Connect with us


      




ಕರ್ನಾಟಕ

ಕ್ರೀಡಾಪಟುಗಳಿಗೆ ವೈಜ್ಞಾನಿಕವಾಗಿ ತರಬೇತಿ ಅಗತ್ಯವಿದೆ: ಸಿಎಂ

Published

on

ಕ್ರೀಡಾಪಟುಗಳಿಗೆ ವೈಜ್ಞಾನಿಕವಾಗಿ ತರಬೇತಿ ಅಗತ್ಯವಿದೆ: ಸಿಎಂ

ಬೆಂಗಳೂರು: ಜನವರಿ 14 (ಯು.ಎಬ್.ಐ.) ಕ್ರೀಡಾಳುಗಳಿಗೆ ವೈಜ್ಞಾನಿಕವಾಗಿ ಮಾರ್ಗದರ್ಶನ ನೀಡುವ ಕೆಲಸವನ್ನು ತರಬೇತುಗೊಂಡಿರುವ ಕೋಚ್ ಗಳು ಮಾಡಬೇಕಾದ ಅಗತ್ಯವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಕಾಮನ್ವೆಲ್ತ್ ಕ್ರೀಡಾಕೂಟದ ಬ್ಯಾಟನ್ ವಿನಿಮಯ ಕಾರ್ಯಕ್ರಮದಲ್ಲಿ ಇಂದು ಆನ್ ಲೈನ್ ಮೂಲಕ ಪಾಲ್ಗೊಂಡು ಅವರು ಮಾತನಾಡಿ ಅತ್ಯುತ್ತಮ ಕೋಚ್ ಗಳ ಮೂಲಕ ಕ್ರೀಡಾ ಪಟುಗಳಿಗೆ ತರಬೇತಿ ನೀಡುವುದು ಅತ್ಯಗತ್ಯ. ಅವರಿಗೆ ಪಠ್ಯಕ್ರಮ ರೂಪಿಸಿ ಅದರಂತೆ ಸೂಕ್ತ ಮಾರ್ಗದರ್ಶನ ನೀಡುವ ಅವಶ್ಯಕತೆ ಇದೆ ಎಂದು ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟರು. ಅಮೃತ ಕ್ರೀಡಾ ಯೋಜನೆಯ ಗುರಿ ಈಡೇರಿಸಲು ಸರ್ಕಾರ ಅಗತ್ಯ ನೆರವು ನೀಡಲು ಬದ್ಧವಾಗಿದೆ ಎಂದು ಹೇಳಿದರು.

