Connect with us


      
ಕರ್ನಾಟಕ

ಖರೀದಿ ಕೇಂದ್ರ ರೈತರಿಗೆ ಅನಕೂಲ ಆಗುವಂತೆ ಕಾರ್ಯನಿರ್ವಹಿಸಲಿ : ಉಮೇಶ್ ಕತ್ತಿ

Published

on

ಬೆಂಗಳೂರು: ಡಿಸೆಂಬರ್ 31 (ಯು.ಎನ್.ಐ.) ನಾಳೆಯಿಂದ ಮಾರ್ಚ್ 31 ರ ವರೆಗೆ ಎಂ.ಎಸ್.ಪಿ ಖರೀದಿ ಕೇಂದ್ರ ಕಾರ್ಯನಿರ್ವಹಿಸಲಿದ್ದು, ಹಣ ನೇರವಾಗಿ ರೈತರ ಖಾತೆಗೆ ಜಮೆ ಆಗುವ ಒಳ್ಳೆಯ ಪ್ರಕ್ರಿಯೆ ಇದಾಗಿದೆ. ನ ರೈತರಿಗೆ ಈ ಯೋಜನೆಯ ಲಾಭ ಸಿಗುವಂತೆ ಮಾಡಬೇಕೆಂದು ಅಧಿಕಾರಿಗಳಿಗೆ ಸಚಿವ ಉಮೇಶ್ ಕತ್ತಿ ಸೂಚಿಸಿದ್ದಾರೆ.

ರಾಜ್ಯದ ರೈತರಿಗೆ ಅನಕೂಲ ಆಗುವ ದೃಷ್ಟಿಯಿಂದ ಎಂ.ಎಸ್ ಪಿ ಯೋಜನೆ ಅಡಿಯಲ್ಲಿ, ಜೋಳ, ರಾಗಿ, ಹಾಗೂ ಭತ್ತ ಖರೀದಿ ಪ್ರಕ್ರಿಯೆಯನ್ನು ರಾಜ್ಯದ್ಯಂತ ಇವತ್ತಿನಿಂದ ಆರಂಭಿಸಲಾಗುತ್ತಿರುವ ಹಿನ್ನೆಲೆ, ಸಚಿವ ಉಮೇಶ್ ಕತ್ತಿ ಆಹಾರ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ವಿಧಾನಸೌಧದಲ್ಲಿ ಇಂದು  ಪೂರ್ವಭಾವಿ ಸಭೆ ನಡೆಸಿದರು.

ಎಂ.ಎಸ್.ಪಿ‌ ಯೋಜನೆ ರಾಜ್ಯದ ರೈತರಿಗೆ ಅನಕೂಲ ಆಗುವ ದೃಷ್ಟಿಯಿಂದ ಆರಂಭಿಸಲಾದ ಯೋಜನೆ. ಈ ಯೋಜನೆಯ ಲಾಭ ರಾಜ್ಯದ ಪ್ರತಿಯೊಬ್ಬ ರೈತರಿಗೂ ಸಿಗುವಂತಾಗಬೇಕು, ವ್ಯಾಪಾರಸ್ಥರು ಹಾಗೂ ದಲ್ಲಾಲಿಗಳಿಂದ ಯಾವುದೆ ಕಾರಣಕ್ಕೂ ಖರೀದಿ ಮಾಡಕೂಡದು, ಒಂದು ವೇಳೆ ವ್ಯಾಪಾರಸ್ಥರಿಂದ ಖರೀದಿ ಮಾಡಿದ್ರೆ, ಅಂತವರ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಚಿವ ಉಮೇಶ್ ಕತ್ತಿ ಸೂಚಿಸಿದರು.

