Published
6 months agoon
By
UNI Kannadaಚಂಡೀಗಢ: ಜನವರಿ 04 (ಯು.ಎನ್.ಐ.) ಕೊರೊನಾ ಹಿನ್ನೆಲೆಯಲ್ಲಿ ದೇಶದ ಹಲವು ರಾಜ್ಯಗಳು ಕಟ್ಟೆಚ್ಚರ ವಹಿಸಿವೆ. ಒಮೈಕ್ರಾನ್ ಹರಡುವಿಕೆ ಹೆಚ್ಚುತ್ತಿರುವ ಕಾರಣ ಪಂಜಾಬ್ ಸರ್ಕಾರ ಇತ್ತೀಚಿಗೆ ಕೆಲವು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.
ರಾಜ್ಯದಲ್ಲಿ ಶಾಲಾ-ಕಾಲೇಜುಗಳನ್ನು ಮುಚ್ಚುವಂತೆ ಆದೇಶ ನೀಡಿದೆ. ಕ್ರೀಡಾ ಮೈದಾನಗಳು, ಈಜುಕೊಳಗಳು ಮತ್ತು ಜಿಮ್ಗಳನ್ನು ಸಹ ಸಂಪೂರ್ಣವಾಗಿ ಮುಚ್ಚಬೇಕು. ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಕರ್ಫ್ಯೂ ಜಾರಿಮಾಡಿದೆ. ಶಿಕ್ಷಣ ಸಂಸ್ಥೆಗಳು ಆನ್ಲೈನ್ನಲ್ಲಿ ತರಗತಿಗಳನ್ನ ಮುಂದುವರಿಸಬಹುದು. ವೈದ್ಯಕೀಯ ಮತ್ತು ನರ್ಸಿಂಗ್ ಕಾಲೇಜುಗಳು ಎಂದಿನಂತೆ ಮುಂದುವರಿಯಲಿವೆ ಎಂದು ಆದೇಶಿಸಿದೆ.
ಸಿನಿಮಾ ಥಿಯೇಟರ್ಗಳು, ಮಲ್ಟಿಪ್ಲೆಕ್ಸ್ಗಳು, ರೆಸ್ಟೋರೆಂಟ್ಗಳು, ಬಾರ್ಗಳು, ಶಾಪಿಂಗ್ ಮಾಲ್ಗಳು, ಸ್ಪಾಗಳು, ಮೃಗಾಲಯಗಳು ಮತ್ತು ಮ್ಯೂಸಿಯಂಗಳನ್ನು ಶೇಕಡಾ 50 ರಷ್ಟು ಸಾಮರ್ಥ್ಯದೊಂದಿಗೆ ನಿರ್ವಹಿಸಬೇಕು ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಕರೋನಾ ಲಸಿಕೆಯ ಎರಡು ಡೋಸ್ ತೆಗೆದುಕೊಂಡ ಸಿಬ್ಬಂದಿಗೆ ಸಾರ್ವಜನಿಕ ಮತ್ತು ಖಾಸಗಿ ಕಚೇರಿಗಳಲ್ಲಿ ಕರ್ತವ್ಯ ನಿರ್ವಹಿಸಲು ಅವಕಾಶ ನೀಡಬೇಕು ಎಂದು ಇತ್ತೀಚಿಗೆ ಬಿಡುಗಡೆ ಮಾಡಿರುವ ಮಾರ್ಗಸೂಚಿ ಈ ತಿಂಗಳ 15 ರವರೆಗೆ ಜಾರಿಯಲ್ಲಿರುತ್ತವೆ ಎಂದು ಹೇಳಿದೆ.
ಆಭರಣ ಅಂಗಡಿಗೆ ನುಗ್ಗಿ ದರೋಡೆ, ಮಾಲೀಕನಿಗೆ ಗುಂಡೇಟು; ಸಿಸಿಕ್ಯಾಮೆರಾದಲ್ಲಿ ಕೃತ್ಯ ಸೆರೆ
ಸಿಧು ಮೂಸೆವಾಲಾರ ಕೊನೆಯ ಹಾಡನ್ನ ಯೂಟ್ಯೂಬ್ ನಿಂದ ತೆಗೆದುಹಾಕಿರೋದೇಕೆ?
ಹಕ್ಕುಗಳನ್ನು ರಕ್ಷಿಸುವುದು ಅಪರಾಧವಲ್ಲ; ತೀಸ್ತಾ ಸೆತಲ್ವಾಡ್ ಪರ ವಿಶ್ವಸಂಸ್ಥೆ ಅಧಿಕಾರಿ ದನಿ
“ರಾಷ್ಟ್ರೀಯ ಭದ್ರತೆಗೆ ಡ್ರಗ್ಸ್ ದೊಡ್ಡ ಸವಾಲು” : ಷಾ
ಸಿಎಂ ಭೇಟಿಯಾಗಲು ಪ್ರವಾಹದ ನೀರಲ್ಲಿ ಪರದಾಡಿದ ಅಸ್ಸಾಂ ಯುವಕ
ಸಿಎಂ ಯೋಗಿ ಆದಿತ್ಯನಾಥ್ ಪ್ರಯಾಣಿಸ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