72 ದೇಶಗಳ ಒಕ್ಕೂಟ ರಚನೆಯಾಗಿ ಹಲವಾರು ವಿಚಾರಗಳ ವಿನಿಮಯಕ್ಕೆ ಕಾಮನ್ವೆಲ್ತ್ ಒಕ್ಕೂಟ ವೇದಿಕೆಯಾಗಿದೆ. ಸಮಾನ ಚಿಂತನೆ ಇರುವ ರಾಷ್ಟ್ರಗಳ ಬಾಂಧವ್ಯ ಗಟ್ಟಿಗೊಳ್ಳಲು, ಅದರಲ್ಲೂ ಯುವಪೀಳಿಗೆಯಲ್ಲಿ ಬಾಂಧವ್ಯ ಮುಂದುವರೆಯಬೇಕೆಂಬ ಉದ್ದೇಶದಿಂದ ಕ್ರೀಡಾಕೂಟಗಳನ್ನು ಆಯೋಜಿಸಲಾಗುತ್ತಿದೆ. ನಾಲ್ಕು ವರ್ಷಕ್ಕೊಮ್ಮೆ ನಡೆಯುವ ಈ ಕ್ರೀಡಾಕೂಟದಲ್ಲಿ ಸುಮಾರು 6 ಸಾವಿರಕ್ಕೂ ಹೆಚ್ಚು ಜನ ಭಾಗವಹಿಸುತ್ತಾರೆ. ಕ್ರೀಡಾಕೂಟದ ಬ್ಯಾಟನ್ ಇಂದು 9000 ಕಿ.ಮೀ ಪಯಣಿಸಿ ಭಾರತಕ್ಕೆ ಆಗಮಿಸಿದೆ. ಭಾರತದ ನಾಲ್ಕು ಮಹಾನಗರಗಳಿಗೆ ಬ್ಯಾಟನ್ ಸ್ವೀಕಾರ ಮಾಡುವ ಅವಕಾಶ ದೊರೆತಿದ್ದು, ಈ ಪೈಕಿ ಬೆಂಗಳೂರು ಕೂಡ ಒಂದು ಎನ್ನುವುದು ಸಂತೋಷದ ಸಂಗತಿ ನಮ್ಮ ಜವಾಬ್ದಾರಿಯನ್ನು ಮುಂದುವರೆಸುವ ಸಂಕೇತವಾಗಿರುವ ಈ ಕಾರ್ಯಕ್ರಮ ಅತ್ಯಂತ ಅರ್ಥಪೂರ್ಣವಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಕ್ರೀಡಾ ಲೋಕಕ್ಕೆ ಹೊಸ ಚಿಂತನೆ ಹಾಗೂ ಆಯಾಮಗಳನ್ನು ನೀಡಿದ್ದಾರೆ. ಖೇಲೋ ಇಂಡಿಯಾ ಪ್ರಾರಂಭಿಸಿ ಹಳ್ಳಿ ಹಳ್ಳಿಗಳಲ್ಲಿ ವ್ಯವಸ್ಥಿತವಾಗಿ ಕ್ರೀಡಾಕೂಟಗಳು ನಡೆಯುತ್ತಿವೆ. ಜೀತೋ ಇಂಡಿಯಾ ಕಾರ್ಯಕ್ರಮ ಕ್ರೀಡಾಳುಗಳಿಗೆ ಬಹು ದೊಡ್ಡ ಸ್ಫೂರ್ತಿ ನೀಡಿದೆ. ಟೋಕಿಯೋ ಒಲಂಪಿಕ್ಸ್ ನಲ್ಲಿ ಅತಿ ಹೆಚ್ಚು ಪದಕಗಳನ್ನು ಗೆಲ್ಲಲು ಭಾರತಕ್ಕೆ ಸಾಧ್ಯವಾಯಿತು.

ಕ್ರೀಡೆಗಳಿಗೆ ಪ್ರೋತ್ಸಾಹ ಅಗತ್ಯವಾಗಿದ್ದು,ಭಾರತ ಸ್ವಾತಂತ್ರ್ಯ ಗಳಿಸಿದ ನಂತರದಲ್ಲಿ ಕ್ರೀಡೆಗಳಿಗೆ ಅತಿ ಹೆಚ್ಚು ಪ್ರೋತ್ಸಾಹ ನೀಡುವ ಕಾರ್ಯಕ್ರಮಗಳನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರೂಪಿಸಿದ್ದಾರೆ. ಕ್ರೀಡಾಪಟುಗಳು ಕ್ರೀಡಾ ಕೂಟಗಳಿಗೆ ತೆರೆಳುವ ಮುನ್ನ ಹಾಗೂ ಬಂದ ನಂತರ ಅವರೊಂದಿಗೆ ಸಮಯ ಕಳೆದು, ಪದಕ ಪಡೆಯದವರಿಗೂ ಸ್ಫೂರ್ತಿ ತುಂಬಿದ್ದಾರೆ. ಅವರ ಈ ನಡೆ ನಮ್ಮೆಲ್ಲರಿಗೂ ಮಾದರಿಯಾಗಿದೆ ಎಂದರು.

ಕರ್ನಾಟಕ ರಾಜ್ಯ ಯುವಜನ ಸಬಲೀಕರಣಕ್ಕೆ ಮಹತ್ವವನ್ನು ನೀಡಿದೆ. ನೂತನ ಯುವ ನೀತಿಯನ್ನು ಸರ್ಕಾರ ಜಾರಿಗೊಳಿಸುತ್ತಿದೆ. ಕರ್ನಾಟಕ ಕ್ರೀಡೆಗೆ ವರದಾನವೆಂಬಂತೆ ಸ್ವತಃ ಕ್ರೀಡಾ ಪಟುವಾಗಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ದೊರೆತಿದ್ದಾರೆ. ಕರ್ನಾಟಕ ಒಲಂಪಿಕ್ಸ್ ಅಸೋಸಿಯೇಷನ್ ಕ್ರೀಡೆಗಳಿಗೆ ಪ್ರೋತ್ಸಾಹ ನೀಡುತ್ತಾ ಬಂದಿರುವುದು ಶ್ಲಾಘನೀಯ ಎಂದರು.

