Connect with us


      
ರಾಜಕೀಯ

ಮೇಕೆದಾಟು ಯೋಜನೆ: ಸಿದ್ದರಾಮಯ್ಯ ಅವರಿಂದ ಪಾಠ ಕಲಿಯಬೇಕಿಲ್ಲ: ಸಿಎಂ

Kumara Raitha

Published

on

ಧಾರವಾಡ: ಜನವರಿ 02 (ಯು.ಎನ್.ಐ.) ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ರಾಜಕೀಯ ಲಾಭಕ್ಕಾಗಿ ಪಾದಯಾತ್ರೆ ಮಾಡುತ್ತಿದ್ದಾರೆ. ಅವರಿಂದ ನಾವು ಪಾಠ ಕಲಿಯಬೇಕಾದ ಅವಶ್ಯಕತೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ತಿಳಿಸಿದರು.

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಬಿ.ಜೆ.ಪಿ ಅಣ್ಣಾಮಲೈ ಅವರನ್ನು ಎತ್ತಿಕಟ್ಟುತ್ತಿದ್ದಾರೆ ಎಂಬ ಸಿದ್ದರಾಮಯ್ಯ ಅವರ ಹೇಳಿಕೆಯ ಕುರಿತ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಅವರು ಪ್ರತಿಕ್ರಿಯೆ ನೀಡಿದರು.

ನಮ್ಮ ಸರ್ಕಾರಕ್ಕೆ ಮೇಕೆದಾಟು ಯೋಜನೆಯ ಬಗ್ಗೆ ಬದ್ಧತೆ ಇದೆ. ಈಗಾಗಲೇ ಕೆಲಸವನ್ನೂ ಮಾಡುತ್ತಿದೆ. ರಾಜಕಾರಣಕ್ಕಾಗಿ ಪಾದಯಾತ್ರೆ, ಹೋರಾಟ ಮಾಡುವವರು ಮೊಸರಲ್ಲಿ ಕಲ್ಲು ಹುಡುಕುವ ಪ್ರಯತ್ನ ಮಾಡುತ್ತಾರೆ. ಇದನ್ನು ಅರ್ಥ ಮಾಡಿಕೊಂಡವರು ರಾಜಕೀಯ ಲಾಭಕ್ಕಾಗಿ ಪಾದಯಾತ್ರೆ ಮಾಡುವುದಿಲ್ಲ ಎಂದರು.

Share