ಪ್ರತಿ ಕ್ವಿಂಟಲ್ ಬಿಳಿ ಜೋಳ ಮಾಲ್ದಂಡಿಗೆ 2758 ರೂಪಾಯಿ, ಪ್ರತಿ ಕ್ವಿಂಟಲ್ ಬಿಳಿ ಜೋಳ ಹೈಬ್ರಿಡ್ ಗೆ 2738 ರೂಪಾಯಿ, ಪ್ರತಿ ಕ್ವಿಂಟಲ್ ಗ್ರೇಡ್ ಎ ಭತ್ತಕ್ಕೆ 1960 ರೂಪಾಯಿ, ಪ್ರತಿ ಕ್ವಿಂಟಲ್ ಸಾಮಾನ್ಯ ಗ್ರೇಡ್ ಭತ್ತಕ್ಕೆ 1940 ರೂಪಾಯಿ ಹಾಗೂ ಪ್ರತಿ ಕ್ವಿಂಟಲ್ ರಾಗಿಗೆ 3377 ರೂಪಾಯಿ ದರ ನಿಗಧಿ ಮಾಡಲಾಗಿದ್ದೂ ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಖರೀದಿ ಕೇಂದ್ರಗಳನ್ನು ಆರಂಭಿಸಲಾಗಿದೆ.

ಕರ್ನಾಟಕ

ಪಿಎಂಎಫ್ಎಂಇ ಯೋಜನೆಗೆ ಶೇ.15 ರಷ್ಟು ರಾಜ್ಯದಿಂದ ಹೆಚ್ಚುವರಿ ಸಹಾಯಧನ

Published

on

ಬೆಂಗಳೂರು: ಜನೆವರಿ 17 (ಯು.ಎನ್.ಐ.)ರೈತರಿಗೆ ಬಲತುಂಬಲು ರಾಜ್ಯ ಸರ್ಕಾರ ಕೇಂದ್ರದ ಆತ್ಮ ನಿರ್ಭರ ಭಾರತ ಅಭಿಯಾನ (ಪಿಎಂಎಫ್ಎಂಇ) ಯೋಜನೆಗೆ ಸಹಾಯಧನವನ್ನು ಹೆಚ್ಚಿಸಿ ಆದೇಶ ಹೊರಡಿಸಿದೆ.
ಪಿಎಂಎಫ್ಎಂಇ ಯೋಜನೆಗೆ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಶೇ.35 ರಷ್ಟು ಅನುದಾನ ಒದಗಿಸಿತ್ತು. ಇದೀಗ ಸರ್ಕಾರ ರೈತರ ಅನುಕೂಲಕ್ಕಾಗಿ ಶೇ.15 ರಷ್ಟು ಹೆಚ್ಚಿನ ಸಹಾಯಧನ ನೀಡಿದ್ದು, ಈಗ ಪಿಎಂಎಫ್ಎಂಇ ಯೋಜನೆಯ ಸಹಾಯಧನ ಶೇ.50 ರಷ್ಟಾಗಿದೆ.
ಪ್ರಧಾನ ಮಂತ್ರಿಗಳ ಆಹಾರ ಸಂಸ್ಕರಣೆ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆ ಹಾಗೂ ಇತರ ಕಾರ್ಯಕ್ರಮಗಳಿಗೆ ಕೇಂದ್ರ ಸರ್ಕಾರ ಶೇ.35 ರಷ್ಟನ್ನು ಒದಗಿಸಿತ್ತು. ಕಳೆದ ಬಾರಿ ಆಯವ್ಯಯದಲ್ಲಿ ಘೋಷಿಸಿದಂತೆ ರಾಜ್ಯ ಸರ್ಕಾರ ಶೇ.15 ರಷ್ಟು ಸಹಾಯಧನ ನೀಡಿದ್ದು, ಈಗ ಸಹಾಯಧನ ಶೇ.50ಕ್ಕೆ ಹೆಚ್ಚಿದೆ.
ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಮತ್ತು ರಫ್ತು ನಿಗಮ ನಿಯಮಿತ ಅಡಿ ಪಿಎಂಎಫ್ಎಂಇ ಯೋಜನೆಯನ್ನು ರಾಜ್ಯದಲ್ಲಿ ಅನುಷ್ಠಾನಗೊಳಿಸಲು ಕೃಷಿ ಇಲಾಖೆಯನ್ನು ರಾಜ್ಯದ ನೋಡಲ್ ಇಲಾಖೆಯನ್ನಾಗಿಯೂ ಕೆಪೆಕ್ ಸಂಸ್ಥೆಯನ್ನು ನೋಡಲ್ ಏಜೆನ್ಸಿಯನ್ನಾಗಿ ನೇಮಿಸಲಾಗಿದೆ.
ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ (ಪಿಎಂಎಫ್ಎಂಇ)ಯೋಜನೆಯು 5 ವರ್ಷಗಳ ಅವಧಿಯಲ್ಲಿ 2020-21ನೇ ಸಾಲಿನಿಂದ 2024-25ನೇ ಸಾಲಿನವರೆಗೂ ಜಾರಿಯಲ್ಲಿರುತ್ತದೆ. 2021-22ನೇ ಸಾಲಿನಲ್ಲಿ 2,651 ವೈಯಕ್ತಿಕ ಉದ್ದಿಮೆದಾರರಿಗೆ ಹಾಗೂ ಗುಂಪುಗಳಿಗಳಿಗೆ 100 ಉದ್ದಿಮೆಗಳ ಸ್ಥಾಪನೆಗೆ ಸಹಾಯಧನ ಒದಗಿಸುವ ಗುರಿ ಹೊಂದಲಾಗಿದೆ.
ಸರ್ಕಾರ ರೈತರ ಅನುಕೂಲಕ್ಕಾಗಿ ಅನುದಾನ ಹೆಚ್ಚಿಸಿರುವುದನ್ನು ಶ್ಲಾಘಿಸಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್, ರೈತಾಪಿ ಗುಂಪುಗಳು ಮತ್ತು ವೈಯಕ್ತಿಕ ಉದ್ದಿಮೆದಾರರು ಯೋಜನೆಯ ಸದುಪಯೋಗ ಪಡಿಸಿಕೊಂಡು ಆದಾಯ ವೃದ್ಧಿಸಿಕೊಳ್ಳಬೇಕೆಂದು ಕರೆ ನೀಡಿದ್ದಾರೆ.