ಕರ್ನಾಟಕ

ಇಡೀ ವರ್ಷ ಸುಭಾಷ್ ಚಂದ್ರಬೋಸ್ ಜನ್ಮದಿನಾಚರಣೆಗೆ ತೀರ್ಮಾನ: ಸಿಎಂ

Published

on

ಬೆಂಗಳೂರು : ಜನೆವರಿ 23 (ಯು.ಎನ್.ಐ.) ರಾಜ್ಯ ಸರ್ಕಾರದ ವತಿಯಿಂದ ವರ್ಷವಿಡೀ ನೇತಾಜಿ ಸುಭಾಷ್ ಚಂದ್ರಬೋಸ್ ರವರ 125ನೇ ಜನ್ಮ ದಿನಾಚರಣೆಯನ್ನ ಆಚರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.  ಭಾರತದ ಸ್ವತಂತ್ರ್ಯಕ್ಕೆ ಬಹಳ ದೊಡ್ಡ ಬುನಾದಿ ಹಾಕಿಕೊಟ್ಟ ಮಹಾನ್ ನಾಯಕ ನೇತಾಜಿ ಸುಭಾಷ್ ಚಂದ್ರ ಭೋಸ್ ಅವರ 125 ನೇ ಜನ್ಮ ದಿನಾಚರಣೆಯ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ವಿಧಾನಸೌಧ ಆವರಣದಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.

ಬಳಿಕ ಮಾತನಾಡಿದ ಅವರು, ರಾಜ್ಯ ಸರ್ಕಾರದ ವತಿಯಿಂದ ವರ್ಷವಿಡೀ ನೇತಾಜಿ ಅವರ 125ನೇ ಜನ್ಮ ದಿನಾಚರಣೆಯನ್ನ ವಿಚಾರಧಾರೆಯ ಮೂಲಕ, ಚರ್ಚೆಗಳ ಮೂಲಕ, ವಿಮರ್ಶೆಗಳ ಮೂಲಕ ಸ್ಮರಣೆ ಮಾಡುವ ಮೂಲಕ ಆಚರಣೆ ಮಾಡಲಿದ್ದೇವೆ ಎಂದರು.

ದೇಶಕ್ಕೆ ಸ್ವಾತಂತ್ರ್ಯ ತಂದುಕೊಡಲು ಹೋರಾಟ ಮಾಡಿದ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನೋತ್ಸವದ ಅಂಗವಾಗಿ ಮುಖ್ಯಮಂತ್ರಿಗಳು ಪ್ರತಿಜ್ಞಾವಿಧಿ ಬೋಧಿಸಿದರು. ಬ್ರಿಟೀಷರ ವಿರುದ್ದ ಸೈನ್ಯವನ್ನ ಕಟ್ಟಿ ಹೋರಾಟ ಮಾಡಿದ ಅಪ್ರತಿಮ ವೀರ ಸುಭಾಷ್ ಚಂದ್ರಭೋಸ್. ಯುವಕರಿಗೆ ಪ್ರೇರಣೆಕೊಟ್ಟದ್ದು. ನೀವು ನನಗೆ ರಕ್ತ ಕೊಡಿ ನಾನು ನಿಮಗೆ ಸ್ವತಂತ್ರ್ಯಕೊಡಿಸುತ್ತೇನೆ ಎಂದು ಯುವಕರನ್ನ ಉತ್ಸಾಹಿಸಿ ಸೈನ್ಯಕಟ್ಟಿ ಹೋರಾಡಿದ ಸೇನಾನಿ ಎಂದು ಅವರ ಸಾಧನೆಯನ್ನ ಸ್ಮರಿಸಿದರು.

