Connect with us


      
ಕರ್ನಾಟಕ

ಬಿಜೆಪಿ ಕಾರ್ಯಕರ್ತರಿಂದ ಸಂಸದ ಡಿ.ಕೆ.ಸುರೇಶ್ ಮನೆಗೆ ಮುತ್ತಿಗೆ

UNI Kannada

Published

on

BJP YUVA MORACHA PROTEST

ಬೆಂಗಳೂರು : ಜನವರಿ 04(ಯು.ಎನ್.ಐ.) ಬೆಂಗಳೂರು ಮಹಾನಗರದ ಕೇಂದ್ರ, ಉತ್ತರ ಮತ್ತು ದಕ್ಷಿಣ ಜಿಲ್ಲೆಗಳ ಬಿಜೆಪಿ ಯುವ ಮೋರ್ಚಾ ವತಿಯಿಂದ ವೈಯಾಲಿಕಾವಲ್‍ನಲ್ಲಿನ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಅವರ ಮನೆಗೆ ಮುತ್ತಿಗೆ ಹಾಕಲಾಯಿತು.
ರಾಮನಗರ ಜಿಲ್ಲೆಯಲ್ಲಿ ಮುಖ್ಯಮಂತ್ರಿಗಳ ಎದುರಲ್ಲೇ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಮತ್ತು ವಿಧಾನಪರಿಷತ್ ಸದಸ್ಯರು, ಸಚಿವರಾದ ಡಾ.ಅಶ್ವತ್ಥನಾರಾಯಣ ಅವರ ಮೇಲೆ ಹಲ್ಲೆಗೆ ಯತ್ನಿಸಿ, ಮೈಕ್ ಕಸಿದು, ತಳ್ಳಾಟ ನಡೆಸಿ ಅಮಾನವೀಯವಾಗಿ ವರ್ತಿಸಿದ್ದಾರೆ. ಅಲ್ಲದೆ, ಅಸಭ್ಯ ಹಾಗೂ ಗೂಂಡಾ ವರ್ತನೆ ತೋರಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತರು ಖಂಡಿಸಿದರು. ಬಳಿಕ ಸಂಸದರ ಮನೆ ಮುಂದೆ ಪ್ರತಿಭಟನೆ ನಡೆಸಿ ಮನೆಗೆ ಮುತ್ತಿಗೆ ಹಾಕುತ್ತಿದ್ದಂತೆ‌ ಪೊಲೀಸರು ಅವರನ್ನು ಬಂಧಿಸಿದರು.

ಪ್ರತಿಭಟನೆಯನ್ನುದ್ದೇಶಿ ಮಾತನಾಡಿದ ಬೆಂಗಳೂರು ಉತ್ತರ ಯುವ ಮೋರ್ಚಾ ಅಧ್ಯಕ್ಷ ಪ್ರಶಾಂತ್ ಗೌಡ, ಕಾಂಗ್ರೆಸ್ಸಿಗರ ಗೂಂಡಾ ವರ್ತನೆಯು ಖಂಡನೀಯ. ಮುಖ್ಯಮಂತ್ರಿಗಳ ಕಾರ್ಯಕ್ರಮದಲ್ಲಿ ಕಾಂಗ್ರೆಸ್ಸಿಗರು ಗೂಂಡಾವರ್ತನೆ ತೋರಿದ್ದು ಅಮಾನವನೀಯ. ಘಟನೆ ವಿರುದ್ಧ ಮುಂದಿನ ದಿನಗಳಲ್ಲಿ ರಾಮನಗರ ಚಲೋ ಹಮ್ಮಿಕೊಳ್ಳುವುದಾಗಿ ಎಚ್ಚರಿಸಿದರು.

ಪ್ರತಿಭಟನೆಯಲ್ಲಿ‌ಯುವ ಮೋರ್ಚಾ ವಿಭಾಗ ಸಂಘಟನಾ ಕಾರ್ಯದರ್ಶಿ ದಶರಥ್, ಯುವ ಮೋರ್ಚಾ ರಾಜ್ಯ ಕೋಶಾಧ್ಯಕ್ಷ‌ ಅನಿಲ್ ಶೆಟ್ಟಿ, ರಾಜ್ಯ ಕಾರ್ಯಾಲಯ ಕಾರ್ಯದರ್ಶಿ‌ಎಸ್.ವಿ. ವಿನೋದ್‍ಕುಮಾರ್ ಸೇರಿದಂತೆ ಇನ್ನೂ ಅನೇಕ ಬಿಜೆಪಿ ಕಾರ್ಯಕರ್ತರು ಪಾಲ್ಗೊಂಡಿದ್ದರು.

Share