Continue Reading

ಕರ್ನಾಟಕ

ಕೋವಿಡ್‌ ಸೋಂಕು ಹೆಚ್ಚು; ಸಾವು ಕಡಿಮೆ:‌ ಸಚಿವ ಅಶೋಕ್

Published

on

ಬೆಂಗಳೂರು: ಜನೆವರಿ ೧೭ (ಯು.ಎನ್.ಐ.) ರಾಜ್ಯದಲ್ಲಿ ಕೋವಿಡ್‌ ಸೋಂಕಿನ ಪ್ರಮಾಣ ಹೆಚ್ಚಾಗಿದೆ.  ಸಾವಿನ ಪ್ರಮಾಣ ಗಣನೀಯವಾಗಿ ಕಡಿಮೆ ಇದೆ ಎಂದು ಕಂದಾಯ ಸಚಿವ ಆರ್.‌ ಅಶೋಕ್‌ ತಿಳಿಸಿದರು.

ಅವರಿಂದು ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡುತ್ತಿದ್ದರು. ಬೇರೆ ರಾಜ್ಯಗಳಲ್ಲಿ‌ಸೋಂಕು‌ ತಗ್ಗುತ್ತಿದೆ ಎಂದ ಅವರು ಕೋವಿಡ್‌ ನಿಯಂತ್ರಣ ಕುರಿತಂತೆ ಇಂದು ಸಂಜೆ ಮುಖ್ಯಮಂತ್ರಿ ಅವರ ನೇತೃತ್ವದಲ್ಲಿ ಸಭೆ ನಡೆಯಲಿದೆ ಎಂದು ವಿವರ ನೀಡಿದರು.

ಕೋವಿಡ್‌ ಸೋಂಕು ಅಧಿಕವಾಗಿರುವುದರಿಂದ ಕೆಲವು ನಿರ್ಬಂಧಗಳನ್ನು ಮಾಡಲಾಗಿದೆ. ಯಾರಿಗೋ ತುಸು ಲಾಭವಾಗುತ್ತದೆ ಎಂದು ಈ ನಿಯಮಾವಳಿಗಳನ್ನು ಸಡಿಲಿಸಲು ಸಾಧ್ಯವಿಲ್ಲ. ಲಕ್ಷಾಂತರ ಜನರನ್ನು ಕಷ್ಟಕ್ಕೆ ದೂಡಲು ಆಗುವುದಿಲ್ಲ . ಹೋಟೆಲ್ ಮಾಲಿಕರಾಗಲಿ,ಬೇರೆಯವರಿಂದಾಗಲಿ ಬರುವ ಒತ್ತಡಕ್ಕೆ ಮಣಿಯಲು ಸಾಧ್ಯವಿಲ್ಲ . ತಜ್ಞರ ಸಲಹೆಯಂತೆ ನಡೆದುಕೊಳ್ಳುತ್ತೇವೆ ಎಂದು ಹೇಳಿದರು.

