Connect with us


      
ದೇಶ

ದಲಿತ ನಾಯಕ ರೋಹಿತ್ ಮೇಮುಲ ಪ್ರತಿರೋಧದ ಸಂಕೇತ: ರಾಹುಲ್ ಗಾಂಧಿ

Vanitha Jain

Published

on

ದಲಿತ ನಾಯಕ ರೋಹಿತ್ ಮೇಮುಲ ಪ್ರತಿರೋಧದ ಸಂಕೇತ: ರಾಹುಲ್ ಗಾಂಧಿ

ನವದೆಹಲಿ: ಜನೆವರಿ 17 (ಯು.ಎನ್.ಐ.) ದಲಿತ ನಾಯಕ ರೋಹಿತ್ ಮೇಮುಲ ಪ್ರತಿರೋಧದ ನಾಯಕ ಮತ್ತು ಸಂಕೇತ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಭಿಪ್ರಾಯಪಟ್ಟಿದ್ದಾರೆ.

ರೋಹಿತ್ ವೇಮುಲಾ ಅವರ ಪುಣ್ಯತಿಥಿಯಂದು ಸೋಮವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.ರೋಹಿತ್ ವೇಮುಲಾ ಅವರು ದಲಿತರ ನ್ಯಾಯಕ್ಕಾಗಿ ಹಾಗೂ ಅವರ ಮೇಲಿನ ತಾರತಮ್ಯ ವಿರುದ್ಧ ದಿ ಎತ್ತಿದವರರು. ದಲಿತರ ಪರ ಮಾತನಾಡಿದ್ದಕ್ಕಾಗಿ ಹತ್ಯೆ ಮಾಡಲಾಗಿದೆ” ಎಂದು ಅವರು ಟ್ವಿಟರ್ ನಲ್ಲಿ ಹೇಳಿದ್ದಾರೆ.

“ವರ್ಷಗಳು ಕಳೆದರೂ, ರೋಹಿತ್ ವೇಮುಲ ಪ್ರತಿರೋಧದ ಸಂಕೇತವಾಗಿ ಮತ್ತು ಅವನ ಧೈರ್ಯಶಾಲಿ ತಾಯಿಯ ಭರವಸೆಯ ಸಂಕೇತವಾಗಿ ಉಳಿಯುತ್ತಾನೆ. ದಲಿತರ ನ್ಯಾಯಕ್ಕಾಗಿ ಕೊನೆಯವರೆಗೂ ಹೋರಾಡಿದ್ದಕ್ಕಾಗಿ, ರೋಹಿತ್ ನನ್ನ ನಾಯಕ, ಅನ್ಯಾಯಕ್ಕೊಳಗಾದ ನನ್ನ ಸಹೋದರ” ಎಂದು ಗಾಂಧಿ ಹೇಳಿದರು.

ಹೈದರಾಬಾದ್ ವಿಶ್ವವಿದ್ಯಾನಿಲಯದ 26 ವರ್ಷದ ದಲಿತ ವಿದ್ಯಾರ್ಥಿ ವೇಮುಲಾ ಅವರು ಕಿರುಕುಳದ ಆರೋಪದ ಮೇಲೆ ಜನವರಿ 17, 2016 ರಂದು ಆತ್ಮಹತ್ಯೆ ಮಾಡಿಕೊಂಡರು. ಅವರ ಮರಣವು ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತೀಯತೆಯ ವಿರುದ್ಧ ರಾಷ್ಟ್ರವ್ಯಾಪಿ ಆಂದೋಲನವನ್ನು ಪ್ರಚೋದಿಸಿತು.

Share