Connect with us


      
ಬೆಂಗಳೂರು

ಹಣಮಂತ ನಿರಾಣಿಗೆ ಶುಭಾಶಯ ತಿಳಿಸಿದ ಮುರುಗೇಶ್ ನಿರಾಣಿ

Vanitha Jain

Published

on

ಬೆಂಗಳೂರು: ಜುಲೈ 06 (ಯು.ಎನ್.ಐ.) ಇತ್ತೀಚಿಗೆ ನಡೆದ ರಾಜ್ಯ ವಿಧಾನಪರಿಷತ್ ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಆಯ್ಕೆಯಾದ ನೂತನ ಸದಸ್ಯರು ಇಂದು ಪ್ರಮಾಣವಚನ ಸ್ವೀಕರಿಸಿದರು.

ಬೆಂಗಳೂರಿನಲ್ಲಿಂದು ವಾಯುವ್ಯ ಪದವೀಧರ ಮತಕ್ಷೇತ್ರದ ಶಾಸಕರಾಗಿ ಹಣಮಂತ ಆರ್ ನಿರಾಣಿ ಪ್ರಮಾಣ ವಚನ ಸ್ವೀಕರಿಸಿದ್ದು, ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರು ಕೂ ನಲ್ಲಿ ಸಂತಸ ಹಂಚಿಕೊಂಡಿದ್ದಾರೆ.

ಬೆಂಗಳೂರಿನಲ್ಲಿಂದು ವಾಯುವ್ಯ ಪದವೀಧರ ಮತಕ್ಷೇತ್ರದ ಶಾಸಕರಾಗಿ ನನ್ನ ಸಹೋದರ ಶ್ರೀ ಹಣಮಂತ ಆರ್ ನಿರಾಣಿ ಅವರಿಗೆ ನನ್ನ ಅಭಿನಂದನೆಗಳು. ನಮ್ಮ ಮೋದಿಜಿಯವರ ದೃಷ್ಟಿಕೋನದಂತೆ ಜನಪರ ಹಾಗೂ ಅಭಿವೃದ್ಧಿ ಕೆಲಸಗಳನ್ನು ಮಾಡಲಿ ಎಂದು ಈ ವೇಳೆ ನಾನು ಶುಭ ಹಾರೈಸುತ್ತೇನೆ ಎಂದು ಹೇಳಿದ್ದಾರೆ.

ಪ್ರಮಾಣ ವಚನ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ವಿರೋಧ ಪಕ್ಷದ ನಾಯಕರು ಉಪಸ್ಥಿತರಿದ್ದರು.

Share