Continue Reading

ಕರ್ನಾಟಕ

ನ್ಯಾಯಮೂರ್ತಿ ಕೆ ಎಲ್. ಮಂಜುನಾಥ್ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ

Published

on

ಬೆಂಗಳೂರು: ಜನವರಿ 23 (ಯು.ಎನ್.ಐ.)  ಕರ್ನಾಟಕ ಹೈಕೋರ್ಟಿನ ನಿವೃತ್ತ ನ್ಯಾಯಮೂರ್ತಿ ಕೆ.ಎಲ್. ಮಂಜುನಾಥ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ.

ನ್ಯಾಯಮೂರ್ತಿ ಮಂಜುನಾಥ್ ಅವರು ಅತ್ಯುತ್ತಮ ವಕೀಲರಾಗಿ, ವಕೀಲರ ಸಂಘದ ಅಧ್ಯಕ್ಷರಾಗಿ, ಹೈಕೋರ್ಟ್ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದ್ದಾರೆ. ರಾಜ್ಯದ ನದಿ ನೀರು ಮತ್ತು ಗಡಿ ವಿವಾದ ಪ್ರಾಧಿಕಾರದ ಅಧ್ಯಕ್ಷರಾಗಿ, ಆಂಧ್ರ ಪ್ರದೇಶದ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಸಲ್ಲಿಸಿದ ಸೇವೆ ಅವಿಸ್ಮರಣೀಯವಾದದ್ದು ಎಂದು ಸಿಎಂ ಮೃತ ಗಣ್ಯರ ಸಾಧನೆಗಳನ್ನು ಸ್ಮರಿಸಿದ್ದಾರೆ.

ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ. ಅವರ ಕುಟುಂಬದವರು ಹಾಗೂ ಹಿತೈಷಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

Continue Reading

ಕರ್ನಾಟಕ

ನಿವೃತ್ತ ಹೈಕೋರ್ಟ್‌ ನ್ಯಾಯಮೂರ್ತಿ ಕೆ.ಎಲ್.‌ ಮಂಜುನಾಥ್‌ ವಿಧಿವಶ

Published

on

By

ಬೆಂಗಳೂರು, ಜ 23 (ಯುಎನ್‌ ಐ) ರಾಜ್ಯ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಕೆ.ಎಲ್.ಮಂಜುನಾಥ್ ಶನಿವಾರ ತಡರಾತ್ರಿ ಹೃದಯಾಘಾತದಿಂದ ನಗರದ ನಿವಾಸದಲ್ಲಿ ವಿಧಿವಶರಾಗಿದ್ದಾರೆ.

ಬೆಂಗಳೂರಿನ ಕಾಮಾಕ್ಷಿಪಾಳ್ಯ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ 12 ಗಂಟೆವರೆಗೆ ಪಾರ್ಥಿವ ಶರೀರದ ಅಂತಿಮ ದರ್ಶನ ಇರಲಿದ್ದು, ಮಧ್ಯಾಹ್ನ 3 ಗಂಟೆಗೆ ನೆಲಮಂಗಲದ ತೋಟದಲ್ಲಿ ಅಂತ್ಯ ಸಂಸ್ಕಾರ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ಹೇಳಿವೆ.

ನ್ಯಾಯಮೂರ್ತಿ ಕೆ.ಎಲ್.ಮಂಜುನಾಥ್ ಅವರು 1974ರ ಸೆ.13 ರಂದು ರಾಜ್ಯ ಹೈಕೋರ್ಟ್‌ ನಲ್ಲಿ ವಕೀಲ ವೃತ್ತಿ ಆರಂಭಿಸಿದ್ದರು. 2000ರ ಡಿ.11 ರಂದು ಕರ್ನಾಟಕ ಹೈಕೋರ್ಟ್‌ ಹೆಚ್ಚುವರಿ ನ್ಯಾಯಮೂರ್ತಿಯಾಗಿ, 2001ರ ಅ. 27 ರಂದು ಖಾಯಂ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದರು

Continue Reading
Advertisement
ದೇಶ6 mins ago

ರಾಷ್ಟ್ರೀಯ ಬಾಲ ಪುರಸ್ಕಾರ್ ಪುರಸ್ಕೃತರೊಂದಿಗೆ ಪ್ರಧಾನಿ ನಾಳೆ ಸಂವಾದ

ನವದೆಹಲಿ, ಜ ೨೩(ಯುಎನ್ ಐ) ಪ್ರಧಾನಿ ನರೇಂದ್ರ ಮೋದಿ ಅವರು ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ್ ಪುರಸ್ಕೃತರೊಂದಿಗೆ ನಾಳೆ ವೀಡಿಯೊ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಲಿದ್ದಾರೆ....

