Connect with us


      
ಅಪರಾಧ

ಕೊಹ್ಲಿ ಮಗಳಿಗೆ ಅತ್ಯಾಚಾರದ ಬೆದರಿಕೆ: ಆರೋಪಿ ಬಂಧಿಸಿದ ಮುಂಬೈ ಪೊಲೀಸರು

Bindushree Hosuru

Published

on

ಮುಂಬೈ: ನ. 10 (ಯುಎನ್ಐ) ಟ್ವಿಟರ್‌ನಲ್ಲಿ ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಅವರ ಅಪ್ರಾಪ್ತ ಮಗಳಿಗೆ ಅತ್ಯಾಚಾರ ಬೆದರಿಕೆ ಹಾಕಿದ್ದ, ಹೈದರಾಬಾದ್‌ನ 23 ವರ್ಷದ ಯುವಕನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.

ರಾಮನಾಗೇಶ್ ಶ್ರೀನಿವಾಸ್ ಅಕುಬತಿನಿ ಆರೋಪಿಯಾಗಿದ್ದಾನೆ. ಈತನನ್ನು ಮುಂಬೈ ಪೊಲೀಸರ ಸೈಬರ್ ಸೆಲ್ ಬುಧವಾರ ವಶಕ್ಕೆ ಪಡೆದಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ ಆರೋಪಿಯು ಬಿ-ಟೆಕ್ ಪದವೀಧರನಾಗಿದ್ದು, ಫುಡ್​ ಡೆಲಿವರಿ ಆ್ಯಪ್​ಗೆ ಕೆಲಸ ಮಾಡುತ್ತಿದ್ದ. ಈತನನ್ನು ಮುಂಬೈಗೆ ಕರೆತರಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ಕೋರಿ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.

ಟಿ-20 ವಿಶ್ವಕಪ್‌ನಲ್ಲಿ ಭಾರತದ ಕ್ರಿಕೆಟ್ ತಂಡ ಪಾಕಿಸ್ತಾನ ವಿರುದ್ಧ ಸೋತ ನಂತರ ಆರೋಪಿಯೂ ಟ್ವಿಟರ್‌ನಲ್ಲಿ ಕೊಹ್ಲಿ ಮಗಳಿಗೆ ಅತ್ಯಾಚಾರದ ಬೆದರಿಕೆ ಹಾಕಿದ್ದ. ಅಷ್ಟೇ ಅಲ್ಲದೇ ಈ ಪಂದ್ಯದ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಶಮಿ ವಿರುದ್ದ ಕೂಡ ಕಿಡಿಗೇಡಿಗಳು ಸೋಷಿಯಲ್ ಮೀಡಿಯಾದಲ್ಲಿ ಕೋಮು ದಾಳಿ ನಡೆಸಿದ್ದರು.

Share