ಕಾಂಗ್ರೆಸ್‌ ರ್ಯಾಲಿ ಕುರಿತು ಮಾತನಾಡಿದ ಅವರು ಬೆಟ್ಟ ಅಗೆದು ಇಲಿ ಹಿಡಿದ್ರು ಎಂಬಂತಿದೆ  ಕಾಂಗ್ರೆಸ್ ನವರ ಮನಸ್ಥಿತಿ. ರ್ಯಾಲಿಯಲ್ಲಿ ಯಾರು ಮೊದಲಿರಬೇಕು

ಆ ನಂತರ ಯಾರು ಹಿಂದಿರಬೇಕು ಎಂಬ ಮನಸ್ಥಿತಿ  ಅವರಲ್ಲಿತ್ತು. ಇದು ಡಿಕೆಶಿ,ಸಿದ್ದರಾಮಯ್ಯ ಮೇಲಾಟದ ಪಾದಯಾತ್ರೆ. ಹಿಂದೆ ಎಸ್.ಎಂ.ಕೃಷ್ಣರು ಪಾದಯಾತ್ರೆ ಮಾಡಿದ್ರು. ಆಗ ಕೋರ್ಟ್ ಛೀಮಾರಿ ಹಾಕಿತ್ತು ಎಂದ ಅವರು  ಮೇಕೆದಾಟು ಪಾದಯಾತ್ರೆಗೆ  ಟಾಂಗ್ ನೀಡಿದರು.

Continue Reading

ಕರ್ನಾಟಕ

ಗಾಂಧಿ ಕುರಿತು ಸಂದೇಹ, ಪ್ರಶ್ನೆಗಳಿವೆಯೇ ?

Published

on

ಬೆಂಗಳೂರು: ಜನೆವರಿ ೧೭ (ಯು.ಎನ್.ಐ.) ಗಾಂಧಿ ವಿಚಾರ ವೇದಿಕೆಯು ಗಾಂಧೀಜಿ ಅವರ ಕುರಿತ ಎಲ್ಲ ಸಂದೇಹಗಳಿಗೆ ಉತ್ತರ ರೂಪಿಯಾದ ಪುಸ್ತಕವನ್ನು ಪ್ರಕಟಿಸಲು ಯೋಜಿಸಿದ್ದು, ಸಾರ್ವಜನಿಕರಿಂದ ಪ್ರಶ್ನೆಗಳನ್ನು ಆಹ್ವಾನಿಸಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಕೋಟಿಗಳ ಸಂಖ್ಯೆಯಲ್ಲಿ ಗಾಂಧೀಜಿಯ ಬಗ್ಗೆ ಹರಿಯ ಬಿಡುವ ಅಪಪ್ರಚಾರಗಳ ಸಂದೇಶಗಳನ್ನು ನೋಡಿದರೆ, ನಮಗೆ ಈಗಾಗಲೆ ಲಕ್ಷಗಳ ಸಂಖ್ಯೆಗಳಲ್ಲಿ ಪ್ರಶ್ನೆಗಳು ಬರಬೇಕಾಗಿತ್ತು. ಆದರೆ ಕೇವಲ ಮೂರು ಪ್ರಶ್ನೆಗಳು ಬಂದಿವೆ.

