ರೆಂಗದ ಪ್ರತಿನಿಧಿಗಳು, ರೈತಸಂಘಗಳವರು, ಇತರ ರಂಗಗಳವರು ಭಾಗವಹಿಸಿದ್ದಾರೆ ಎಂದ ಅವರು ಇದೇ ಸಂದರ್ಭದಲ್ಲಿ  ಭಾಗವಹಿಸಿರುವ ಎಲ್ಲರೂ ಕೋವಿಡ್ ನಿಯಮಾವಳಿ ಅನುಸರಿಸಿ ಎಂದು ಮನವಿ ಮಾಡಿದರು.

Share