Published
6 months agoon
By
UNI Kannadaನವದೆಹಲಿ, ಜ ೧(ಯುಎನ್ ಐ) – ದೇಶದಲ್ಲಿ ಕಳೆದ ೨೪ ಗಂಟೆಗಳಲ್ಲಿ ೨೨ ಸಾವಿರದ ೭೭೫ ಕೋವಿಡ್ ಪ್ರಕರಣಗಳು ವರದಿಯಾಗಿವೆ. ಪ್ರಸ್ತುತ ದೇಶದಲ್ಲಿ ಒಂದು ಲಕ್ಷ ಸಕ್ರಿಯ ಪ್ರಕರಣಗಳಿವೆ. ಈವರೆಗೆ ದೇಶಾದ್ಯಂತ ೬೭ ಕೋಟಿ ೮೯ ಲಕ್ಷ ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ದೇಶದಲ್ಲಿ ಈವರೆಗೆ ಒಂದು ಸಾವಿರದ ೪೩೧ ಒಮಿಕ್ರಾನ್ ಪ್ರಕರಣಗಳು ಪತ್ತೆಯಾಗಿವೆ. ಈ ಪೈಕಿ ೪೮೮ ರೋಗಿಗಳು ಚೇತರಿಸಿಕೊಂಡಿದ್ದಾರೆ. ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ೪೫೪ ಪ್ರಕರಣಗಳು, ದೆಹಲಿಯಲ್ಲಿ ೩೫೧ ಪ್ರಕರಣಗಳು ವರದಿಯಾಗಿವೆ. ಈವರೆಗೆ ೨೩ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಒಮಿಕ್ರಾನ್ ಪ್ರರಕಣಗಳು ಪತ್ತೆಯಾಗಿವೆ.
ಲಸಿಕೆ ಅಭಿಯಾನದಡಿ ದೇಶಾದ್ಯಂತ ಈವರೆಗೆ ೧೪೫ ಕೋಟಿ ೧೬ ಲಕ್ಷ ಕೋವಿಡ್ ಲಸಿಕೆಗಳನ್ನು ನೀಡಲಾಗಿದೆ. ಕಳೆದ ೨೪ ಗಂಟೆಗಳಲ್ಲಿ ೫೮ ಲಕ್ಷ ೧೧ ಸಾವಿರಕ್ಕೂ ಹೆಚ್ಚು ಲಸಿಕೆಗಳನ್ನು ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಕಳೆದ ೨೪ ಗಂಟೆಗಳಲ್ಲಿ ೮ ಸಾವಿರದ ೯೪೯ ಕೋವಿಡ್ ಸೋಂಕಿತರು ಚೇತರಿಸಿಕೊಂಡಿದ್ದು, ರಾಷ್ಟ್ರೀಯ ಚೇತರಿಕೆ ಪ್ರಮಾಣ ೯೮.೩೨ರಷ್ಟಿದೆ. ದೇಶದಲ್ಲಿ ಈವರೆಗೆ ೩ ಕೋಟಿ ೪೨ ಲಕ್ಷ ೭೫ ಸಾವಿರ ಮಂದಿ ಕೋವಿಡ್ನಿಂದ ಚೇತರಿಸಿಕೊಂಡಿದ್ದಾರೆ