ಅಂಕಣ8 mins ago

ಮಾಯಾಜಾಲದ ಬೆನ್ನು ಹತ್ತಿ

ಅಂಕಣ: ಮುಖಗಳು -೩ ಒಂಬತ್ತನೆ ತರಗತಿ ವಿದ್ಯಾರ್ಥಿ ತಂದೆಯೊಬ್ಬರು ಫೋನ್ ಮಾಡಿದ್ದರು. ‘ಮಗ ಮೊಬೈಲ್ ಕೊಡಿಸು ಎಂದು ಹಠ ಮಾಡುತ್ತಿದ್ದಾನೆ ಏನು ಮಾಡಲಿ?’ ಎಂದು ಕೇಳಿದ್ದರು. ‘ಅವನಿಗೇಕೆ...

ದೇಶ10 mins ago

ಟ್ರೈನ್ ಡ್ರೈವರ್‌ಗೆ ನಿದ್ದೆ ಎಂಬ ಚಿಂತೆ; ಪ್ರಯಾಣಿಕರಿಗೆ ಸುಸ್ತೋ ಸುಸ್ತು..!!

ಶಹಜಹಾನ್ಪುರ್/ಉತ್ತರಪ್ರದೇಶ: ಜನೆವರಿ 23 (ಯು.ಎನ್.ಐ.) “ನನ್ನ ನಿದ್ದೆ ಸಂಪೂರ್ಣವಾಗಿಲ್ಲ. ನಾನು ಸದ್ಯ ರೈಲು ಚಲಾಯಿಸುವುದಿಲ್ಲ.” ಉತ್ತರ ಪ್ರದೇಶದ ಶಹಜಹಾನ್‌ಪುರ ರೈಲು ನಿಲ್ದಾಣದಲ್ಲಿ ಶುಕ್ರವಾರ ಇಂಥದ್ದೊಂದು ವಿಚಿತ್ರ ಘಟನೆ...

ದೇಶ40 mins ago

ಬಂಗಾಳ: ನೇತಾಜಿ ಜನ್ಮದಿನದಂದು ಲಾಠಿ ಚಾರ್ಜ್

ಕೋಲ್ಕತ್ತಾ: ಜನೆವರಿ 23 (ಯು.ಎನ್.ಐ.) ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನದ ಸಂದರ್ಭದಲ್ಲಿಯೂ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮತ್ತು ಟಿಎಂಸಿ ರಾಜಕೀಯ ನಿಂತಿಲ್ಲ. ಪಶ್ಚಿಮ ಬಂಗಾಳದ...

ಅಂಕಣ1 hour ago

ದಟ್ಟ ಕಾಡಿನಲ್ಲಿ ʻಸಪ್ನೋಂ ಕೀ ರಾಣೀʼ

ಅಂಕಣ: ಒಂದೂರಲ್ಲಿ ಒಂದಿನ- 3 ಈ ಒಂದೂರು ಅನ್ನುವ ಮಾಯೆ ಇದೆಯಲ್ಲ, ಅದು ವಿಚಿತ್ರವಾದದ್ದು. ಅಪ್ಪ ಕಥೆ ಹೇಳುವಾಗ ಪ್ರತಿ ಸಲವೂ ಆ ಕಥೆ ಒಂದೂರಿನಲ್ಲಿ ಅಂತಲೇ...

ಕ್ರೀಡೆ2 hours ago

ಅಂಕುಶ್ ರಘುವಂಶಿ ಟೀಂ ಇಂಡಿಯಾದ ಉದಯೋನ್ಮುಖ ತಾರೆ!