ಪೂನಾ ಒಪ್ಪಂದದ ಪ್ರಶ್ನೆ ಇಲ್ಲ. ಗಾಂಧಿ ಬೂರ್ಜ್ವಾ ಬಂಡವಾಳಶಾಹಿ ಎಂಬ ಪ್ರಶ್ನೆ ಇಲ್ಲ. ಯಾವನೊ ಆಸ್ಟ್ರೇಲಿಯಾದ ನಟನು ನಟಿಯೊಂದಿಗೆ ಮಾಡುವ ನೃತ್ಯದ ಫೊಟೊ ಹಾಕ್ಕೊಂಡು ಇದೇ ಗಾಂಧಿ ಎನ್ನುವ ಪ್ರಶ್ನೆ ಇಲ್ಲ. ಅಂದರೆ ಸಂದೇಹಗಳನ್ನು ಹರಿಯಬಿಡುವವರಿಗೆ ತಾವು ಸುಳ್ಳು ಹೇಳುತ್ತಿದ್ದೇವೆ ಎಂದು ಗೊತ್ತಿದ್ದು ಇದನ್ನು ಮಾಡುತ್ತಿದ್ದಾರೆ ಎಂದು ಅರ್ಥ. ಆದ್ದರಿಂದಲೇ ಅಧಿಕೃತವಾಗಿ ತಮ್ಮ ಹೆಸರಿನಲ್ಲಿ ಪ್ರಶ್ನೆ ಪ್ರಕಟವಾಗಿ, ಸಾಕ್ಷಿ ಸಹಿತ ಉತ್ತರ ಕೊಡುತ್ತಾರೆ ಮತ್ತು ಅದನ್ನು ಸಾರ್ವಕಾಲಿಕ ದಾಖಲೆಯಾಗಿ ಮಾಡಲಾಗುತ್ತದೆ ಎಂದು ಗೊತ್ತಾದಾಗ ಪ್ರಶ್ನೆಯೇ ಇಲ್ಲ ಎಂದು ಅರ್ಥವಲ್ಲವೆ?

ಪ್ರಶ್ನೆಗಳು ಬಾರದಿದ್ದರೆ ಚಿಂತೆಯಿಲ್ಲ. ಒಂದು ಸಲ ಸಾಮಾಜಿಕ ಜಾಲತಾಣಕ್ಕೆ ಇಣುಕಿದರೆ ಈಗಾಗಲೇ ಹರಿಯಬಿಡಲಾಗಿರುವ ಸಂಗತಿಗಳು ಅಲ್ಲಿವೆ. ತನಗನಿಸಿದ್ದನ್ನು ಸಾರ್ವಜನಿಕವಾಗಿ ಹೇಳಿದ ಮೇಲೆ ಮುಗಿಯಿತು;ಅದು ಸಾರ್ವಜನಿಕ ಸ್ವತ್ತು. ಅಲ್ಲಿಂದಲೇ ನೇರವಾಗಿ ಪ್ರಶ್ನೆಗಳನ್ನು ಸಂಗ್ರಹಿಸುತ್ತೇವೆ ಎಂದು ಹೇಳಲಾಗಿದೆ.

ಆದರೆ, ಪ್ರಶ್ನೆಗಳನ್ನು ಕೊಡದೆ ಇದ್ದರೂ ಈ ಪುಸ್ತಕ ಮಾಡುತ್ತಿರುವ ಬಗ್ಗೆ ಅಸಹನೆಯ ಪ್ರಚಾರಗಳಿವೆ. ಅಂದರೆ ಸುಳ್ಳು ಪ್ರಚಾರಗಳ ಮೂಲಕ ಜನರ ಮನಸ್ಸನ್ನು ಕೆಡಿಸುವುದು ನಡೆಯುವಾಗ ಸಮಾಜದ ವಿವೇಕವಂತ ವರ್ಗ ಅಸಹಾಯಕವಾಗಿ ಮೌನ ವಹಿಸಿ ಕೂರಬೇಕೆಂದು ಅದರ ಅರ್ಥ ಅಲ್ಲವೆ?

ಇನ್ನೂ ಸಾಕಷ್ಟು ಸಮಯವಿದೆ. ಗಾಂಧೀಜಿಯ ಮೇಲಣ ಯಾವುದೆ ಸಂದೇಹಗಳನ್ನು ಕೇಳಿ ಎಂದು ನಿಮ್ಮ ಸಂದೇಹಗಳನ್ನು ಆಹ್ವಾನಿಸುತ್ತಿದ್ದೇವೆ. ನಿಮ್ಮ ಪ್ರಶ್ನೆಗಳನ್ನು ನಿಮ್ಮ ಹೆಸರು, ಊರು, ಮೊಬೈಲ್ ನಂಬರ್ ಸಹಿತ mghegde04@gmail.com ಗೆ ಕಳಿಸಿ ಎಂದು ತಿಳಿಸಲಾಗಿದೆ.

