Published
6 months agoon
ಬೆಂಗಳೂರು, ಡಿ 8 (ಯುಎನ್ಐ) ದಕ್ಷಿಣ ಆಫ್ರಿಕಾದಲ್ಲಿ ಹುಟ್ಟಿ ಜಗತ್ತಿನಾದ್ಯಂತ ವೇಗವಾಗಿ ಹರಡುತ್ತಿರುವ ಒಮೈಕ್ರಾನ್ ಬಗ್ಗೆ ವಿಶ್ವದ ರಾಷ್ಟ್ರಗಳು ತೀವ್ರ ಕಳವಳ ವ್ಯಕ್ತಪಡಿಸುತ್ತಿವೆ. ಈ ಹೊಸ ತಳಿಯ ಭೀತಿಯಿಂದಾಗಿ ವಿದೇಶಿ ಪ್ರಯಾಣಿಕರ ಮೇಲೆ ಕೆಲವು ದೇಶಗಳು ತೀವ್ರ ತರಹದ ನಿಗಾ ಇರಿಸಿದ್ದರೆ, ಇನ್ನೂ ಕೆಲವು ರಾಷ್ಟ್ರಗಳು ವಿದೇಶಿ ಪ್ರವಾಸಿಗರ ಭೇಟಿಯನ್ನು ರದ್ದುಪಡಿಸಿದೆ.
ಈ ಮಧ್ಯೆ ಕ್ರಿಸಮಸ್ ಹಾಗೂ ಹೊಸ ವರುಷದ ಆಗಮನವಾಗುತ್ತಿದೆ. ಇದರಿಂದಾಗಿ ಜನರ ಸೇರುವಿಕೆ ಪ್ರಮಾಣ ಅಧಿಕಗೊಳ್ಳಲಿದ್ದು, ರಾಜ್ಯ ಸರ್ಕಾರ ಯಾವ ರೀತಿಯ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳಲಿದೆ ಅನ್ನೋದು ತೀವ್ರ ಕುತೂಹಲ ಕೆರಳಿಸಿದೆ. ಕ್ರಿಸಮಸ್ ಹಾಗೂ ಹೊಸ ವರ್ಷಕ್ಕೆ ರಾಜ್ಯದಲ್ಲಿ ಟಫ್ ರೂಲ್ಸ್ ಜಾರಿಗೆ ತರುವ ವಿಚಾರವನ್ನು ಸುದ್ದಿಗಾರರು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರನ್ನು ಪ್ರಶ್ನೆ ಮಾಡಿದರು.
ಈ ಕುರಿತು ಬೆಂಗಳೂರಿನ ಸದಾಶಿವನಗರದಲ್ಲಿ ಮಾತನಾಡಿದ ಆರೋಗ್ಯ ಸಚಿವ ಡಾ. ಕೆ.ಸುಧಾಕರ್, ಕ್ರಿಸ್ ಮಸ್ ಮತ್ತು ಹೊಸ ವರ್ಷಕ್ಕೆ ಟಫ್ ರೂಲ್ಸ್ ಜಾರಿಗೆ ತರುವ ಬಗ್ಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಚರ್ಚೆ ಮಾಡ್ತಿದ್ದಾರೆ. ಆದಷ್ಟು ಬೇಗ ಸಿಎಂ ಈ ಬಗ್ಗೆ ನಿರ್ಧಾರ ಕೈಗೊಳ್ಳುತ್ತಾರೆ. ನಾಳೆಯೂ ಕೂಡ ಕೋವಿಡ್ ಮುಂಜಾಗ್ರತೆ ಬಗ್ಗೆ ಸಭೆ ಆಯೋಜನೆಗೊಂಡಿದ್ದು, ಈ ಸಭೆಯಲ್ಲೂ ಹೊಸ ವರ್ಷಕ್ಕೆ ಟಫ್ ರೂಲ್ಸ್ ಜಾರಿಗೆ ತರುವ ಬಗ್ಗೆ ಚರ್ಚೆ ಆಗಲಿದೆ. ಆ ನಂತರ ಮುಖ್ಯಮಂತ್ರಿಗಳು ಸೂಕ್ತ ನಿರ್ಧಾರ ಕೈಗೊಳ್ಳಲಾಗುತ್ತದೆ ಅಂತಾ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.