Connect with us


      
ಸಿನೆಮಾ

ನಾಗಚೈತನ್ಯ, ಸಮಂತಾ ವಿಚ್ಛೇದನಕ್ಕೆ ನಟ ನಾಗಾರ್ಜುನ ಕೊಟ್ಟ ಕಾರಣ ಏನು?

Vanitha Jain

Published

on

ನಾಗಚೈತನ್ಯ, ಸಮಂತಾ ವಿಚ್ಛೇದನಕ್ಕೆ ನಟ ನಾಗಾರ್ಜುನ ಕೊಟ್ಟ ಕಾರಣ ಏನು?

ಹೈದರಾಬಾದ್: ಜನೆವರಿ 27 (ಯು.ಎನ್.ಐ.) ಟಾಲಿವುಡ್ ಸ್ಟಾರ್ ಗಳಾದ ನಾಗಚೈತನ್ಯ ಮತ್ತು ಸಮಂತಾ ರುತ್ ಪ್ರಭು 2021ರಲ್ಲಿ ವಿಚ್ಛೇದನ ಘೋಷಿಸಿದರು. ಅಂದಿನಿಂದ ಇಮದಿನವರೆಗೆ ಅವರ ನಡುವಿನ ಪ್ರತ್ಯೇಕತೆಗೆ ಕಾರಣ ಏನು ಎಂಬುದು ಇಬ್ಬರು ಮಾತನಾಡಿಲ್ಲ. ನಾಗಚೈತನ್ಯ ಬಂಗಾರರಾಜು ಸಿನಿಮಾ ಬಿಡುಗಡೆಯಾದ ಸಂತಸದಲ್ಲಿದ್ದರೆ, ಸಮಂತಾ ಪುಷ್ಪ ಸಿನಿಮಾದ ಯಶಸ್ಸಿನಲ್ಲಿ ಬೀಗುತ್ತಾ ಇಬ್ಬರು ಬೇರೆ ಬೇರೆ ಪ್ರಾಜೆಕ್ಟ್ ಗಳಲ್ಲಿ ಬ್ಯುಸಿಯಾಗಿದ್ದಾರೆ.

ಇದೀಗ ನಾಗಚೈತನ್ಯ ಅವರ ತಂದೆ, ಸಮಂತಾ ಅವರ ಮಾವ, ನಾಗಾರ್ಜುನ ಇವರಿಬ್ಬರ ವಿಚ್ಛೇದನದ ಬಗ್ಗೆ ಮೊದಲ ಬಾರಿಗೆ ಮಾತನಾಡಿದ್ದಾರೆ. ೨೦೨೧ರ ನಂತರ ಅವರ ವಿವಾಹ ಜೀವನದಲ್ಲಿ ಮೊದಲು ಇದ್ಧಷ್ಟು ಸಾಮರಸ್ಯ ಇರಲಿಲ್ಲ. ೨೦೨೧ ರ ನಂತರ ಅವರ ದಾಂಪತ್ಯ ಜೀವನದಲ್ಲಿ ಸಮಸ್ಯೆಗಳು ಪ್ರಾರಂಭವಾದವು. ಮೊದಲು ಸಮಂತಾ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದರು. ಇದನ್ನು ನಾಗ ಚೈತನ್ಯ ಒಪ್ಪಿಕೊಂಡರು ಎಂದು ಹೇಳಿದ್ದಾರೆ.

ಆದರೆ ನಾಗಚೈತನ್ಯ ನನ್ನ ಬಗ್ಗೆ ತುಂಬಾ ಚಿಂತಾಕ್ರಾಂತರಾಗಿದ್ದರು. ನಾನು ಏನು ಯೊಚಿಸುತ್ತೇನೆ, ಕುಟುಂಬದ ಖ್ಯಾತಿಗೆ ತೊಂದರೆಯಾಗುತ್ತಿದೆಯೇ ಎಂದು ಆಲೋಚಿಸಿದ್ದರು. ನಾನು ತುಂಬಾ ಚಿಂತೆ ಮಾಡುತ್ತೇನೆ ಎಂಬ ಕಾರಣಕ್ಕೆ ನನಗೆ ಸಾಂತ್ವಾನವನ್ನು ಹೇಳಿದ್ದರು. ದಾಂಪತ್ಯ ಜೀವನದಲ್ಲಿ ಅವರಿಬ್ಬರೂ 4 ವರ್ಷಗಳಿಂದ ಒಟ್ಟಿಗೆ ಇದ್ದಾರೆ ಆದರೆ ಅಂತಹ ಯಾವುದೇ ಸಮಸ್ಯೆ ಅವರ ನಡುವೆ ಬಂದಿಲ್ಲ. ಇಬ್ಬರೂ ತುಂಬಾ ಆತ್ಮೀಯರಾಗಿದ್ದರು ಮತ್ತು ಅದು ಹೇಗೆ ಇವರಿಬ್ಬರು ಈ ನಿರ್ಧಾರಕ್ಕೆ ಬಂದರು ಎಂದು ನನಗೆ ತಿಳಿದಿಲ್ಲ. 2021ರ ಹೊಸ ವರ್ಷವನ್ನು ಒಟ್ಟಿಗೆ ಆಚರಿಸಿದರು, ಅದರ ನಂತರ ಸಮಸ್ಯೆಗಳು ಉದ್ಭವಿಸಿವೆ ಎಂದು ತೋರುತ್ತದೆ ನಾಗಾರ್ಜುನ ಹೇಳಿದರು.

Share