Continue Reading
Advertisement
ಕರ್ನಾಟಕ4 mins ago

ಪಿಎಂಎಫ್ಎಂಇ ಯೋಜನೆಗೆ ಶೇ.15 ರಷ್ಟು ರಾಜ್ಯದಿಂದ ಹೆಚ್ಚುವರಿ ಸಹಾಯಧನ

ಬೆಂಗಳೂರು: ಜನೆವರಿ 17 (ಯು.ಎನ್.ಐ.)ರೈತರಿಗೆ ಬಲತುಂಬಲು ರಾಜ್ಯ ಸರ್ಕಾರ ಕೇಂದ್ರದ ಆತ್ಮ ನಿರ್ಭರ ಭಾರತ ಅಭಿಯಾನ (ಪಿಎಂಎಫ್ಎಂಇ) ಯೋಜನೆಗೆ ಸಹಾಯಧನವನ್ನು ಹೆಚ್ಚಿಸಿ ಆದೇಶ ಹೊರಡಿಸಿದೆ. ಪಿಎಂಎಫ್ಎಂಇ ಯೋಜನೆಗೆ...

ಬೆಂಗಳೂರು21 mins ago

ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಗೆ ಕೋವಿಡ್

ಬೆಂಗಳೂರು, ಜ ೧೭(ಯುಎನ್ ಐ) ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಕಳೆದ ನಾಲ್ಕೈದು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆಆರ್ ಟಿ...

ದೇಶ35 mins ago

ಉಪಯುಕ್ತ ಮಾಹಿತಿ ; 5 ಸಾವಿರ ಅಲ್ಲ, ಕೇವಲ ₹260 ರಲ್ಲಿ ಒಮೈಕ್ರಾನ್ ಪತ್ತೆ ಹಚ್ಚಿ!

ಬೆಂಗಳೂರು : ಜನೆವರಿ 17 (ಯು.ಎನ್.ಐ.) ಪ್ರತಿ ದಿನ ಒಮೈಕ್ರಾನ್ ಸೋಂಕು ದೇಶದಲ್ಲಿ ವೇಗವಾಗಿ ಹರಡಲಾರಂಭಿಸಿದೆ. ಕೊರೊನಾ ರೂಪಾಂತರಗಳಿಗಿಂತ ಒಮೈಕ್ರಾನ್ ಹೆಚ್ಚು ಸಾಂಕ್ರಾಮಿಕವಾಗಿದ್ದು, ಜೀನೋಮ್ ಸೀಕ್ವೆನ್ಸಿಂಗ್ ಟೆಸ್ಟ್‌ನೊಂದಿಗೆ...

ದೇಶ36 mins ago

ಐಐಟಿ ಬಾಂಬೆಯ ವಿದ್ಯಾರ್ಥಿ ಆತ್ಮಹತ್ಯೆ

ಮುಂಬೈ: ಜನೆವರಿ 17  (ಯು.ಎನ್.ಐ.) ಐಐಟಿ ಬಾಂಬೆಯ ವಿದ್ಯಾರ್ಥಿ ಸೋಮವಾರ ಮುಂಜಾನೆ ಇಲ್ಲಿನ ಪೊವೈ ಕ್ಯಾಂಪಸ್ ನಲ್ಲಿರುವ ತನ್ನ ಹಾಸ್ಟೆಲಿನ ಟೆರೇಸ್‌ನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ...

ಕರ್ನಾಟಕ1 hour ago

ಕೋವಿಡ್‌ ಸೋಂಕು ಹೆಚ್ಚು; ಸಾವು ಕಡಿಮೆ:‌ ಸಚಿವ ಅಶೋಕ್

ಬೆಂಗಳೂರು: ಜನೆವರಿ ೧೭ (ಯು.ಎನ್.ಐ.) ರಾಜ್ಯದಲ್ಲಿ ಕೋವಿಡ್‌ ಸೋಂಕಿನ ಪ್ರಮಾಣ ಹೆಚ್ಚಾಗಿದೆ.  ಸಾವಿನ ಪ್ರಮಾಣ ಗಣನೀಯವಾಗಿ ಕಡಿಮೆ ಇದೆ ಎಂದು ಕಂದಾಯ ಸಚಿವ ಆರ್.‌ ಅಶೋಕ್‌ ತಿಳಿಸಿದರು....

