Connect with us


      




ಕರ್ನಾಟಕ

ರಾಮನಗರ ಜೈಲು ನೋಡಿದರೂ ಪರವಾಗಿಲ್ಲ: ಡಿ.ಕೆ.ಶಿವಕುಮಾರ್

UNI Kannada

Published

on

ರಾಮನಗರ ಜೈಲು ನೋಡಿದರೂ ಪರವಾಗಿಲ್ಲ

ರಾಮನಗರ: ಜನವರಿ 10(ಯು.ಎನ್.ಐ) ಈಗಾಗಲೇ ತಿಹಾರ್ ಜೈಲು ನೋಡಿರುವ ನನಗೆ ಈಗ ರಾಮನಗರ ಜೈಲು ನೋಡಿದರೂ ಪರವಾಗಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಿಡಿಕಾರಿದ್ದಾರೆ.

ಸರಕಾರದ ಕೋವಿಡ್ ನಿಯಮ ಉಲ್ಲಂಘಿಸಿದ್ದಕ್ಕೆ ಕಾಂಗ್ರೆಸ್‌ ನಾಯಕರ ಮೇಲೆ ದೂರು ದಾಖಲಾಗಿರುವುದಕ್ಕೆ ಕಿಡಿಕಾರಿ, ಇದೆಲ್ಲ ಪಾದಯಾತ್ರೆಗೆ ತೊಂದರೆ‌ ಮಾಡಲು ಸರಕಾರದ ಪಿತೂರಿ ಎಂದು ಶಿವಕುಮಾರ್ ಗುಡುಗಿದರು. ಡಿ.ಕೆ.ಶಿವಕುಮಾರ್,ತಮ್ಮನ್ನು ಕೊರೋನಾ ಪರೀಕ್ಷೆಗೆ ಒಳಪಡಿಸಲು ಬಂದವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಭಾನುವಾರ ರಾತ್ರಿ ಮೊದಲ ದಿನದ ಪಾದಯಾತ್ರೆ ಮುಗಿಸಿ ಡಿಕೆಶಿ ತಮ್ಮ ಊರಾದ ದೊಡ್ಡಾಲಹಳ್ಳಿಯಲ್ಲಿ ತಂಗಿದ್ದರು. ಈ ವೇಳೆ ಅಲ್ಲಿಗೆ ರಾಮನಗರ ಹೆಚ್ಚುವರಿ ಜವರೇಗೌಡ ನೇತೃತ್ವದ ಅಧಿಕಾರಿಗಳ ತಂಡವು ಅಲ್ಲಿಗೆ ಬಂದಿದ್ದು, ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವಂತೆ ಒತ್ತಾಯಿಸಿತು.ಆದರೆ ಇದನ್ನು ನಿರಾಕರಿಸಿದ ಡಿಕೆಶಿ, ನನಗೆ ಯಾವ ರೋಗ ಲಕ್ಷಣಗಳೂ ಇಲ್ಲ. ಹೀಗಾಗಿ ಪರೀಕ್ಷೆ ಮಾಡಿಸಿಕೊಳ್ಳುವುದಿಲ್ಲ ಎಂದು ಹೇಳಿ ಅಧಿಕಾರಿಗಳನ್ನು ವಾಪಸ್ ಕಳುಹಿಸಿದ್ದರು.

ಇನ್ನು ಕೋವಿಡ್ ಸೋಂಕು ನಿಯಂತ್ರಣದ ಉದ್ದೇಶದಿಂದ ಸರಕಾರ ರಾಜ್ಯದಲ್ಲಿ ಎಲ್ಲ ಪ್ರತಿಭಟನೆ, ಪಾದಯಾತ್ರೆಯನ್ನು ನಿಷೇಧಿಸಿದೆ. ಹೀಗಿದ್ದರೂ ವೀಕೆಂಡ್ ಕರ್ಫ್ಯೂ ವೇಳೆ ಮೇಕೆದಾಟು ಪಾದಯಾತ್ರೆ ಕೈಗೊಂಡಿದ್ದಕ್ಕಕೆ ಎನ್‍ಡಿಎಂಎ ಕಾಯ್ದೆಯಡಿ ದೂರು ದಾಖಲಾಗಿದೆ.ಸಚಿವರ ಜೊತೆ ಸಭೆ ನಡೆಸಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಾನೂನು ಉಲ್ಲಂಘಿಸಿ ಪಾದಯಾತ್ರೆ ನಡೆಸುವವರ ಮೇಲೆ ಕಾನೂನು ಕ್ರಮ ಜರುಗಿಸುವ ಹೊಣೆಗಾರಿಕೆಯನ್ನು ರಾಮನಗರ ಜಿಲ್ಲಾಡಳಿತಕ್ಕೆ ನೀಡಿದ್ದರು.

ಈಗಾಗಲೇ ರಾಮನಗರ ಜಿಲ್ಲಾಧಿಕಾರಿ ಅವರು ಡಿ.ಕೆ.ಶಿವಕುಮಾರ್ ಅವರಿಗೆ ಪ್ರತಿಭಟನೆ ನಡೆಸದಂತೆ ನೋಟಿಸ್ ಕೂಡ ನೀಡಿದ್ದರು. ಆದರೆ ಇದಾವುದಕ್ಕೂ ತಲೆ ಕೆಡಿಸಿಕೊಳ್ಳದ ಕಾಂಗ್ರೆಸ್‍ನವರು ಪಾದಯಾತ್ರೆಯನ್ನು ಆರಂಭಿಸಿದ್ದರು.

ವೀಕೆಂಡ್ ಕರ್ಫ್ಯೂ ಉಲ್ಲಂಘಿಸಿ ಪಾದಯಾತ್ರೆಗೆ ಚಾಲನೆ ನೀಡಿದ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ 30 ಜನ ಕಾಂಗ್ರೆಸ್ ನಾಯಕರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

 ಕೊರೊನಾ ನಿಯಂತ್ರಣಕ್ಕೆ ರಾಜ್ಯ ಸರಕಾರ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿತ್ತು. ನಿನ್ನೆ ಕರ್ಫ್ಯೂ ಇದ್ದರೂ ಕೂಡ ನಿಯಮ ಉಲ್ಲಂಘನೆ ಮಾಡಿ ಕಾಂಗ್ರೆಸ್ ನಾಯಕರು ಮೇಕೆದಾಟು ಪಾದಯಾತ್ರೆಗೆ ಚಾಲನೆ ನೀಡಿದ್ದರು.ಈ ಹಿನ್ನೆಲೆಯಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ 2005 ಐಪಿಸಿ ಸೆಕ್ಷನ್ 141, 143, 290, 336 ಅಡಿ ದೂರು ದಾಖಲಾಗಿದೆ.

Share