Connect with us


      
ಕರ್ನಾಟಕ

ಸಂಪುಟ ಪುನಾರಚನೆ: ಕುತೂಹಲ ಮೂಡಿಸಿದ ವಿಜಯೇಂದ್ರ ನಡ್ಡಾ ಭೇಟಿ

Iranna Anchatageri

Published

on

ಬೆಂಗಳೂರು: ಮಾರ್ಚ್ 08 (ಯು.ಎನ್.ಐ.) ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಹೊರಬೀಳುವ ಮುನ್ನವೇ ರಾಜ್ಯ ಬಿಜೆಪಿ ಉಪಾಧ್ಯಕ್ಷ ಹಾಗೂ ಮಾಜಿ ಸಿಎಂ ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.

ಇಂದು ನವದೆಹಲಿಯ ಬಿಜೆಪಿ ಕಚೇರಿಯಲ್ಲಿ ಜೆ.ಪಿ. ನಡ್ಡಾ ಅವರೊಂದಿಗೆ ಸುಮಾರು ಅರ್ಧ ಗಂಟೆಗಳ ಕಾಲ ಚರ್ಚೆ ನಡೆಸಿದ್ದು, ರಾಜ್ಯ ರಾಜಕೀಯ ವಲಯದಲ್ಲಿ ಸಾಕಷ್ಟು ಕುತೂಹಲ ಮೂಡಿಸಿದೆ. ಉತ್ತರ ಪ್ರದೇಶ ಸೇರಿದಂತೆ ಪಂಚರಾಜ್ಯಗಳ ಚುನಾವಣಾ ಫಲಿತಾಂಶದ ನಂತರ ರಾಜ್ಯ ಸಚಿವ ಸಂಪುಟ ಪುನಾರಚನೆಗೆ ಬಿಜೆಪಿ ಹೈಕಮಾಂಡ್ ಅನುಮತಿ ನೀಡುವ ಸಾಧ್ಯತೆ ಇದೆ ಎಂಬ ಮಾತುಗಳು ಕೇಳಿ ಬರುತ್ತಿದ್ದು, ಈ ಸಂದರ್ಭದಲ್ಲಿ ವಿಜಯೇಂದ್ರ ಭೇಟಿ ಮಾಡಿರುವುದು ಚರ್ಚೆಗೆ ಗ್ರಾಸವಾಗಿದೆ.

ಈ ಬಾರಿ ಸಂಪುಟ ಪುನಾರಚನೆಯಾದರೆ ಹೇಗಾದರೂ ಮಾಡಿ ವಿಜಯೇಂದ್ರ ಅವರನ್ನು ಸಂಪುಟಕ್ಕೆ ಸೇರಿಸಬೇಕೆಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮೇಲೆ ನಿರಂತರ ಒತ್ತಡ ಹೇರುತ್ತಿದ್ದಾರೆ ಎನ್ನಲಾಗಿದ್ದು, ಮುಖ್ಯಮಂತ್ರಿಗಳು ಹೈಕಮಾಂಡ್ ಅನುಮತಿ ನೀಡಿದರೆ ತಮ್ಮದೇನು ಅಭ್ಯಂತರವಿಲ್ಲ ಎಂಬ ಅಭಿಪ್ರಾಯ ನೀಡಿದ್ದಾರೆ ಎನ್ನಲಾಗಿದ್ದು, ಈ ಹಿನ್ನೆಲೆಯಲ್ಲಿ ವಿಜಯೇಂದ್ರ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರೊಂದಿಗೆ ಚರ್ಚಿಸಿದ್ದಾರೆ ಎಂದು ಹೇಳಲಾಗುತ್ತಿದೆ.

Share