ಹೊಸದಿಲ್ಲಿ: ಜನೆವರಿ 23 (ಯು.ಎನ್.ಐ.) ಅಂಡರ್ 19 ವರ್ಲ್ಡ್ ಕಪ್ ಮೂಲಕ ಭಾರತ ಕ್ರಿಕೆಟ್ ತಂಡಕ್ಕೆ ಮತ್ತೊಬ್ಬ ಉದಯೋನ್ಮುಖ ಆಟಗಾರ ದೊರೆತಿದ್ದಾರೆ. ಅವರೇ ದೆಹಲಿ ಮೂಲದ ಅಂಕುಶ್...

ಅಂಕಣ3 hours ago

ಎಳವೆಯಿಂದ ರಂಗಭೂಮಿ

ನಾದಾಂಕಣ – ಡಾ. ನಾ. ದಾಮೋದರ ಶೆಟ್ಟಿ ಭಾರತೀಯ ಹಾಗೂ ಗ್ರೀಕ್‌ ರಂಗಭೂಮಿಗೆ ಬಹುದೊಡ್ಡ ಪರಂಪರೆಇದೆ ಎನ್ನುವುದು ಸಾರ್ವಕಾಲಿಕ ಸತ್ಯ. ಆದರೆ ಯುರೋಪಿನ ರಂಗಭೂಮಿಯಾಗಲೀ ರಷ್ಯಾ, ಅಮೇರಿಕಾ...

ದೇಶ3 hours ago

ಅರುಣಾಚಲದಿಂದ ನಾಪತ್ತೆಯಾಗಿದ್ದ ಯುವಕ ಚೀನಾ ಗಡಿಯಲ್ಲಿ ಪತ್ತೆ!

ಹೊಸದಿಲ್ಲಿ: ಜನೆವರಿ 23 (ಯು.ಎನ್.ಐ.) ಅರುಣಾಚಲ ಪ್ರದೇಶದಿಂದ ನಾಪತ್ತೆಯಾಗಿದ್ದ ಭಾರತೀಯ ಯುವಕ ಚೀನಾ ಗಡಿಯಲ್ಲಿ ಪತ್ತೆಯಾಗಿದ್ದಾನೆ. ಈ ಬಗ್ಗೆ ಚೀನಾ ಸೈನಿಕರು ಭಾರತೀಯ ಯೋಧರಿಗೆ ಮಾಹಿತಿ ನೀಡಿದ್ದು,...

ಹಣಕಾಸು4 hours ago

ಕೆಲಸ ಬದಲಾಯಿಸಿದ್ದೀರಾ? ಚಿಂತೆ ಬಿಡಿ.. ನಿಮ್ಮ ನೆರವಿಗೆ ಇದೆ ಇಪಿಎಫ್ಒ!

ಬೆಂಗಳೂರು: ಜನೆವರಿ 23 (ಯು.ಎನ್.ಐ.) ಉತ್ತಮ ಸಂಬಳ, ಭದ್ರತೆಯುಳ್ಳ ನೌಕರಿ, ವಿಶೇಷ ಸವಲತ್ತುಗಳು.. ಹೀಗೆ ನಾನಾ ಉದ್ದೇಶಗಳಿಂದ ಉದ್ಯೋಗಿಗಳು ತಮ್ಮ ಕೆಲಸವನ್ನು ಬದಲಾಯಿಸುತ್ತಾ ಇರುತ್ತಾರೆ. ಇಂತಹ ಸಂದರ್ಭದಲ್ಲಿ...

ದೇಶ4 hours ago

ನೇತಾಜಿ ಸುಭಾಷ್ ಚಂದ್ರ ಬೋಸ್ ಜಯಂತಿ… ದೇಶಾದ್ಯಂತ ಪರಾಕ್ರಮ ದಿನವಾಗಿ ಆಚರಣೆ

ನವದೆಹಲಿ, ಜ ೨೩( ಯುಎನ್ ಐ) ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ೧೨೫ನೇ ಜನ್ಮಜಯಂತಿ ಇಂದು. ದೇಶಾದ್ಯಂತ ಪರಾಕ್ರಮ ದಿನವಾಗಿ ನೇತಾಜಿ...

ಟ್ರೆಂಡಿಂಗ್

Share