Connect with us


      
ರಾಜಕೀಯ

ವೇದಿಕೆಯಲ್ಲೇ ಸಂಸದ ಡಿಕೆ ಸುರೇಶ್ ಸಚಿವ ಅಶ್ವಥ್ ನಾರಾಯಣ ಕಿತ್ತಾಟ

Kumara Raitha

Published

on

ರಾಮನಗರ: ಜನೆವರಿ 03 (ಯು.ಎನ್.ಐ.) ರಾಮನಗರದಲ್ಲಿಂದು ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ದೊರೆಯಬೇಕಿದ್ದ ವೇದಿಕೆಯಲ್ಲಿಯೇ ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಸಮ್ಮುಖದಲ್ಲಿಯೇ ಪರಸ್ಪರ ವಾಗ್ವಾದಕ್ಕಿಳಿದ ಪ್ರಸಂಗ ನಡೆದಿದೆ.
ರಾಮನಗರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿಂದು ನಾಡಪ್ರಭು ಕೆಂಪೇಗೌಡ, ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಗಳ ಅನಾವರಣ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡುವ ಕಾರ್ಯಕ್ರಮ ಆಯೋಜಿತವಾಗಿತ್ತು.
ಈ ಸಂದರ್ಭದಲ್ಲಿ ಸಚಿವ ಅಶ್ವಥ್ ನಾರಾಯಣ ಅವರು ಮಾತನಾಡುತ್ತಿದ್ದರು.ನೀರಾವರಿ ಯೋಜನೆಗಳ ಅನುಷ್ಠಾನ ಬಿಜೆಪಿ ಸರ್ಕಾರದಿಂದಲೇ ಸಾಧ್ಯ. ತಮ್ಮ ಸರ್ಕಾರ ಅನೇಕ ಯೋಜನೆಗಳನ್ನು ಜಿಲ್ಲೆಯಲ್ಲಿ ನೇರವೇರಿಸಿದೆ. ಇಲ್ಲಿ ಬಿಜೆಪಿ ಪ್ರತಿನಿಧಿ ಇಲ್ಲದಿದ್ರೂ ಅಭಿವೃದ್ಧಿ ಯೋಜನೆಗಳನ್ನು ನಿಲ್ಲಿಸಿಲ್ಲ. ತಮ್ಮ ಸರ್ಕಾರದಲ್ಲೇ ಯೋಜನೆಗಳನ್ನು ರೂಪಿಸಿ ತಮ್ಮ ಅವಧಿಯಲ್ಲಿಯೇ ಸಂಪೂರ್ಣಗೊಳಿಸುತ್ತೇವೆ ಎಂದಿದ್ದಾರೆ.
ಈ ಹಂತದಲ್ಲಿ ಸಿಟ್ಟಾದ ಡಿ.ಕೆ. ಸುರೇಶ್ ಅವರು ಸಚಿವ ಅಶ್ವಥ್ ನಾರಾಯಣ್ ಅವರ ಮಾತಿಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಜೊತೆಗೆ ವೇದಿಕೆಯಲ್ಲಿಯೇ ಧರಣಿ ಕುಳಿತಿದ್ದಾರೆ. ಇದರಿಂದ ಸಿಟ್ಟಾದ ಆಶ್ವಥ್ ನಾರಾಯಣ್ ಅವರು ಸಿಎಂ ಕಾರ್ಯಕ್ರಮಕ್ಕೆ ಅಗೌರವ ತೋರುತ್ತಿದ್ದೀರಾ ಎಂದು ಪ್ರಶ್ನಿಸಿದ್ದಾರೆ. ಇದರಿಂದ ಮಾತಿಗೆ ಮಾತು ಬೆಳೆದಿದೆ.
ಈ ಹಂತದಲ್ಲಿ ವಿಧಾನಪರಿಷತ್ ಸದಸ್ಯ ಸಿ. ರವಿ ಅವರು ಅಶ್ವಥ್ ನಾರಾಯಣ ಅವರು ಮಾತನಾಡುತ್ತಿದ್ದ ಮೈಕ್ ಕಿತ್ತುಕೊಂಡ ಘಟನೆಯೂ ನಡೆದಿದೆ. ಸಂಸದ, ಸಚಿವರ ವಾಗ್ವಾದದಿಂದಾಗಿ ತುಸುಹೊತ್ತು ಕಾರ್ಯಕ್ರಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

Share