ಆರೋಗ್ಯ1 hour ago

ದೇಶದಲ್ಲಿ ಕಳೆದ ೨೪ ಗಂಟೆಗಳಲ್ಲಿ ೨ ಲಕ್ಷ ೫೮ ಸಾವಿರ ಕೋವಿಡ್ ಪ್ರಕರಣ

ನವದೆಹಲಿ,ಜ ೧೭(ಯು ಎನ್ ಐ)ದೇಶದಲ್ಲಿ ಈವರೆಗೆ ೮ ಸಾವಿರದ ೨೦೯ ಕೋವಿಡ್-೧೯ ರೂಪಾಂತರಿ ಒಮಿಕ್ರಾನ್ ಸೋಂಕು ಪ್ರಕರಣಗಳು ವರದಿಯಾಗಿವೆ. ನಿನ್ನೆ ಒಂದೇ ದಿನ ಶೇಕಡ ೬ರಷ್ಟು ಪ್ರಕರಣಗಳು...

ಕರ್ನಾಟಕ1 hour ago

ಗಾಂಧಿ ಕುರಿತು ಸಂದೇಹ, ಪ್ರಶ್ನೆಗಳಿವೆಯೇ ?

ಬೆಂಗಳೂರು: ಜನೆವರಿ ೧೭ (ಯು.ಎನ್.ಐ.) ಗಾಂಧಿ ವಿಚಾರ ವೇದಿಕೆಯು ಗಾಂಧೀಜಿ ಅವರ ಕುರಿತ ಎಲ್ಲ ಸಂದೇಹಗಳಿಗೆ ಉತ್ತರ ರೂಪಿಯಾದ ಪುಸ್ತಕವನ್ನು ಪ್ರಕಟಿಸಲು ಯೋಜಿಸಿದ್ದು, ಸಾರ್ವಜನಿಕರಿಂದ ಪ್ರಶ್ನೆಗಳನ್ನು ಆಹ್ವಾನಿಸಿದೆ....

ವಾಣಿಜ್ಯ1 hour ago

ವಿಶ್ವ ಆರ್ಥಿಕ ವೇದಿಕೆಯ ದಾವೂಸ್ ಸಭೆಯಲ್ಲಿಂದು ರಾತ್ರಿ ಪ್ರಧಾನಿ ಮೋದಿ ಭಾಷಣ

ನವದೆಹಲಿ, ಜ ೧೭(ಯುಎನ್ ಐ) ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ರಾತ್ರಿ ೮.೩೦ಕ್ಕೆ ವಿಶ್ವ ಆರ್ಥಿಕ ವೇದಿಕೆಯ ದಾವೋಸ್ ಸಭೆಯಲ್ಲಿ ’ಜಗತ್ತಿನ ಸ್ಥಿತಿಗತಿ’ ಕುರಿತು ವಿಶೇಷ...

ಕರ್ನಾಟಕ1 hour ago

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ 7 ಪ್ರಯಾಣಿಕರಿಗೆ ಕೋವಿಡ್

ಬೆಂಗಳೂರು : ಜನೆವರಿ 17 (ಯು.ಎನ್.ಐ.) ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ 7 ಪ್ರಯಾಣಿಕರಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡಿದೆ. ಕಳೆದ 24 ಗಂಟೆಯಲ್ಲಿ ರಾಜಧಾನಿ ಬೆಂಗಳೂರಿನಲ್ಲಿ...

ಕರ್ನಾಟಕ2 hours ago

ಇಂದು ಮಣಿಪಾಲ್‌ ಆಸ್ಪತ್ರೆಗೆ ತೆರಳಲಿರುವ ಸಿಎಂ

ಬೆಂಗಳೂರು: ಜನೆವರಿ ೧೭ (ಯು.ಎನ್.ಐ.) ಕೋವಿಡ್‌ ೧೯ ಸೋಂಕಿಗೆ ಒಳಗಾಗಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನಗರದ ಮಣಿಪಾಲ್‌ ಆಸ್ಪತ್ರೆಗೆ ಪರೀಕ್ಷೆಗಾಗಿ ತೆರಳಲಿದ್ದಾರೆ. ಇಂದು ಮಧ್ಯಾಹ್ನದ...

ಟ್ರೆಂಡಿಂಗ್

Share